ಅಲ್ಪಸಂಖ್ಯಾತರಿಗೆ ಶೇ.15ರಷ್ಟು ಅನುದಾನ ಮೀಸಲು
Team Udayavani, Dec 19, 2017, 7:10 AM IST
ಬೆಂಗಳೂರು: ರಾಜ್ಯದ ಬಜೆಟ್‌ನ ಒಟ್ಟು ಯೋಜನಾ ಗಾತ್ರದಲ್ಲಿ ಅಲ್ಪಸಂಖ್ಯಾಕರಿಗೆ ಶೇ.15ರಷ್ಟು ಅನುದಾನವನ್ನು ಮೀಸಲಿಡುವ ಬಗ್ಗೆ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾಕರ ಕಲ್ಯಾಣಕ್ಕೆ ಸಂಬಂಧಿಸಿದ ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರೂ ಆಗಿರುವ ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾಕರ ಆಯೋಗದಿಂದ ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣ ದಲ್ಲಿ ಏರ್ಪಡಿಸಿದ್ದ “ಅಲ್ಪಸಂಖ್ಯಾಕರ ಹಕ್ಕುಗಳ’ ದಿನಾ ಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಟ್ಟು ಯೋಜನಾ ಗಾತ್ರದಲ್ಲಿ ಶೇ.15ರಷ್ಟು ಅನುದಾನವನ್ನು ಅಲ್ಪಸಂಖ್ಯಾಕರ ಸಮುದಾಯಗಳಿಗೆ ಮೀಸಲಿಡಬೇಕು. ಇದರಲ್ಲಿ ಶೇ.10ರಷ್ಟು ಮುಸ್ಲಿಮರಿಗೆ, ಶೇ.5ರಷ್ಟು ಉಳಿದ ಅಲ್ಪಸಂಖ್ಯಾಕ ವರ್ಗಗಳಿಗೆ ನಿಗದಿಪಡಿಸಬೇಕು. ಈ ಹಣ ಉಳಿಕೆಯಾದರೆ, ಮುಂದಿನ ಹಣಕಾಸು ವರ್ಷದಲ್ಲಿ ಅದನ್ನು ಬಳಸಿಕೊಳ್ಳುವ ಅವಕಾಶವಿರಬೇಕು ಎಂದು ಅಲ್ಪಸಂಖ್ಯಾಕರ ಆಯೋಗ ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅದೇ ರೀತಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ಅಲ್ಪಸಂಖ್ಯಾಕರ ವಿರುದ್ಧ ದಾಖಲಾಗುವ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಿಚಾರಣೆಗೆ ಕೈಗೆತ್ತಿಕೊಳ್ಳುವ ಮೊದಲು ಆ ಪ್ರಕರಣಗಳನ್ನು ಕಾನೂನು ರೀತ್ಯಾ ಪರಾಮರ್ಶಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಅರೆನ್ಯಾಯಿಕ ಶಾಸನಾತ್ಮಕ ಪ್ರಾಧಿಕಾರ ರಚಿಸಲು ಮುಂದಿನ ಹದಿನೈದು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ರಾಜ್ಯ ಅಲ್ಪಸಂಖ್ಯಾಕರ ಆಯೋಗಕ್ಕೆ ಅರೆನ್ಯಾಯಿಕ ಸ್ಥಾನಮಾನ ನೀಡಿದ್ದು, ಅದಕ್ಕೆ ನಿಯಮಗಳನ್ನು ಶೀಘ್ರದಲ್ಲೇ ರೂಪಿಸ ಲಾಗುವುದು ಎಂದು ರಮೇಶ್ ಕುಮಾರ್ ತಿಳಿಸಿದರು.
