11 ಮಂದಿ ದರೋಡೆಕೋರರ ಸೆರೆ
Team Udayavani, Jul 6, 2018, 11:56 AM IST
ಬೆಂಗಳೂರು: ಒಂಟಿಯಾಗಿ ನಡೆದುಕೊಂಡು ಹೋಗುವವರನ್ನು ಗುರಿಯಾಗಿಸಿಕೊಂಡು ಮೊಬೈಲ್ ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರು ಮಂದಿ ಕಾನೂನು ಸಂಘರ್ಷಕ್ಕೊಳಗಾದವರು ಸೇರಿ 11 ಮಂದಿಯನ್ನು ಜಯನಗರ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಚಂದ್ರಪ್ಪನಗರದ ಅಬೂಬಕ್ಕರ್ (19), ಮೊಹಮ್ಮದ್ ಹರ್ಷಿಲ್ (20), ಶಿವ (19), ಬನ್ನೇರುಘಟ್ಟದ ಸೈಯದ್ ಮುಜಾಯಿದ್, ಗುರಪ್ಪನಪಾಳ್ಯ ನಿವಾಸಿ ವಾಸಿಂ ಅಕ್ರಮ್ ಹಾಗೂ ಆರು ಮಂದಿ ಕಾನೂನು ಸಂಘರ್ಷಕ್ಕೊಳಗಾದವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 6.30 ಲಕ್ಷ ರೂ. ಮೌಲ್ಯದ 15 ಮೊಬೈಲ್‌ಗಳು ಹಾಗೂ 9 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿದ್ದಾಪುರ, ಜಯನಗರ ಮತ್ತು ಜೆ.ಪಿ.ನಗರ ಠಾಣೆ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇವರಿಂದ ನಗರದ ಇತರೆ ಠಾಣೆಗಳಲ್ಲಿ ದಾಖಲಾಗಿದ್ದ ಮೊಬೈಲ್, ಬೈಕ್ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.
ನಿರ್ಜನ ಪ್ರದೇಶಗಳಲ್ಲಿ ಒಂಟಿಯಾಗಿ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಹೋಗುವವರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ದರೋಡೆ ಮಾಡುತ್ತಿದ್ದರು. ಹಾಗೇ ಒಂಟಿಯಾಗಿ ಕಾರು ಮತ್ತು ಬೈಕ್ ಚಾಲನೆ ಮಾಡಿಕೊಂಡು ಹೋಗುವವರನ್ನು ವಿಳಾಸ ಕೇಳುವ ನೆಪದಲ್ಲಿ ಅಡ್ಡಗಟ್ಟಿ ಮೊಬೈಲ್, ನಗದು ಹಾಗೂ ಇತರೆ ವಸ್ತುಗಳನ್ನು ದರೋಡೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.