ಮಾರುಕಟ್ಟೆಯ ಅಕ್ರಮ ಮಳಿಗೆ ತೆರವಿಗೆ 2 ವಾರ ಗಡುವು
Team Udayavani, Mar 28, 2019, 12:15 PM IST
ಬೆಂಗಳೂರು: ಕೆ.ಆರ್.ಮಾರ್ಕೆಟ್ ಸೇರಿದಂತೆ ನಗರದ ಎಲ್ಲ ಮಾರುಕಟ್ಟೆಗಳಲ್ಲಿನ ಅಕ್ರಮ ಮಳಿಗೆಗಳ ತೆರವು ಹಾಗೂ ಅಲ್ಲಿ ಅಗ್ನಿ ಅನಾಹುತ ತಡೆ ಸುರಕ್ಷಾ ಕ್ರಮಗಳನ್ನು ಅಳವಡಿಸಲು ಎರಡು ವಾರಗಳ ಗಡುವು ನೀಡಿರುವ ಹೈಕೋರ್ಟ್, ಮಾರುಕಟ್ಟೆ ಸಂಕೀರ್ಣಗಳಲ್ಲಿ ಅವಘಡಗಳು ಸಂಭವಿಸಿದರೆ ಪಾಲಿಕೆ ಆಯುಕ್ತರು ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ನಗರದ ಕೆ.ಆರ್. ಮಾರ್ಕೆಟ್ ಸಂಕೀರ್ಣದಲ್ಲಿ ಅಗ್ನಿ ಅನಾಹುತ ತುರ್ತು ನಿರ್ಗಮನ ಸ್ಥಳ ಹಾಗೂ ಸಾರ್ವಜನಿಕರ ಓಡಾಟ ಜಾಗದಲ್ಲಿ ಅಕ್ರಮವಾಗಿ ಮಳಿಗೆಗಳನ್ನು ನಿರ್ಮಿಸಿ ಕಾನೂನುಬಾಹಿರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರು ಹೂವು ವ್ಯಾಪಾರಿಗಳ ಸಂಘ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ಹಂಗಾಮಿ ಮುಖ್ಯ ನ್ಯಾ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಪ್ರಕರಣದ ಕುರಿತು ವಿವರಣೆ ನೀಡಲು ಬುಧವಾರ ಖುದ್ದು ಹಾಜರಾಗುವಂತೆ ಪಾಲಿಕೆ ಆಯುಕ್ತರಿಗೆ ನ್ಯಾಯಪೀಠ ಮಂಗಳವಾರದ ವಿಚಾರಣೆ ವೇಳೆ ತಾಕೀತು ಮಾಡಿತ್ತು. ಅದರಂತೆ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್
ಖುದ್ದು ಹಾಜರಾಗಿದ್ದರು. ಈ ವೇಳೆ, ಮಾರುಕಟ್ಟೆಯ ಕಟ್ಟಡಗಳಿಗೆ ಅಗ್ನಿಶಾಮಕ ದಳದಿಂದ ನಿರಾಕ್ಷೇಪಣಾ ಪತ್ರ ಪಡೆಯಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಅಗ್ನಿಶಾಮಕ ಇಲಾಖೆ ರೂಪಿಸಿರುವ 19 ಮಾರ್ಗಸೂಚಿಗಳನ್ನು ಶೀಘ್ರ ಅನುಷ್ಠಾನಕ್ಕೆ ತರಲಾಗುವುದು. ಅಲ್ಲದೇ ಅಗ್ನಿ ನಿರೋಧಕ ಪರಿಕರಗಳ ಖರೀದಿಗಾಗಿ ಮಾ.6ರಂದು ಟೆಂಡರ್ ಕರೆಯಲಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಮುಂದಿನ ಕ್ರಮ ಸಾಧ್ಯವಾಗಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲ ರೆಹಮತುಲ್ಲಾ ಕೊತ್ವಾಲ್, ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಅಗ್ನಿಶಾಮಕ ಇಲಾಖೆ 2017ರಲ್ಲೇ ಮಾರ್ಗಸೂಚಿಗಳನ್ನು ರೂಪಿಸಿದೆ. ಈವರೆಗೂ ಬಿಬಿಎಂಪಿ ಅವುಗಳನ್ನು ಅನುಷ್ಠಾನಗೊಳಿಸಿ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆದಿಲ್ಲ ಎಂದು ದೂರಿದರು.
ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಎಲ್ಲ ಕಟ್ಟಡಗಳಿಗೆ ಅಗ್ನಿಕಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರವಷ್ಟೇ ಅವುಗಳ ಕಾರ್ಯಾಚರಣೆಗೆ ಅನುಮತಿ ದೊರೆಯುತ್ತದೆ.
ಅಲ್ಲಿಯವರೆಗೆ ಅದನ್ನು ಸ್ಥಗಿತಗೊಳಿಸಿಬಿಡಿ ಎಂದು ಮೌಖೀಕವಾಗಿ ಹೇಳಿದರು. ಹೇಗಿದ್ದರೂ ಇದು ನಿಮಗೆ ಅಥವಾ ನಿಮ್ಮ ಜೀವನಕ್ಕೆ ಸಂಬಂಧಿಸಿದ ವಿಷಯ ಅಲ್ಲವಲ್ಲ, ಬೇರೊಬ್ಬರ ಬದುಕಿಗೆ ಸಂಬಂಧಿಸಿದ ವಿಚಾರ. ಹಾಗಾಗಿ ಇಷ್ಟೊಂದು ಬೇಜವಾಬ್ದಾರಿ ತೋರಿಸುತ್ತಿದ್ದೀರಿ.
ಹೀಗಾದರೆ ನಡೆಯುವುದಿಲ್ಲ. ತಕ್ಷಣ ಎಲ್ಲ ಮಾರುಕಟ್ಟೆ ಕಟ್ಟಡಗಳಿಗೆ ಅಗ್ನಿ ಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆದು, ಪ್ರಗತಿ ವರದಿ ಸಲ್ಲಿಸಿ, ಒಂದೊಮ್ಮೆ ಅವಘಡಗಳು ಸಂಭವಿಸಿದರೆ ಆಯುಕ್ತರು ಹಾಗೂ ಇತರ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಲಾಗುವುದು ಎಂದು ಮೌಖೀಕ ಎಚ್ಚರಿಕೆ ನೀಡಿತು.
ನ್ಯಾಯಾಲಯದ ಈ ನಿರ್ದೇಶನ ಕೇವಲ ಕೆ.ಆರ್. ಮಾರುಕಟ್ಟೆಗೆ ಅಷ್ಟೇ ಅಲ್ಲ, ಬಿಬಿಎಂಪಿ ವ್ಯಾಪ್ತಿಯ ಎಲ್ಲ ಮಾರುಕಟ್ಟೆಗಳಿಗೆ ಅನ್ವಯಿಸುತ್ತದೆ. ಮಾರುಕಟ್ಟೆಯಲ್ಲಿ ಕಾಯ್ದೆ-ಕಾನೂನು ಉಲ್ಲ್ಘಿಂಸಿ ನಿರ್ಮಿಸಿರುವ ಎಲ್ಲ ಕಟ್ಟಡ, ಮಳಿಗೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸ ಬೇಕು. ಸಾರ್ವಜನಿಕರು ಹಾಗೂ ಅಗ್ನಿಶಾಮಕ ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡುವ ಕಟ್ಟಡಗಳನ್ನೂ ತೆರವು ಮಾಡಬೇಕು. ಎರಡು ವಾರಗಳಲ್ಲಿ ಈ ಆದೇಶ ಪಾಲನೆಯಾಗಬೇಕು ಎಂದು ನ್ಯಾಯಪೀಠ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಏ.3ಕ್ಕೆ ಮುಂದೂಡಿತು.
ಬಿಬಿಎಂಪಿ ಅಧಿಕಾರಿಗಳು ಅಕ್ರಮ ಮಳಿಗೆಗಳ ತೆರವು ಹಾಗೂ ನಿರಾಕ್ಷೇಪಣಾ ಪತ್ರ ಪಡೆಯುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಆ ವೇಳೆ ಬಿಬಿಎಂಪಿ ಕೈಗೊಂಡ ಕ್ರಮ ಸಮಾಧಾನಕರ.
ವಾಗದಿದ್ದರೆ ಆ ಬಗ್ಗೆ ನ್ಯಾಯಾಲಯದ ಗಮನಕ್ಕೆ ತರಬೇಕು ಎಂದು ಇದೇ ವೇಳೆ ನ್ಯಾಯಪೀಠ, ಅಗ್ನಿಶಾಮಕ ದಳದ ಮುಖ್ಯಸ್ಥರಿಗೆ ಸೂಚನೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.