3 ತಿಂಗಳಲ್ಲಿ ಪಾಲಿಕೆಗೆ 1,757 ಕೋಟಿ ತೆರಿಗೆ ಸಂಗ್ರಹ


Team Udayavani, Jul 4, 2019, 3:08 AM IST

palike

ಬೆಂಗಳೂರು: ಬಿಬಿಎಂಪಿ ತೆರಿಗೆ ಸಂಗ್ರಹ ಗುರಿಮುಟ್ಟುವಲ್ಲಿ ಅರ್ಧದಷ್ಟು ಯಶಸ್ವಿಯಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ತ್ತೈಮಾಸಿಕ ಮಾಸ( ಏಪ್ರಿಲ್‌, ಮೇ ಮತ್ತು ಜೂನ್‌)ದಲ್ಲಿ ಶೇ.50.22 ರಷ್ಟು ಆಸ್ತಿ ತೆರಿಗೆ ಹಣ ಸಂಗ್ರಹವಾಗಿದೆ.

ಜೂನ್‌ ಮಾಸಾಂತ್ಯಕ್ಕೆ ಬಿಬಿಎಂಪಿಗೆ 1,757 ಕೋಟಿ ರೂ. ಆಸ್ತ ತೆರಿಗೆ ಹಣ ಸಂಗ್ರಹವಾಗಿದೆ. 2019-20 ನೇ ಸಾಲಿನಲ್ಲಿ ಬಿಬಿಎಂಪಿ 3,500 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಗುರಿಯನ್ನು ಹೊಂದಿದೆ.

ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹಕ್ಕೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಸುಧಾರಣೆ ಕಂಡಿದೆ. ಜತೆಗೆ ಏಪ್ರಿಲ್‌ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5 ರಷ್ಟು ವಿನಾಯಿತಿ ನೀಡುವುದಾಗಿ ಘೋಷಿಸಿದ್ದರಿಂದ ಒಂದೇ ತಿಂಗಳಲ್ಲಿ 945 ಕೋಟಿ ರೂ.ದಾಖಲೆ ಸಂಗ್ರಹವಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕಾಗಿ “ಪ್ರತಿ ಬುಧವಾರ ಕಂದಾಯ “ಆಂದೋಲ ದಿನ’ ಅಭಿಯಾಮನ ಆರಂಭಿಸಲಾಗಿದೆ. ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವವರ ಪಟ್ಟಿ ಸಿದ್ಧಪಡಿಸಿಕೊಳ್ಳಲಾಗುತ್ತಿದೆ. ಶೋಕಸ್‌ ನೋಟಿಸ್‌ ಸಹ ನೀಡಲಾಗುತ್ತಿದೆ. ಜತೆಗೆ ಕಂದಾಯ ಇಲಾಖೆಯಿಂದ ವಲಯವಾರು ಸಭೆಗಳನ್ನು ನಡೆಸಲಾಗುತ್ತಿದೆ.

ಕೋರ್ಟ್‌ ಮೊರೆ: ನಿರ್ಮಿತ ವಿಸ್ತೀರ್ಣಕ್ಕೆ ತಕ್ಕಂತೆ ಆಸ್ತಿ ತೆರಿಗೆ ಪಾವತಿಸದೆ ವಂಚನೆ ಪ್ರಕರಣ ತಡೆಗಟ್ಟಲು ಒಟ್ಟಾರೆ ನಿರ್ಮಿತ ಪ್ರದೇಶದ ಟೋಟಲ್‌ ಸ್ಟೇಷನ್‌ ಸರ್ವೆ ಪ್ರಗತಿಯಲ್ಲಿದ್ದು, ಕೆಲವರು ಕೋರ್ಟ್‌ ಮೊರೆಹೋಗಿದ್ದಾರೆ. ಇದು ನಿರ್ಣಯವಾದರೆ ಮತ್ತಷ್ಟು ತೆರಿಗೆ ಸಂಗ್ರಹವಾಗಲಿದೆ ಎಂದು ಕಂದಾಯ ಇಲಾಖೆಯ ಉಪಆಯುಕ್ತ ಅವಿನಾಶ್‌ಬಾಬು ಮಾಹಿತಿ ನೀಡಿದರು.

