12 ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
Team Udayavani, Jan 5, 2018, 6:15 AM IST
ಬೆಂಗಳೂರು: ಅಕ್ರಮ ಆದಾಯ ಗಳಿಕೆ ಆರೋಪ ಸಂಬಂಧ ರಾಜ್ಯದ 12 ಮಂದಿ ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿತು.
ಬಿಬಿಎಂಪಿಯ ಇಬ್ಬರು ಅಧಿಕಾರಿಗಳು, ಬಿಡಿಎ ಓರ್ವ ಎಂಜಿನಿಯರ್, ಬಳ್ಳಾರಿ ಉಪವಿಭಾಗಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 12 ಮಂದಿ ಅಧಿಕಾರಿಗಳು ಎಸಿಬಿ ದಾಳಿಗೆ ಒಳಗಾಗಿದ್ದಾರೆ. ಆರೋಪಿತ ಅಧಿಕಾರಿಗಳಿಗೆ ಸೇರಿದ ಬೆಂಗಳೂರು, ಬಳ್ಳಾರಿ, ಶಿವಮೊಗ್ಗ, ಗದಗ, ರಾಯಚೂರು , ಹಾಸನ, ವಿಜಯಪುರ ನಿವಾಸಗಳು ಹಾಗೂ ಕಚೇರಿಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ದಾಳಿ ಸಂದರ್ಭದಲ್ಲಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳಲ್ಲಿ ಅಕ್ರಮ ಆಸ್ತಿಗೆ ಸಂಬಂಧಿಸಿದ ಆಸ್ತಿಪತ್ರಗಳು,ಲಕ್ಷಾಂತರ ರೂ. ನಗದು, ಚಿನ್ನಾಭರಣದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.
ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳು
1. ಬಿ.ಎಸ್. ಪ್ರಹ್ಲಾದ್, ಸೂಪರಿಂಟೆಂಡೆಂಟ್ ಎಂಜಿನಿಯರ್, ಬಿಬಿಎಂಪಿ ರಸ್ತೆ ಮತ್ತು ಮೂಲಭೂತ ಸೌಕರ್ಯ ವಿಭಾಗ ಬೆಂಗಳೂರು
2. ನರಸಿಂಹಲು, ತೆರಿಗೆ ಮೌಲ್ಯಮಾಪಕರು, ಬಿಬಿಎಂಪಿ ಸಿ.ವಿ. ರಾಮನ್‌ನಗರ ಉಪವಿಭಾಗ, ಬೆಂಗಳೂರು
3. ಆರ್.ವಿ. ಕಾಂತರಾಜು, ಬಿಡಿಎ ನಗರ ಯೋಜನೆ ಉಪನಿರ್ದೇಶಕ, ಬೆಂಗಳೂರು
4. ಎನ್.ಆರ್.ಎಂ. ನಾಗರಾಜನ್ ಕೆಪಿಟಿಸಿಎಲ್ ಸೂಪರಿಂಟೆಂಡೆಂಟ್ ಎಂಜಿನಿಯರ್, ಬೆಂಗಳೂರು
5. ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಬಳ್ಳಾರಿ
6. ಬಿ.ಎಸ್. ಬಾಲನ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಕರ್ನಾಟಕ ನೀರಾವರಿ ನಿಗಮ, ಭದ್ರಾವತಿ
7. ಜೆ.ಸಿ. ಜಗದೀಶಪ್ಪ, ಕೆಪಿಟಿಸಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಹೊನ್ನಾಳಿ
8. ವೆಂಕಟೇಶ್, ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್, ಸಕಲೇಶಪುರ
9. ಅಶೋಕಗೌಡಪ್ಪ ಪಾಟೀಲ, ನರಗುಂದ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ
10. ಸೋಮಪ್ಪ ಟಿ. ಲಮಾಣಿ, ವಿಜಯಪುರ ಜಿಲ್ಲಾ ಪಂಚಾಯ್ತಿ ಎಂಜಿನಿಯರಿಂಗ್ ವಿಭಾಗದ ಶಾಖಾಧೀಕ್ಷ,
11. ರೇಖಾ, ವಾಜರಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ನೆಲಮಂಗಲ ತಾಲ್ಲೂಕು
12. ಅಮರೇಶ ಬೆಂಚಮರಡಿ, ನಗರಸಭೆ ಸ್ಯಾನಿಟರಿ ಇನ್‌ಸ್ಪೆಕ್ಟರ್ ರಾಯಚೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !
Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್ ಹಕ್ಕು ಸಾಧಿಸುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.