2ನೇ ದಿನವೂ ಬಂದ್‌ ನೀರಸ

Team Udayavani, Jan 10, 2019, 12:30 AM IST

9bnp-7.jpg

ಬೆಂಗಳೂರು: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌ಗೆ ಎರಡನೇ ದಿನ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಂಗಳವಾರ ಮಧ್ಯರಾತ್ರಿಯಿಂದ ಬುಧವಾರ ಬೆಳಗ್ಗೆವರೆಗೆ ಬೆಂಗಳೂರಿನಲ್ಲಿ 58 ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ.

ಬಳ್ಳಾರಿಯಲ್ಲೂ 4 ಬಸ್‌ಗಳಿಗೆ ಹಾನಿಯಾಗಿದೆ. ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿಎಂಟಿಸಿ ಸಂಚಾರ ಸ್ಥಗಿತಗೊಳಿಸಲಾಗಿತ್ತಾದರೂ, ಯಾವುದೇ ಕಚೇರಿ ಅಥವಾ ಅಂಗಡಿ ಮುಂಗಟ್ಟು ಮುಚ್ಚಿರಲಿಲ್ಲ. ಮಂಗಳವಾರ ಮಧ್ಯರಾತ್ರಿಯಿಂದ ಬುಧವಾರ ಬೆಳಗ್ಗೆ 8 ಗಂಟೆ ನಡುವಿನಲ್ಲಿ ಹೆಬ್ಟಾಳ, ಕಸ್ತೂರಿ ನಗರ, ಕೆಂಗೇರಿ, ಬಾಪೂಜಿ ನಗರ, ಮೂಡಲ ಪಾಳ್ಯ, ಕುಂಬಳಗೋಡು ಸೇರಿ ಹಲವು ಪ್ರದೇಶಗಳಲ್ಲಿ ಕಿಡಿಗೇಡಿಗಳು 46 ಬಿಎಂಟಿಸಿ ಬಸ್‌ ಹಾಗೂ ಕೆಎಸ್‌ಆರ್‌ಟಿಸಿಯ 12 ಬಸ್‌ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು.ಸರ್ಕಾರಿ ಕಚೇರಿಗಳು, ಖಾಸಗಿ ಸಂಸ್ಥೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದವು.ಶಾಲಾ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಂದೂಡಿದ್ದರೂ,ಬಹುತೇಕ ಜಿಲ್ಲೆಗಳಲ್ಲಿ ಶೈಕ್ಷಣಿಕ ಕಾರ್ಯ ಚಟುವಟಿಕೆ ಹಾಗೂ ತರಗತಿಗಳು ಎಂದಿನಂತೆ ನಡೆದಿದೆ. ಬೆಂಗಳೂರು ನಗರದಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು ಬುಧವಾರ ಕಾರ್ಯನಿರ್ವಹಿಸಿವೆ.

ಗಾರ್ಮೆಂಟ್‌ಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಂಗಳವಾರ ಬಹುತೇಕ ಎಲ್ಲ ಗಾರ್ಮೆಂಟ್‌ಗೆ ರಜಾ ನೀಡಲಾಗಿತ್ತು.ಆದರೆ, ಬುಧವಾರ ಎಂದಿನಂತೆ ಕಾರ್ಯನಿರ್ವಹಿಸಿವೆ.

ಕೆಎಸ್‌ಆರ್‌ಟಿಸಿಗೆ ಕೋಟ್ಯಂತರ ನಷ್ಟ
ಭಾರತ್‌ ಬಂದ್‌ ಹಾಗೂ ಕಾರ್ಮಿಕರ ಮುಷ್ಕರದ ಪರಿಣಾಮವಾಗಿ ಕೆಎಸ್‌ಆರ್‌ಟಿಸಿಯ 2,171 ಬಸ್‌ ರದ್ದಾಗಿ, 2.42ಕೋಟಿ ರೂ. ಹಾಗೂ ಬಸ್‌ ಹಾನಿಯಿಂದ 2.32 ಲಕ್ಷ ರೂ ನಷ್ಟವಾಗಿದೆ.ಬಿಎಂಟಿಸಿಗೆ ಬಸ್‌ ರದ್ದಾಗಿದ್ದರಿಂದ 3 ಕೋಟಿ ರೂ. ಹಾಗೂ ಬಸ್‌ ಹಾನಿಯಿಂದ 7.5 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

byndoor

Siddapura: ಬೈಕಿಗೆ ಕಾರು ಡಿಕ್ಕಿ; ಬೈಕ್‌ ಸವಾರ ಗಂಭೀರ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.