ತೆರಿಗೆ ಪಾವತಿಯಲ್ಲಿ ಶೇ.5ರಷ್ಟು ವಿನಾಯಿತಿಯನ್ನು ಪ್ರತಿ ವರ್ಷ ಜೂನ್‌ ಮತ್ತು ಜುಲೈನಲ್ಲಿ ಎರಡು ತಿಂಗಳು ನೀಡಲಾಗುತ್ತಿತ್ತು. ಈ ವರ್ಷ ಚುನಾವಣೆ ಎದುರಾಗಿದ್ದರಿಂದ ಕೇವಲ ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ ಗಣನೀಯ ಪ್ರಮಾಣದ ತೆರಿಗೆ ಹಣ ಸಂಗ್ರಹವಾಗಿದೆ ತಿಳಿಸಿದರು.

ದಾಖಲೆ ಪ್ರಮಾಣದ ತೆರಿಗೆ ಸಂಗ್ರಹ: ಬಿಬಿಎಂಪಿ ಏಪ್ರಿಲ್‌ ತಿಂಗಳಲ್ಲಿ ತೆರಿಗೆ ಪಾವತಿಸುವವರಿಗೆ ತೆರಿಗೆ ಮೊತ್ತದಲ್ಲಿ ಶೇ.5ರಷ್ಟು ವಿನಾಯತಿ ನೀಡಲಾಗಿತ್ತು. ಈ ಅವಧಿಯಲ್ಲಿ ಹಣ ಪಾವತಿಸುವವರಿಗೆ ಶೇ.5ರಷ್ಟು ಹಣ ಉಳಿಸಿಕೊಳ್ಳುವ ಅವಕಾಶವಿತ್ತು. ಇದನ್ನು ಬಹುತೇಕ ತೆರಿಗೆದಾರರು ಸರ್ಮಪಕವಾಗಿ ಬಳಸಿಕೊಂಡಿದ್ದು, ಏಪ್ರಿಲ್‌ ತಿಂಗಳಲ್ಲಿ 945 ಕೋಟಿ ರೂ.ಗಳು ಸಂಗ್ರಹವಾಗಿದೆ.

ಆನ್‌ಲೈನ್‌ ತೆರಿಗೆ ಪಾವತಿಗೆ ಒಲವು: ಸಾರ್ವಜನಿಕರು ತೆರಿಗೆಯನ್ನು ಆನ್‌ಲೈನ್‌ ಮೂಲಕ ಸಲ್ಲಿಸಲು ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಈ ವರ್ಷದ ಮೊದಲ ತ್ತೈಮಾಸಿಕದಲ್ಲಿ ಆನ್‌ಲೈನ್‌ನ ಮೂಲಕ 642 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಈ ಹಿಂದೆ 2018ರಲ್ಲಿ 459 ಕೋಟಿ ರೂ. , 2017ರಲ್ಲಿ 384 ಕೋಟಿ. ರೂ ಮತ್ತು 2016ರಲ್ಲಿ 235 ಕೋಟಿ. ರೂ. ತೆರಿಗೆ ಹಣ (ಮೊದಲ ತ್ತೈಮಾಸಿಕ) ಸಂಗ್ರಹವಾಗಿದೆ. ವರ್ಷದಿಂದ ವರ್ಷಕ್ಕೆ ಆನ್‌ಲೈನ್‌ ತೆರಿಗೆ ಪಾವತಿದಾರರ ಸಂಖ್ಯೆ ಹೆಚ್ಚಾಗಿದೆ.

ವರ್ಷ ತೆರಿಗೆ ಸಂಗ್ರಹ ಗುರಿ ತೆರಿಗೆ ಸಂಗ್ರಹ ಶೇಕಡವಾರು
2016 2,300 1,997.28 86.83
2017 2,600 2,132.42 82.01
2018 3,100 2,529.42 81.59
2019 3,500 1,757.91 50.22 (ಜೂನ್‌ ಅಂತ್ಯದವರೆಗೆ)

ವರ್ಷ ಪಾವತಿಸಿದ ಆಸ್ತಿಗಳ ವಿವರ ಹಿಂದಿನ ವ. ಬಾಕಿದಾರರು ಆಸ್ತಿಗಳ ಸಂಖ್ಯೆ
2016 11,57,167 4,63,973 16,21,140
2017 11,99,211 6,28,579 18,27,790
2018 12,41,316 6,76,883 19,18,199
2019 9,90,618 1,92,681 11,83,299

* ಹಿತೇಶ್‌ ವೈ

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.