ರಸ್ತೆ ನಿಯಮ ಉಲ್ಲಂಘಿಸಿ 15,400 ದಂಡ ಕಟ್ಟಿದ
Team Udayavani, Dec 15, 2019, 3:08 AM IST
ಬೆಂಗಳೂರು: ಒಂದೂವರೆ ವರ್ಷಗಳಿಂದ ಸಂಚಾರ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ತರಕಾರಿ ವ್ಯಾಪಾರಿ ವಿರುದ್ಧ 70 ಪ್ರಕರಣಗಳನ್ನು ದಾಖಲಿಸಿರುವ ಸಂಚಾರ ಪೊಲೀಸರು 15 ಸಾವಿರ ರೂ. ದಂಡ ವಿಧಿಸಿದ್ದಾರೆ.
ಯಶವಂತಪುರ ನಿವಾಸಿ ಮಂಜುನಾಥ್ ದಂಡ ಪಾವತಿಸಿದವರು. ಗುರುವಾರ ಬೆಳಗ್ಗೆ 10 ಗಂಟೆ ಹೊತ್ತಿನಲ್ಲಿ ರಾಜಾಜಿನಗರ ಸಂಚಾರ ಪೊಲೀಸರು ಮಹಾಲಕ್ಷ್ಮೀ ಲೇಔಟ್‌ನ ಶಂಕರನಗರ ಬಸ್ ನಿಲ್ದಾಣದ ಬಳಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಮಂಜುನಾಥ್ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಬಂದಿದ್ದಾರೆ. ಆತನನ್ನು ತಡೆದು ವಿಚಾರಿಸಿದಾಗ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಗೊತ್ತಾಗಿದೆ.
ಪೊಲೀಸರ ತಪಾಸಣೆ ವೇಳೆ ಆತನ ಬಳಿ ವಾಹನ ಚಾಲನೆ ಪರವಾನಗಿಯೂ ಇರಲಿಲ್ಲ. ಬಳಿಕ ಪಿಡಿಎ ಯಂತ್ರದಲ್ಲಿ ವಾಹನದ ಸಂಖ್ಯೆಯನ್ನು ನಮೂದಿಸಿ ಪರಿಶೀಲಿಸಿದಾಗ ಕಳೆದ ಒಂದೂವರೆ ವರ್ಷದಿಂದ ಸಂಚಾರ ನಿಯಮ ಉಲ್ಲಂಘಿಸಿರುವುದು ಕಂಡು ಬಂದಿದೆ. ಈ ಸಂಬಂಧ ದಾಖಲಾಗಿದ್ದ 70 ಪ್ರಕರಣಗಳ ಸಂಬಂಧ 15,400 ರೂ. ದಂಡ ವಿಧಿಸಿದ್ದಾರೆ.
ಅದನ್ನು ಪಾವತಿಸುವಂತೆ ಪೊಲೀಸರು ನೋಟಿಸ್ ಕೊಟ್ಟು ವಾಹನ ಜಪ್ತಿ ಮಾಡಿದ್ದರು. ಶನಿವಾರ 15,400 ರೂ. ದಂಡ ಕಟ್ಟಿ ವಾಹನ ಬಿಡಿಸಿಕೊಂಡಿದ್ದಾರೆ. ಬಹುತೇಕ ಕೇಸ್‌ಗಳು ಪರಿಷ್ಕೃತ ದಂಡ ಜಾರಿಯಾಗುವುದಕ್ಕಿಂತಲೂ ಹಳೇಯದ್ದಾಗಿವೆ. ಹೀಗಾಗಿ 70 ಕೇಸ್‌ಗಳಲ್ಲಿ 15,400 ರೂ. ದಂಡ ಪಾವತಿಸಬೇಕಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಸಿಸಿ ಕ್ಯಾಮರಾ ದೃಶ್ಯ ಪರಿಗಣಿಸಿ ಕೇಸ್ ದಾಖಲು: ತರಕಾರಿ ವ್ಯಾಪಾರಿಯಾಗಿರುವ ಮಂಜುನಾಥ್ ಒಂದೂವರೆ ವರ್ಷದಲ್ಲಿ ತನ್ನ ದ್ವಿಚಕ್ರ ವಾಹನದಲ್ಲಿ ಮೂವರ ಸವಾರಿ, ಸಿಗ್ನಲ್ ಉಲ್ಲಂಘನೆ, ಹೆಲ್ಮೆಟ್ ಧರಿಸಿದೆ ಇರುವುದು, ಚಾಲನೆ ವೇಳೆ ಮೊಬೈಲ್ ಬಳಕೆ ಸೇರಿದಂತೆ ಇನ್ನಿತರ ಸಂಚಾರ ನಿಯಮ ಉಲ್ಲಂಘನೆ ಕೇಸ್‌ಗಳಾಗಿವೆ.
ಪೊಲೀಸರು ಇಲ್ಲದ ಸ್ಥಳಗಳಲ್ಲಿಯೇ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಿದ್ದರು. ಆದರೆ, ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದ ಫೋಟೋಗಳನ್ನು ಆಧರಿಸಿ ಕಂಟ್ರೋಲ್ ರೂಮ್‌ನಲ್ಲಿ ಕೇಸ್ ದಾಖಲಿಸಿದ್ದೇವೆ ಎಂದು ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.