2 ಸಾವಿರ ಜನ ಪ್ರಯಾಣ
Team Udayavani, Jun 23, 2018, 11:38 AM IST
ಬೆಂಗಳೂರು: “ನಮ್ಮ ಮೆಟ್ರೋ’ ಸಾಮರ್ಥ್ಯ ಶನಿವಾರದಿಂದ ದುಪ್ಪಟ್ಟುಗೊಳ್ಳಲಿದ್ದು, 2000 ಜನ ಒಮ್ಮೆಲೆ ಪ್ರಯಾಣಿಸಬಹುದು! ಪ್ರಸ್ತುತ ಮೂರು ಬೋಗಿಗಳ ರೈಲಿನಲ್ಲಿ ಅಬ್ಬಬ್ಟಾ ಎಂದರೆ 975 ಜನ ಪ್ರಯಾಣಿಸಬಹುದು. ಆದರೆ, ಆರು ಬೋಗಿಗಳ ರೈಲಿನ ಪ್ರಯಾಣಿಕರನ್ನು ಕೊಂಡೊಯ್ಯುವ ಸಾಮರ್ಥ್ಯ 2004. ಹೆಚ್ಚುವರಿ ಬೋಗಿಗಳನ್ನು ಒಳಗೊಂಡ ಈ ರೈಲು ಸಂಚಾರಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಿದರು.
ಹೆಚ್ಚು ಸಂಚಾರದಟ್ಟಣೆ ಇರುವ ಮಾರ್ಗದಲ್ಲಿ ಅಂದರೆ ಇಂದಿರಾನಗರದಿಂದ ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಈ ನೂತನ ಆರು ಬೋಗಿಗಳ ಮೆಟ್ರೋ ರೈಲು ಕಾರ್ಯಾಚರಣೆ ನಡೆಸಲಿದೆ. ಉಳಿದಂತೆ ಯಥಾಪ್ರಕಾರ ಮೂರು ಬೋಗಿಗಳ ರೈಲು ಸಂಚಾರ ಇರಲಿದೆ ಎಂದು ಬಿಎಂಆರ್‌ಸಿಲ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಬೋಗಿಗಳ ಸಂಖ್ಯೆ ದುಪ್ಪಟ್ಟಾಗುವುದರಿಂದ ಮೆಟ್ರೋ ವೇಗದಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ. ಗಂಟೆಗೆ ಗರಿಷ್ಠ 80 ಕಿ.ಮೀ. ವೇಗದಲ್ಲಿಯೂ ಈ ರೈಲು ಸಂಚರಿಸುತ್ತದೆ ಎಂದು ತಾಂತ್ರಿಕ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.