ಭದ್ರತೆಗೆ 16 ಸಾವಿರ ಪೊಲೀಸ್‌ ನಿಯೋಜನೆ

Team Udayavani, May 9, 2023, 4:51 PM IST

ಭದ್ರತೆಗೆ 16 ಸಾವಿರ ಪೊಲೀಸ್‌ ನಿಯೋಜನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿಯುತ ಮತದಾನ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ನಗರದಲ್ಲಿ ಭಾರೀ ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ. ನಗರದ 8 ವಿಭಾಗಗಳ ವ್ಯಾಪ್ತಿಯಲ್ಲಿರುವ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 16 ಸಾವಿರ ಪೊಲೀಸ್‌ ಅಧಿಕಾರಿ-ಸಿಬ್ಬಂದಿ ನಿಯೋಜಿಸಲಾಗಿದೆ.

ನಗರದ 28 ಕ್ಷೇತ್ರಗಳಲ್ಲಿ ನಗರದ ಒಟ್ಟು 7,916 ಮತಗಟ್ಟೆಗಳಿವೆ. 1,907 ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಲಾಗಿದೆ. 6,009 ಸಾಮಾನ್ಯ ಮತಗಟ್ಟೆಗಳೆಂದು ವಿಂಗಡಿಸಿ ಅಗತ್ಯಕ್ಕೆ ತಕ್ಕಂತೆ ಬಂದೋಬಸ್ತ್ ಮಾಡಲಾಗಿದೆ. ಒಟ್ಟು ಮತಗಟ್ಟೆ ಕೇಂದ್ರಗಳು 2,509 ಇರಲಿದ್ದು, ಈ ಪೈಕಿ 397 ಸೆಕ್ಟರ್‌ ಮೊಬೈಲ…, 103 ಸೂಪರ್‌ವೈಸರಿ ಮೊಬೈಲ್‌ ಹಾಗೂ 26 ಸಬ್ ಡಿವಿಷನ್‌ ಮೊಬೈಲ್ ಕೇಂದ್ರಗಳನ್ನಾಗಿ ವಿಂಗಡಿಸಲಾಗಿದೆ.

ನಗರ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಭದ್ರತಾ ನಿರ್ವಹಣೆ ನಡೆಯಲಿದ್ದು, ಒಬ್ಬರು ವಿಶೇಷ ಆಯುಕ್ತರು, ಇಬ್ಬರು ಹೆಚ್ಚುವರಿ ಪೊಲೀಸ್‌ ಆಯುಕ್ತರು, ಇಬ್ಬರು ಜಂಟಿ ಪೊಲೀಸ್‌ ಆಯುಕ್ತರು, 24 ಡಿಸಿಪಿಗಳು, 67ಎಸಿಪಿಗಳು, 248 ಇನ್‌ಸ್ಪೆಕ್ಟರ್‌ಗಳು, 881 ಪಿಎಸ್‌ಐಗಳು, 1020 ಎಎಸ್‌ಐಗಳು, 9971 ಕಾನ್‌ಸ್ಟೆàಬಲ್‌ ಮತ್ತು ಹೆಡ್‌ಕಾನ್‌ಸ್ಟೇಬಲ್‌ಗ‌ಳು, 2565 ಗೃಹ ರಕ್ಷಕ ದಳ ಸಿಬ್ಬಂದಿ, 49 ಸಿಎಪಿಎಫ್ ಪಡೆಗಳು ಸೇರಿ 16 ಸಾವಿರ ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ‌

123 ಚೆಕ್‌ಪೋಸ್ಟ್‌: 8 ವಿಭಾಗಗಳಲ್ಲಿ 123 ಚೆಕ್‌ ಪೋಸ್ಟ್‌ ಹಾಕಲಾಗಿದೆ. 131 ಫ್ಲೈಯಿಂಗ್‌ ಸ್ಕ್ವಾಡ್‌ಗಳು ಕಾರ್ಯಾಚರಣೆ ನಡೆಸುತ್ತಿವೆ. ಜತೆಗೆ ಮೇ 8ರ ಸಂಜೆ 6 ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯಪಾನ ಮಾರಾಟ ನಿಧಿಷೇಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ತಿಳಿಸಿದರು.

ಗೂಂಡಾ ಕಾಯ್ದೆಯಡಿ 28 ಮಂದಿ ಬಂಧನ: ನಗರದಲ್ಲಿರುವ 7,493 ರೌಡಿಗಳಿಗೆ ಎಚ್ಚರಿಕೆ ನೀಡುವುದರ ಜತೆಗೆ 28 ಜನರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿ ದೆ. ನಗರದ 460 ಕಡೆಗಳಲ್ಲಿ ಪೊಲೀಸ್‌ ಪಥಸಂಚಲನ ನಡೆಸಲಾಗಿದ್ದು, 7,761 ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡು 4,818 ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ. ಇದುವರೆಗೂ ನಗರ ಪೊಲೀಸರು 10 ಕೋಟಿ ರೂ.ಗಳಿಗೂ ಹೆಚ್ಚು ನಗದು, 28.5ಕೆ.ಜಿಯಷ್ಟು ಚಿನ್ನಾಭರಣ, 140 ಕೆ.ಜಿ ಬೆಳ್ಳಿ ಆಭರಣಗಳು, 9 ಕೋಟಿಯಷ್ಟು ಉಚಿತ ಉಡುಗೊರೆಗಳು ಹಾಗೂ 29 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಡ್ರಗ್ಸ್‌ ಸೇರಿ 64 ಕೋಟಿ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ನಗರ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.