![Thirthahalli: ಭೀಕರ ರಸ್ತೆ ಅಪಘಾತ… ಮಹಿಳೆ ಸ್ಥಳದಲ್ಲಿಯೇ ಮೃತ್ಯು](https://www.udayavani.com/wp-content/uploads/2025/02/thirtahalli-415x234.jpg)
![Thirthahalli: ಭೀಕರ ರಸ್ತೆ ಅಪಘಾತ… ಮಹಿಳೆ ಸ್ಥಳದಲ್ಲಿಯೇ ಮೃತ್ಯು](https://www.udayavani.com/wp-content/uploads/2025/02/thirtahalli-415x234.jpg)
Team Udayavani, Jan 30, 2025, 10:50 AM IST
ಬೆಂಗಳೂರು: ಪೊಲೀಸರು ವಿವಿಧ ಪ್ರಕರ ಣ ಗಳಲ್ಲಿ ಜಪ್ತಿ ಮಾಡಿ ನಿಲುಗಡೆ ಮಾಡಿದ್ದ ನೂರಾರು ವಾಹನಗಳು ಬೆಂಕಿಗಾಹುತಿ ಯಾಗಿ ರುವ ಘಟನೆ ಶ್ರೀರಾಮಪುರದ ಜಕ್ಕರಾಯನಕೆರೆ ಮೈದಾನದಲ್ಲಿ ಬುಧವಾರ ಸಂಭವಿಸಿದೆ. ಜಕ್ಕರಾಯನಕೆರೆ ಮೈದಾನದಲ್ಲಿ ಬುಧವಾರ ಬೆಳಗ್ಗೆ ಸುಮಾರು 11.30ಕ್ಕೆ ಈ ಅವಘಡ ನಡೆದಿದೆ.
ಘಟನೆಯಲ್ಲಿ ಸುಮಾರು 131 ದ್ವಿಚಕ್ರ ವಾಹನಗಳು, 14 ನಾಲ್ಕು ಚಕ್ರದ ವಾಹನಗಳು ಹಾಗೂ 3 ಆಟೋರಿ ಕ್ಷಾಗಳು ಸುಟ್ಟು ಹೋಗಿವೆ. ಅದೃಷ್ಟವಶಾತ್ ಅವಘಡ ದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು.
ಏನಿದು ಘಟನೆ?: ನಗರದ ಸುಮಾರು 70 ಪೊಲೀಸ್ ಠಾಣೆಗಳ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ ವಾಹನಗಳನ್ನು ಈ ಜಕ್ಕರಾಯನ ಕೆರೆ ಮೈದಾನದಲ್ಲಿ ನಿಲುಗಡೆ ಮಾಡಲಾಗಿತ್ತು. ಈ ಮೈದಾನ ದಲ್ಲಿ ವಿವಿಧ ಮಾದರಿಯ 500ಕ್ಕೂ ಹೆಚ್ಚು ವಾಹನಗಳನ್ನು ನಿಲ್ಲಿಸಲಾಗಿದೆ. ಬುಧವಾರ ಬೆಳಗ್ಗೆ ಸುಮಾರು 11.30ಕ್ಕೆ ಈ ಜಾಗದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, ಕೆಲ ಕ್ಷಣಗಳಲ್ಲೇ ಬೆಂಕಿ ಹೊತ್ತಿಕೊಂಡಿದೆ. ಅದರಿಂದ ಗಾಬರಿಗೊಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ಮೊದಲಿಗೆ 2 ವಾಹನಗಳ ಜತೆ ಸ್ಥಳ್ಕಕೆ ಬಂದ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ಆದರೆ, ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿದ್ದರಿಂದ ಕೂಡಲೇ ಮತ್ತೆ 3 ವಾಹನಗಳನ್ನು ಸ್ಥಳಕ್ಕೆ ಕರೆಸಿಕೊಂಡು ಸುಮಾರು 5 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಉತ್ತರ ವಿಭಾಗದ ಡಿಸಿಪಿ ಸೈದುಲ್ ಅದಾವತ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾರೋ ಬೀಡಿ ಅಥವಾ ಸಿಗರೇಟ್ ಸೇದಿ ಎಸೆದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ. ಆದರೆ, ಅದರಿಂದ ಇಷ್ಟು ದೊಡ್ಡ ಅವಘಢ ಸಂಭವಿಸಲು ಹೇಗೆ ಸಾಧ್ಯ ಎಂಬ ಬಗ್ಗೆ ಅನುಮಾನವಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಈ ಸಂಬಂಧ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರವಷ್ಟೇ ರಾಜಾಜಿನಗರದ ಡಾ.ರಾಜ್‌ಕುಮಾರ್ ರಸ್ತೆಯ ಓಕಿನೋವಾ ಎಲೆಕ್ಟ್ರಿಕ್ ಬೈಕ್ ಶೋ ರೂಮ್‌ನಲ್ಲಿ ಬೆಂಕಿ ಅವಘಡ ಸಂಭವಿಸಿ, ಸುಮಾರು 30 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿದ್ದವು.
ನಗರದಲ್ಲಿ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ ವಾಹನಗಳನ್ನು ಶ್ರೀರಾಮಪುರದ ಜಕ್ಕರಾಯನಕೆರೆ ಮೈದಾನದಲ್ಲಿ ನಿಲುಗಡೆ ಮಾಡಲಾಗಿತ್ತು. ಬೆಳಗ್ಗೆ ದಿಢೀರ್ ಬೆಂಕಿ ಹೊತ್ತಿಕೊಂಡು ನೂರಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ. ಘಟನೆಗೆ ಕಾರಣವೇನು ಎಂದು ಪರಿಶೀಲನೆ ನಡೆಸಲಾಗುತ್ತಿದೆ. –ಸೈದುಲ್ ಅದಾವತ್, ಉತ್ತರ ವಿಭಾಗದ ಡಿಸಿಪಿ
Bengaluru: ಠಾಣೆಗೆ ಸುಳ್ಳು ದೂರು ನೀಡಿದರೆ ಕಾನೂನು ಕ್ರಮ: ಬಿ.ದಯಾನಂದ್
Arrested: ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ: ಮೂವರ ಸೆರೆ
Bengaluru: 10 ವರ್ಷ ತಲೆಮರೆಸಿಕೊಂಡಿದ್ದವ ಎಐ ಕ್ಯಾಮೆರಾದಿಂದಾಗಿ ಸೆರೆಸಿಕ್ಕ!
Arrested: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸು, ಕುರಿ ಕಳವು ಮಾಡಿದ್ದವರ ಬಂಧನ
Fare hike: ಮೆಟ್ರೋ ಕಡೆಗೆ ಮುಖ ಮಾಡದ 1 ಲಕ್ಷ ಪ್ರಯಾಣಿಕರು!!
Thirthahalli: ಭೀಕರ ರಸ್ತೆ ಅಪಘಾತ… ಮಹಿಳೆ ಸ್ಥಳದಲ್ಲಿಯೇ ಮೃತ್ಯು
Belagavi: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ರಸ್ತೆ ಪಾಲು
Bollywood Movie: ಕರಣ್ ಜೋಹರ್ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ
Belekeri: ಬೇಲೆಕೇರಿ ಅದಿರು ನಾಪತ್ತೆ; ಶೀಘ್ರ ತೀರ್ಪು ಪ್ರಕಟ ಸಾಧ್ಯತೆ-ಆರೋಪಿಗಳಿಗೆ ಸಂಕಷ್ಟ
ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ
You seem to have an Ad Blocker on.
To continue reading, please turn it off or whitelist Udayavani.