2 ವಾರ್ಡ್‌ ಉಪಚುನಾವಣೆ 29ರಂದು


Team Udayavani, May 3, 2019, 10:44 AM IST

blore-3

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ 2 ವಾರ್ಡ್‌ಗಳು ಮತ್ತು ಬೆಂಗಳೂರು ನಗರ ಜಿಲ್ಲೆ ಹೆಬ್ಬಗೋಡಿ ನಗರಸಭೆಯ ಒಂದು ವಾರ್ಡ್‌ಗೆ ಮೇ 29ರಂದು ಉಪ ಚುನಾವಣೆ ನಡೆಯಲಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ವೇಳಾಪಟ್ಟಿ ಪ್ರಕಟಿಸಿದ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್‌.ಶ್ರೀನಿವಾಸಾಚಾರಿ, ಪಾಲಿಕೆಯ ಸಗಾಯಿಪುರ (ವಾರ್ಡ್‌ ನಂ.60), ಕಾವೇರಿಪುರ (ವಾರ್ಡ್‌ ನಂ.103) ಹಾಗೂ ಹೆಬ್ಬಗೋಡಿಯ ವಾರ್ಡ್‌ ನಂ.26ರಲ್ಲಿ ಮೇ 29ರಂದು ಮತದಾನ ನಡೆಯಲಿದೆ.

ಉಪ ಚುನಾವಣೆ ನಡೆಯಲಿರುವ ವಾರ್ಡ್‌ಗಳ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಅದು ಮೇ 31ರವರೆಗೆ ಜಾರಿಯಲ್ಲಿ ಇರಲಿದೆ. ಈ ಉಪ ಚುನಾವಣೆಗಳಿಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಮೇ 5ರಂದು ಅಧಿಸೂಚನೆ ಹೊರಡಿಸಲಿದ್ದಾರೆ.

ಬಿಬಿಎಂಪಿಯ ಸಗಾಯಿಪುರ ಹಾಗೂ ಕಾವೇರಿಪುರ ವಾರ್ಡ್‌ನ ಸದಸ್ಯರು ನಿಧನ ಹೊಂದಿದ್ದು, ಹೆಬ್ಬಗೋಡಿ ನಗರಸಭೆ ವಾರ್ಡ್‌ ಸಂಖ್ಯೆ 26ರ ಸದಸ್ಯರು ರಾಜೀನಾಮೆ ನೀಡಿದ್ದರಿಂದ ಆ ಸ್ಥಾನಗಳು ತೆರವಾಗಿದ್ದರಿಂದ ಉಪ ಚುನಾವಣೆಗೆ ಘೋಷಣೆಯಾಗಿದೆ.

ಇಬ್ಬರು ಸದಸ್ಯರ ಅಕಾಲಿಕ ಸಾವು: ಕಾವೇರಿಪುರ ವಾರ್ಡ್‌ ಪಾಲಿಕೆ ಸದಸ್ಯೆ ಹಾಗೂ ಉಪಮೇಯರ್‌ ಆಗಿದ್ದ ರಮೀಳಾ ಉಮಾಶಂಕರ್‌ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಜತೆಗೆ ಸಗಾಯಪುರದ ಪಕ್ಷೇತರ ಸದಸ್ಯರಾಗಿದ್ದ ಏಳುಮಲೈ ಅವರು ಮೂಗಿನಲ್ಲಿರುವ ಗುಳ್ಳೆಗೆ ಚಿಕಿತ್ಸೆ ಪಡೆಯಲು ಹೋಗಿ ಕೋಮಾ ಸ್ಥಿತಿಗೆ ತಲುಪಿ ಮೃತಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಎರಡೂ ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದೆ. ಹಿಂದೆ ಲಕ್ಕಸಂದ್ರ ಹಾಗೂ ಬಿನ್ನಿಪೇಟೆಯ ಪಾಲಿಕೆ ಸದಸ್ಯರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು.

ಮೈತ್ರಿ ಪಕ್ಷಗಳ ವಾರ್ಡ್‌ಗಳು: ಉಪಚುನಾವಣೆ ಘೋಷಣೆಯಾಗಿರುವ ಎರಡೂ ವಾರ್ಡ್‌ಗಳಲ್ಲಿನ ವಾತಾವರಣ ಮೈತ್ರಿ ಪಕ್ಷಗಳಿಗೆ ಪೂರಕವಾಗಿದೆ. ರಮಿಳಾ ಉಮಾಶಂಕರ್‌ ಜೆಡಿಎಸ್‌ನಿಂದ ಗೆಲುವು ಸಾಧಿಸಿದ್ದರು. ಏಳುಮಲೈ ಪಕ್ಷೇತರರಾಗಿ ಗೆದ್ದರೂ ಕಾಂಗ್ರೆಸ್‌-ಜೆಡಿಎಸ್‌ ಆಡಳಿತಕ್ಕೆ ಬೆಂಬಲ ನೀಡಿದ್ದರು. ಹೀಗಾಗಿ ಎರಡೂ ವಾರ್ಡ್‌ಗಳಲ್ಲಿ ತಮ್ಮ ಪಕ್ಷದ ಅಥವಾ ಬೆಂಬಲಿತ ಅಭ್ಯರ್ಥಿ ಗೆಲ್ಲಿಸಲು ಮೈತ್ರಿ ಪಕ್ಷಗಳು ಮುಂದಾಗಲಿವೆ ಎನ್ನಲಾಗಿದೆ.

ಉಪಚುನಾವಣೆಯಲ್ಲಿ ಎರಡೂ ವಾರ್ಡ್‌ಗಳನ್ನು ಬಿಜೆಪಿ ತನ್ನ ಹಿಡಿತಕ್ಕೆ ತೆಗೆದುಕೊಂಡರೆ ಕೊನೆಯ ವರ್ಷ ಮೇಯರ್‌ ಸ್ಥಾನ ಪಡೆಯಲು ತೀವ್ರ ಪೈಪೋಟಿ ನಡೆಯುವ ಸಾಧ್ಯತೆಗಳಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಕೆಲವೇ ಮತಗಳಿಂದ ಮೇಯರ್‌ ಸ್ಥಾನ ಪಡೆಯುವಲ್ಲಿ ವಿಫ‌ಲವಾಗಿತ್ತು. ಆ ಹಿನ್ನೆಲೆಯಲ್ಲಿ ಉಪಚುನಾವಣೆ ಎರಡೂ ಪಕ್ಷಗಳಿಗೆ ಮಹತ್ವ ಎನಿಸಿದೆ.

ಮೈತ್ರಿ ಹೋರಾಟ: ರಾಜ್ಯ ಮತ್ತು ಬಿಬಿಎಂಪಿ ಆಡಳಿತದಲ್ಲಿರುವಂತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬಿಬಿಎಂಪಿ ಉಪಚುನಾವಣೆಯನ್ನು ಮೈತ್ರಿ ಮೂಲಕವೇ ಎದುರಿಸುವ ಸಾಧ್ಯತೆಗಳಿವೆ. ಅದರಂತೆ ಕಾವೇರಿಪುರ ವಾರ್ಡ್‌ ಅನ್ನು ಜೆಡಿಎಸ್‌ಗೆ ಮತ್ತು ಸಗಾಯಪುರ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಾತ್ರ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಇನ್ನು, ಬಿಜೆಪಿ ಏಕಾಂಗಿ ಹೋರಾಟ ಮಾಡುವುದು ಬಹುತೇಕ ಖಚಿತವಾಗಿದೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.