ಟೆಕ್ಕಿ ಮೇಲೆ ಹಲ್ಲೆ ಪ್ರಕರಣ: 13 ಮಂದಿ ಬಂಧನ
Team Udayavani, Oct 20, 2017, 12:02 PM IST
ಬೆಂಗಳೂರು: ಟೆಕ್ಕಿ ನಂದಿನಿ ಮತ್ತು ಸ್ನೇಹಿತೆ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫಯಾಜ್‌ಖಾನ್ (50), ಮೊಹಮದ್ ಇಜಾರ್ (23), ಮೊಹಮದ್ ಮುಜಾಮಿಲ್ (25), ಸಯ್ಯದ್ ಮುಜೀಬ್ (48), ನಯಾಜ್ ಪಾಷ (21),ನಬೀ (29), ಶೇಖ್ ಏಜಾಜ್ (25), ಜಾವೀದ್ (35), ಸಾಮೀರ್ (32), ಅಶ್ರಫ್ ಉಲ್ಲಾ (33), ಮೌಲ (33), ಶಹಬಾಜ್ (20) ಬಂಧಿತರು.
ಇದೇ ವೇಳೆ ಯಲಹಂಕದ ದೊಡ್ಡಬೆಟ್ಟಹಳ್ಳಿಯಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿಸಲು ತೆರಳಿದ ಹೈಕೋಟ್ ನೇಮಿಸಿದ್ದ ಕಮಿಷನರ್ ಗಳ ಮೇಲೆ ದಾಳಿ ನಡೆಸಿದ 10 ಮಂದಿಯನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಮಾತನಾಡಿ, ಸಾಫ್ಟ್ವೇರ್ ಎಂಜಿನಿಯರ್ ನಂದಿನಿ ಮೇಲೆ ಹಲ್ಲೆ ನಡೆದ ವೇಳೆ ಪೊಲೀಸ್ ಸಿಬ್ಬಂದಿ ಇರಲಿಲ್ಲ.
ಆವಲಹಳ್ಳಿಯ ಟಿಪ್ಪು ವೃತ್ತದಲ್ಲಿ ಗೋವುಗಳನ್ನು ಅಕ್ರಮವಾಗಿ ಕೂಡು ಹಾಕಿದ್ದಾರೆ ಎಂದು ನಂದಿನಿ ಅ.14ರಂದು ದೂರು ನೀಡಿದ್ದರು ಎಂದು ತಿಳಿಸಿದರು. ಠಾಣೆಯಲ್ಲಿದ್ದ ನಂದಿನಿ, ಪೊಲೀಸರ ಕ್ರಮವನ್ನು ಪರೀಕ್ಷಿಸಲು ಗೋವುಗಳನ್ನು ರಕ್ಷಣೆ ಮಾಡಿದ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸುಮಾರು ಒಂದು ಸಾವಿರ ಜನರ ಗುಂಪು ಸ್ಥಳದಲ್ಲಿತ್ತು. ಸ್ಥಳಕ್ಕೆ ಹೋದ ನಂದಿನಿ ಅವರ ಕಾರು, ಪ್ರಯಾಣಿಕ ಆಟೋ ಹಾಗೂ ಮಾಂಸ ಮಾರಾಟ ಮಾಡುವ ಅಂಗಡಿಯ ಛಾವಣಿಗೆ ಡಿಕ್ಕಿ ಹೊಡೆದಿತ್ತು.
ಇದರಿಂದ ಆಕ್ರೋಶಗೊಂಡ ಸ್ಥಳದಲ್ಲಿದ್ದ ಗುಂಪು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದೆ. ಘಟನೆಯಿಂದ ಗಾಬರಿಗೊಂಡು ಪಾರಾರಿಯಾಗಿ ಬಂದಿದ್ದಾರೆ. ಈ ವೇಳೆ ಪೊಲೀಸರು ಇರಲಿಲ್ಲ ಎಂದರು. ಆದರೆ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನಂದಿನಿ, ಘಟನೆ ವೇಳೆ ಪೊಲೀಸರು ಸ್ಥಳದಲ್ಲಿ ದ್ದರು. ಇದಕ್ಕೆ ತಮ್ಮ ಬಳಿ ಸಾûಾÂ ಇರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.