ರಾಜ್ಯದ 14 ಜಿಲ್ಲೆಗಳ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಅಲ್ಪಸಂಖ್ಯಾಕರ ಪ್ರಾತಿನಿಧ್ಯ ಇಲ್ಲ. ಈ ಜಿಲ್ಲೆಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನಾಮಕರಣ ಮಾಡಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಕಾನೂನು ತಜ್ಞರ ಜೊತೆಗೆ ಚರ್ಚಿಸಲಾಗುವುದು. ಸ್ಥಳೀಯ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಪ್ರಾಧಾನ್ಯತೆ ನೀಡಬೇಕು ಅನ್ನುವುದು 1984ರಿಂದಲೇ ನಡೆದುಕೊಂಡು ಬಂದಿದೆ. ಅದೇ ರೀತಿಯಲ್ಲಿ ಅಲ್ಪಸಂಖ್ಯಾಕರಿಗೂ ಪ್ರಾಧಾನ್ಯತೆ ನೀಡಬಹುದೇ ಎಂಬ ವಿಚಾರ ಸಚಿವ ಸಂಪುಟದ ಉಪಸಮಿತಿಯಲ್ಲಿ ಚರ್ಚೆಯ ಹಂತದಲ್ಲಿದೆ. ವಕ್ಫ್ ಆಸ್ತಿಗಳ ನೋಂದಣಿಗೆ ಸ್ಟಾಂಪು ಶುಲ್ಕದಿಂದ ವಿಯಾಯಿತಿ ನೀಡಬೇಕು. ವಕ್ಫ್ ಆಸ್ತಿಗಳನ್ನು “ಭೂಮಿ’ ಸಾಫ್ಟ್ ವೇರ್ ವ್ಯಾಪ್ತಿಗೆ ತರಬೇಕು. ಅಲ್ಪಸಂಖ್ಯಾಕ ಬಾಹುಳ್ಯ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯಬೇಕು ಅನ್ನುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಆಯೋಗ ಇಟ್ಟಿದೆ. ಜ.4ರಂದು ನಡೆಯುವ ಸಚಿವ ಸಂಪುಟದ ಉಪಸಮಿತಿಯಲ್ಲಿ ಚರ್ಚಿಸಿ, ಮುಂದಿನ ಮೂರು ತಿಂಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದಕ್ಕೂ ಮೊದಲು ಮಾತನಾಡಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ಮೋಹನದಾಸ್, ಸಂವಿಧಾನ ದಲ್ಲಿ ನಂಬಿಕೆ ಇಲ್ಲದ ಕೆಲವರು ಇಂದು ಸಂವಿಧಾನಾತ್ಮಕ ಹುದ್ದೆಗಳನ್ನು ಅಲಂಕರಿಸಿದ್ದು ಗಂಡಾಂತರಕಾರಿ ಬೆಳವಣಿಗೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಇಂದು ಕೇಂದ್ರ ಸಚಿವರು, ಸಂಸದರೊಬ್ಬರು ಮಾತನಾಡುವ ರೀತಿಯಲ್ಲಿ ಅಲ್ಪಸಂಖ್ಯಾಕರೊಬ್ಬರು ಮಾತನಾಡಿದ್ದರೆ ಭಯೋತ್ಪಾದಕ ಪಟ್ಟ ಕಟ್ಟಲಾಗುತ್ತಿತ್ತು. ಆದರೆ, ಹಿಂಸೆಗೆ ಹಿಂಸೆ ಉತ್ತರವಲ್ಲ. ಅಲ್ಪಸಂಖ್ಯಾಕರು ಶಾಂತಿ, ಸಹನೆ ಮತ್ತು ಬುದ್ದಿವಂತಿಕೆಯಿಂದ ಪರಿಸ್ಥಿತಿಯನ್ನು ಎದುರಿಸಬೇಕು ಎಂದು ಕರೆ ನೀಡಿದರು. ಸಚಿವ ಯು. ಟಿ. ಖಾದರ್ ಮಾತನಾಡಿ, ಸಂವಿಧಾನದಲ್ಲಿ ಇಲ್ಲದ ಹಕ್ಕುಗಳನ್ನು ಅಲ್ಪಸಂಖ್ಯಾಕರು ಕೇಳಬಾರದು. ಎಲ್ಲವನ್ನೂ ದ್ವೇಷಿಸುವುದು ಸರಿಯಲ್ಲ ಎಂದರು. ಹಕ್ಕುಗಳನ್ನು ಕೇಳುವುದರ ಜೊತೆಗೆ ಜವಾಬ್ದಾರಿಗಳನ್ನೂ ನಿರ್ವಹಿಸಬೇಕು ಎಂದರು.
ಸಚಿವರಾದ ರಾಮಲಿಂಗಾರೆಡ್ಡಿ, ತನ್ವೀರ್ ಸೇs…, ಎಚ್.ಎಂ. ರೇವಣ್ಣ, ಎಂ.ಆರ್. ಸೀತಾರಾಂ, ವಿಧಾನಪರಿಷತ್ ಸದಸ್ಯರಾದ ಐವಾನ್ ಡಿಸೋಜಾ,ರಿಜ್ವಾನ್ ಅರ್ಷದ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್ ಅಹ್ಮದ್, ದೆಹಲಿ ವಿಶೇಷ ಹೆಚ್ಚುವರಿ ಪ್ರತಿನಿಧಿ ಸಲೀಂ ಅಹ್ಮದ್ ಮತ್ತಿತರರು ಇದ್ದರು.
ಕೇಂದ್ರ ಸಚಿವರು, ಸಂಸದರೊಬ್ಬರು ಮಾತನಾಡುವ ರೀತಿಯಲ್ಲಿ ಅಲ್ಪಸಂಖ್ಯಾತರೊಬ್ಬರು ಮಾತನಾಡಿದ್ದರೆ, ಭಯೋತ್ಪಾದಕ ಪಟ್ಟ ಕಟ್ಟಲಾಗುತ್ತಿತ್ತು. ಬಿಜೆಪಿ ಮತ್ತು ಸಂಘಪರಿವಾರದ ಉದ್ದೇಶ ಏನೆಂದು ಸ್ಪಷ್ಟವಾಗಿದೆ. ಆದರೆ, ಹಿಂಸೆಗೆ ಹಿಂಸೆ ಉತ್ತರವಲ್ಲ. ಅಲ್ಪಸಂಖ್ಯಾತರು ಶಾಂತಿ, ಸಹನೆ ಮತ್ತು ಬುದಿಟಛಿವಂತಿಕೆಯಿಂದ ಪರಿಸ್ಥಿತಿ ಎದುರಿಸಬೇಕು.
– ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
ಪೊಲೀಸ್ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.