ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

Team Udayavani, Apr 29, 2018, 11:49 AM IST

nyayanga.jpg

ಬೆಂಗಳೂರು: ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಶನಿವಾರ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಮೊಹಮ್ಮದ್‌ ನಲಪಾಡ್‌ ಪರ ವಕೀಲರಾದ ಉಸ್ಮಾನ್‌, ಶನಿವಾರ ಬೆಳಗ್ಗೆ ಅರ್ಜಿ ಸಲ್ಲಿಸಿದ್ದು, ಘಟನೆ ನಡೆದು 70 ದಿನಗಳು ಕಳೆದರೂ ಇದುವರೆಗೂ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಸಿಆರ್‌ಪಿಸಿ 167(2) ಅಡಿಯಲ್ಲಿ ಜಾಮೀನು ಮಂಜೂರು ಮಾಡುವಂತೆ ಅರ್ಜಿಯಲ್ಲಿ ಮನವಿ ಮಾಡಿದರು.

ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಮ್‌ಸುಂದರ್‌, ಇದೊಂದು ಕೊಲೆ ಯತ್ನ ಪ್ರಕರಣ. ಯಾವುದೇ ಪ್ರಕರಣದಲ್ಲಿ ಜಾರ್ಜ್‌ಶೀಟ್‌ ಸಲ್ಲಿಸಲು ಕನಿಷ್ಠ 90 ದಿನಗಳ ಕಾಲಾವಕಾಶ ಇರುತ್ತದೆ. ಅದರಂತೆ, ಈ ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಸಲು ಮೇ 18ರವರೆಗೆ ಅವಕಾಶವಿದೆ. ಆರೋಪಿಗಳು ಈ ಹಿಂದೆ ಸಲ್ಲಿಸಿದ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್‌ ಮತ್ತು ಹೈಕೋರ್ಟ್‌ ವಜಾಗೊಳಿಸಿವೆ. ಹೀಗಾಗಿ ಜಾಮೀನು ಮಂಜೂರು ಮಾಡಬಾರದು ಎಂದು ವಾದಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಮೊಹಮ್ಮದ್‌ ನಲಪಾಡ್‌ಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ಫೆ.17ರ ತಡರಾತ್ರಿ ಯುಬಿ ಸಿಟಿಯ ಫ‌ರ್ಜಿ ಕೆಫೆಯಲ್ಲಿ ವಿದ್ವತ್‌ ಮೇಲೆ ಮೊಹಮ್ಮದ್‌ ನಲಪಾಡ್‌ ಮತ್ತು ಸಹಚರರು ಹಲ್ಲೆ ನಡೆಸಿದ್ದು, ಪರಿಣಾಮ ವಿದ್ವತ್‌ ಮಲ್ಯ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಬಳಿಕ ಮೊಹಮ್ಮದ್‌ ಸೇರಿ 8 ಮಂದಿ ಆರೋಪಿಗಳನ್ನು ಕಬ್ಬನ್‌ಪಾರ್ಕ್‌ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ಸಂಬಂಧ ಜಾಮೀನು ಸಲ್ಲಿಸಿದ್ದ ಆರೋಪಿಗಳ ಅರ್ಜಿಯನ್ನು ಸೆಷನ್ಸ್‌ ಮತ್ತು ಹೈಕೋರ್ಟ್‌ ವಜಾಗೊಳಿಸಿತ್ತು. ಅನಂತರ ಸುಪ್ರೀಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸದೆಯೇ ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ಮೊಹಮ್ಮದ್‌ ನಲಪಾಜ್‌ ಇದೀಗ ಮುಂದಾಗಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.