20 ಶಾಸಕರ ರಾಜೀನಾಮೆ? ಸರ್ಕಾರಕ್ಕೆ ಎದುರಾಗಿದೆ ಅಳಿವು-ಉಳಿವಿನ ಪ್ರಶ್ನೆ

Team Udayavani, Sep 16, 2018, 6:00 AM IST

vidhana-soudha-750.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟದ ದಿನಗಳು ಎದುರಾಗಿರುವ ಸಂದರ್ಭದಲ್ಲಿಯೇ ಸೋಮವಾರದಿಂದಲೇ ಸಮ್ಮಿಶ್ರ ಸರ್ಕಾರದ ಪತನಕ್ಕೆ ಚಟುವಟಿಕೆಗಳು ಆರಂಭವಾಗಲಿದೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಬಲವಾಗಿ ಕೇಳಿ ಬರುತ್ತಿವೆ.

ಆಪರೇಷನ್‌ ಕಮಲದ ಬಗ್ಗೆ ಸಾಕಷ್ಟು ವಿರೋಧಗಳು ಕೇಳಿ ಬರುತ್ತಿದ್ದರೂ, ಸೋಮವಾರದಿಂದ ನಡೆಯುವ ಬೆಳವಣಿಗೆಗೂ ತಮಗೂ ಏನೂ ಸಂಬಂಧ ಇಲ್ಲದಂತೆ ತಟಸ್ಥವಾಗಿ ಉಳಿಯುವ ಮೂಲಕ ಸರ್ಕಾರವನ್ನು ಉರುಳಿಸುವ ಲೆಕ್ಕಾಚಾರ ಬಿಜೆಪಿ ನಾಯಕರದ್ದು ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, 20ಕ್ಕೂ ಹೆಚ್ಚು ಶಾಸಕರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಗಂಭೀರವಾಗಿ ಚರ್ಚಿತವಾಗುತ್ತಿದೆ.

ಬಿಜೆಪಿ ಸೇರಬೇಕೆಂದುಕೊಂಡಿರುವ ಶಾಸಕರ ಜೊತೆಗೆ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಅವರ ನಿರೀಕ್ಷೆಯಂತೆ ಸೋಮವಾರದಿಂದ ಸಮ್ಮಿಶ್ರ ಸರ್ಕಾರ ಬೀಳಿಸುವ ಕಾರ್ಯ ಆರಂಭವಾಗಲಿದೆ ಎನ್ನಲಾಗುತ್ತಿದೆ.

