ಗಣೇಶ ಹಬ್ಬಕ್ಕೆ 1200 ಹೆಚ್ಚುವರಿ ಬಸ್
Team Udayavani, Sep 8, 2018, 12:14 PM IST
ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 1,200 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ಸೆ.11 ಹಾಗೂ 12ರಂದು ಬೆಂಗಳೂರಿನಿಂದ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಈ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಅದೇ ರೀತಿ, ಸೆ.16ರಂದು ಬೇರೆ ಬೇರೆ ಸ್ಥಳಗಳಿಂದ ಬೆಂಗಳೂರಿಗೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಸಂಚರಿಸಲಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ತೆರಳಲಿವೆ.
ಅದೇ ರೀತಿ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡುತ್ತವೆ. ತಮಿಳುನಾಡು ಮತ್ತು ಆಂಧ್ರಪ್ರದೇಶ/ ತೆಲಂಗಾಣ ಕಡೆಗೆ ಹೋಗುವ ಪ್ರೀಮಿಯಂ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಹೊರಡಲಿವೆ.
ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾದ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸಬೇಕು. ಇ-ಟಿಕೆಟ್ ಬುಕಿಂಗ್‌ಗೆ ವೆಬ್‌ಸೈಟ್: www.ksrtc.in ಮೂಲಕ ಪಡೆಯಬಹುದು. ಜತೆಗೆ 707 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.
ನಾಲ್ವರು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯ್ತಿ ನೀಡಲಾಗುವುದು ಹಾಗೂ ಹೋಗಿಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯ್ತಿ ನೀಡಲಾಗುವುದು. ಅಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.