10.46 ಲಕ್ಷ ಕೋಟಿ ರೂ. ಕೃಷಿ ಸಾಲ ವಿತರಣೆ
Team Udayavani, Apr 13, 2018, 7:00 AM IST
ಬೆಂಗಳೂರು: ನಬಾರ್ಡ್ 2017-18ನೇ ಸಾಲಿನಲ್ಲಿ ದೇಶಾದ್ಯಂತ 10.46 ಲಕ್ಷ ಕೋಟಿ ರೂ. ಕೃಷಿ ಸಾಲ ನೀಡುವ ಮೂಲಕ ನಿರೀಕ್ಷೆಗೂ ಮೀರಿದ ಗುರಿ ಸಾಧನೆ ಮಾಡಿದೆ ಎಂದು ನಬಾರ್ಡ್ ಅಧ್ಯಕ್ಷ ಡಾ.ಹರೀಶ್ ಕುಮಾರ್ ಬನ್ಸಾಲ್ ಹೇಳಿದ್ದಾರೆ.
ನಗರದಲ್ಲಿ 2017-18ನೇ ಸಾಲಿನ ಫಲಿತಾಂಶ ಪ್ರಕಟಿಸಿ ಮಾತನಾಡಿದ ಅವರು, ಕಳೆದ ಹಣಕಾಸು ವರ್ಷದಲ್ಲಿ 10 ಲಕ್ಷ ಕೋಟಿ ರೂ.ಕೃಷಿ ಸಾಲ ವಿತರಿಸುವ ಗುರಿ ಇತ್ತು. ಆದರೆ,ಫೆ.28ರವರೆಗೆ ಈ ಗುರಿ ಮೀರಿ 10.46 ಲಕ್ಷ ಕೋಟಿ ರೂ. ಕೃಷಿ ಸಾಲ ವಿತರಿಸಲಾಗಿದ್ದು, ಸಾಲ ವಿತರಣೆ ಪ್ರಮಾಣ ನಿರೀಕ್ಷೆ ಮೀರಿ ಹೆಚ್ಚಳ ಕಂಡಿದೆ. ಅವಧಿ ಸಾಲದಡಿ 3.69 ಲಕ್ಷ ಕೋಟಿ ರೂ., ಬೆಳೆ ಸಾಲದಡಿ 6.76 ಲಕ್ಷ ಕೋಟಿ ರೂ. ವಿತರಿಸಲಾಗಿದೆ ಎಂದು ಹೇಳಿದರು.
ಹಾಗೆಯೇ, 1.45 ಲಕ್ಷ ಕೋಟಿ ರೂ. ಪುನರ್‌ಸಾಲ ವಿತರಿಸಲಾಗಿದೆ. ಇದರಲ್ಲಿ 65,240 ಕೋಟಿ ರೂ.ದೀರ್ಘಾವಧಿ ಸಾಲ ಹಾಗೂ 79,821 ಕೋಟಿ ರೂ. ಅಲ್ಪಾವಧಿ ಸಾಲವಿದ್ದು, ಆ ಮೂಲಕ ಪುನರ್‌ಸಾಲ ವಿತರಣೆ ಪ್ರಮಾಣದಲ್ಲಿ ಶೇ.14ರಷ್ಟು ಹೆಚ್ಚಳವಾಗಿದೆ ಎಂದು
ತಿಳಿಸಿದರು.
ಬಂಡವಾಳ ರಚನೆಗೆ ಪೂರಕವಾಗಿ ದೀರ್ಘಕಾಲೀನ ಸಾಲ ಹೆಚ್ಚಳ, ಗ್ರಾಮೀಣ ಹಣಕಾಸು ಸಂಸ್ಥೆಗಳಿಗೆ ಬ್ಯಾಂಕಿಂಗ್ ತಂತ್ರಜ್ಞಾನ ಅಳವಡಿಕೆಗೆ ನೆರವು, ನೀರಾವರಿ ಯೋಜನೆ ವ್ಯಾಪ್ತಿ ವಿಸ್ತರಣೆ, ನೀರಾವರಿ ದಕ್ಷತೆ ಹಾಗೂ ಗ್ರಾಮೀಣ ವಸತಿ ಸೌಲಭ್ಯಗಳನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸುವ ಕಾರ್ಯಕ್ಕೆ ಕಳೆದ ವರ್ಷದಲ್ಲಿ ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.