ಬಿಜೆಪಿ ಲೆಕ್ಕಾಚಾರ: ಬಿಜೆಪಿ ಮೂಲಗಳ ಪ್ರಕಾರ ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಸೋಮವಾರವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.  ಅದಾದ ನಂತರ ಉಳಿದ 19 ಕ್ಕೂ ಹೆಚ್ಚು ಶಾಸಕರು ಮಂಗಳವಾರ ಸ್ವಯಂ ಪ್ರೇರಿತರಾಗಿ ವೈಯಕ್ತಿಕ ಕಾರಣ ನೀಡಿ  ವಿಧಾನ ಸಭಾಧ್ಯಕ್ಷರಿಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಒಂದು ವೇಳೆ ವಿಧಾನಸಭಾಧ್ಯಕ್ಷರು ರಾಜೀನಾಮೆ ಅಂಗೀಕರಿಸದಿದ್ದರೆ, ಸಮ್ಮಿಶ್ರ ಸರ್ಕಾರದ ಮೇಲೆ ತಮಗೆ ವಿಶ್ವಾಸ ಇಲ್ಲ ಎಂದು ರಾಜ್ಯಪಾಲರಿಗೂ ರಾಜಿನಾಮೆ ಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಎಲ್ಲ ಬೆಳವಣಿಗೆಯಲ್ಲಿ ಬಿಜೆಪಿಯ ಯಾವುದೇ ಪಾತ್ರ ಇಲ್ಲ ಎನ್ನುವುದನ್ನು ಬಿಂಬಿಸುವಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಏಕ ಪಕ್ಷೀಯ ನಿರ್ಧಾರ, ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡದಿರುವುದು, ಉತ್ತರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಧೋರಣೆಯೇ ಶಾಸಕರ ಈ ನಿರ್ಧಾರಕ್ಕೆ ಕಾರಣ ಎನ್ನುವುದನ್ನು ಬಿಂಬಿಸಿ, ಸಮ್ಮಿಶ್ರ ಸರ್ಕಾರದ ದುರಾಡಳಿತ ಹಾಗೂ ಎರಡೂ ಪಕ್ಷಗಳಲ್ಲಿನ ಹೊಂದಾಣಿಕೆ ಕೊರತೆಯಿಂದ ಸರ್ಕಾರ ಪತನವಾಯಿತು ಎಂಬ ಅಭಿಪ್ರಾಯ ಮೂಡುವಂತೆ ನೋಡಿಕೊಳ್ಳಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಎಲ್ಲ ಶಾಸಕರೂ ಅಂದೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯ ತೂಗುಕತ್ತಿಯಿಂದಲೂ ಪಾರಾಗಲೂ ಕಾನೂನು ಸಲಹೆಯನ್ನೂ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಆರ್ಥಿಕ ಕಾರಣ? : ಸಮ್ಮಿಶ್ರ ಸರ್ಕಾರದಲ್ಲಿ ಬಹುತೇಕ ಶಾಸಕರಿಗೆ ತಮ್ಮ ಕ್ಷೇತ್ರದ ಕೆಲಸಗಳು ಆಗುತ್ತಿಲ್ಲ ಎನ್ನುವುದು ಒಂದು ಕಾರಣವಾದರೆ, ಬಹುತೇಕ ಶಾಸಕರ ಆರ್ಥಿಕ ವ್ಯವಹಾರಗಳೂ ಈ ಬೆಳವಣಿಗೆಗೆ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ. ವೈಯುಕ್ತಿಕವಾಗಿ ಅನೇಕ ಶಾಸಕರಿಗಿರುವ ಆರ್ಥಿಕ ಜವಾಬ್ದಾರಿ ನಿಭಾಯಿಸಿಕೊಳ್ಳಲು ಈ ಬೆಳವಣಿಗೆಗೆ ಮುಂದಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಶಾಸಕರಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಧಿಕಾರ ನೀಡುವ ಭರವಸೆ ನೀಡಿದ್ದರೂ, ಮುಂಬರುವ ಉಪ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿಕೊಂಡು ಬರುವ ಬಗ್ಗೆ ಖಚಿತ ಭರವಸೆ ದೊರೆತಿಲ್ಲ ಎಂದು ಹೇಳಲಾಗುತ್ತಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಶಾಸಕರು ಸೆ. 18 ರಂದು ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಈ ಶಾಸಕರೊಂದಿಗೆ ಮುಳಬಾಗಿಲು ಶಾಸಕ ನಾಗೇಶ್‌ ಹಾಗೂ ರಾಣೆಬೆನ್ನೂರು ಶಾಸಕ ಹಾಗೂ ಅರಣ್ಯ ಸಚಿವ ಆರ್‌. ಶಂಕರ್‌ ಕೂಡ ಬಿಜೆಪಿ ಜೊತೆ ಕೈ ಜೋಡಿಸಲಿದ್ದಾರೆ ಎಂಬುದು ಬಿಜೆಪಿ ಲೆಕ್ಕಾಚಾರ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ ಪ್ರಯತ್ನ
ಆಪರೇಷನ್‌ ಕಮಲಕ್ಕೆ ತುತ್ತಾಗಲು ಮುಂದಾಗಿರುವ ಶಾಸಕರನ್ನು ಪಕ್ಷದಲ್ಲಿಯೇ ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ನಾಯಕರು ನಿರಂತರ ಪ್ರಯತ್ನ ನಡೆಸುತ್ತಿದ್ದು, ಭಾನುವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರಿಗೆ ಆಗಮಿಸಲಿದ್ದು, ಅವರ ಮೂಲಕ ಶಾಸಕರ ವಲಸೆಯನ್ನು ತಡೆಯಲು ಕೈ ನಾಯಕರು ಮುಂದಾಗಿದ್ದಾರೆ.

ಬಿಜೆಪಿ ಲೆಕ್ಕಾಚಾರ ಪಟ್ಟಿಯಲ್ಲಿರುವ ಶಾಸಕರು
ಎಂಟಿಬಿ ನಾಗರಾಜ್‌-ಹೊಸಕೋಟೆ (ಕಾಂ)
ಕೃಷ್ಣಾ ರೆಡ್ಡಿ-ಚಿಂತಾಮಣಿ (ಜೆಡಿಎಸ್‌)
ರಮೇಶ್‌ ಜಾರಕಿಹೊಳಿ-ಗೋಕಾಕ್‌ (ಕಾಂ)
ಮಹೇಶ್‌ ಕಮಟೊಳ್ಳಿ-ಅಥಣಿ (ಕಾಂ)
ಬಸನಗೌಡ ದದ್ದಲ್‌-ರಾಯಚೂರು ಗ್ರಾಮಾಂತರ (ಕಾಂ)
ಪ್ರತಾಪ್‌ಗೌಡ ಪಾಟೀಲ್‌-ಮಸ್ಕಿ (ಕಾಂ)
ಆನಂದ್‌ ಸಿಂಗ್‌-ಹೊಸಪೇಟೆ (ಕಾಂ)
ಜೆ.ಎನ್‌. ಗಣೇಶ್‌- ಕಂಪ್ಲಿ. (ಕಾಂ)
ನಾಗೇಂದ್ರ-ಬಳ್ಳಾರಿ ಗ್ರಾಂ. (ಕಾಂ)
ಎಂ.ವೈ ಪಾಟೀಲ್‌- ಅಫ‌ಜಲ್‌ಪುರ (ಕಾಂ)
ಬಿ.ಸಿ. ಪಾಟೀಲ್‌-ಹಿರೆಕೇರೂರು(ಕಾಂ)
ದೇವಾನಂದ ಚೌಹಾನ್‌-ನಾಗಠಾಣ (ಜೆಡಿಎಸ್‌)
ಸುಬ್ಟಾರೆಡ್ಡಿ-ಬಾಗೇಪಲ್ಲಿ (ಕಾಂ)
ವಿ.ಮುನಿಯಪ್ಪ-ಶಿಡ್ಲಘಟ್ಟ (ಕಾಂ)
ನಂಜೇಗೌಡ-ಮಾಲೂರು (ಕಾಂ)
ಅನಿಲ್‌ ಕುಮಾರ್‌-ಹೆಚ್‌.ಡಿ. ಕೋಟೆ (ಕಾಂ)
ನಾರಾಯಣರಾವ್‌-ಬಸವಕಲ್ಯಾಣ (ಕಾಂ)
ಡಿ.ಎಸ್‌. ಹೂಲಗೇರಿ-ಲಿಂಗಸಗೂರು (ಕಾಂ)
ಶ್ರೀಮಂತ ಪಾಟೀಲ್‌-ಕಾಗವಾಡ (ಜೆಡಿಎಸ್‌)
ಆರ್‌.ಶಂಕರ್‌-ರಾಣೆಬೆನ್ನೂರು (ಪಕ್ಷೇತರ)
ನಾಗೇಶ್‌-ಮುಳಬಾಗಿಲು (ಪಕ್ಷೇತರ)

ಕಾಂಗ್ರೆಸ್‌-ಜೆಡಿಎಸ್‌ನಿಂದಲೇ ಆಪರೇಷನ್‌
ಬೆಂಗಳೂರು:
 ಮೈತ್ರಿ ಸರ್ಕಾರ ಕೆಡವಲು ಹಣ ಸಂಗ್ರಹಕ್ಕೆ ಬಿಜೆಪಿ ಕಿಂಗ್‌ಪಿನ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಆಂತರಿಕ ಕಚ್ಚಾಟದಿಂದಾಗಿ ಆತಂಕಗೊಂಡು ಸರ್ಕಾರ ಉಳಿಸಿಕೊಳ್ಳಲು ಆಪರೇಷನ್‌ ನಡೆಸುತ್ತಿರುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌. ಆದರೆ, ಅನುಕಂಪ ಗಿಟ್ಟಿಸಲು ಮಾಫಿಯಾಗಳ ಹೆಗಲ ಮೇಲೆ ಬಂದೂಕು ಇಟ್ಟು ಬಿಜೆಪಿಗೆ ಗುಂಡು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.