ಬೆಂಗಳೂರು ಸ್ಫೋಟ ಪ್ರಕರಣ: 12 ವರ್ಷದ ಬಳಿಕ ಆರೋಪಿ ಸೆರೆ
Team Udayavani, Sep 22, 2020, 11:27 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಹನ್ನೆರೆಡು ವರ್ಷಗಳ ಹಿಂದೆ ನಗರದಲ್ಲಿ ಎಸಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಂಕಿತ ಉಗ್ರ ಶೋಯಬ್ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
2008ರಲ್ಲಿಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶೋಯಬ್ ಭಾಗಿಯಾಗಿದ್ದ.ಘಟನೆ ನಡೆದಾಗಿನಿಂದಲೂ ಆರೋಪಿ ತಲೆಮರೆಸಿ ಕೊಂಡಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳಗಳ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದ್ದು, ಆತನನ್ನು ನಗರಕ್ಕೆಕರೆತರಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಸಿಮಿ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶೋಯಬ್ ಕೇರಳದ ಕಲ್ಲಿಕೋಟೆ ಪ್ರದೇಶದ ನಿವಾಸಿಯಾಗಿದ್ದು, ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದಾನೆ.ಆತನ ಬಂಧನಕ್ಕೆ ತನಿಖಾ ಸಂಸ್ಥೆಗಳು ರೆಡ್‌ಕಾರ್ನರ್ ನೋಟಿಸ್ ಸಹ ಹೊರಡಿಸಿದ್ದವು. ಉಗ್ರ ರಿಯಾಜ್ ಭಟ್ಕಳನ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದ ಶೋಯಬ್, ದೇಶದಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕಗಳನ್ನು ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ್ದ ಎನ್ನಲಾಗಿದೆ.
ದೆಹಲಿಯಲ್ಲಿನ ಹವಾಲಾ ಪ್ರಕರಣದಲ್ಲೂ ಈತ ಭಾಗಿಯಾಗಿದ್ದ. 2008ರಲ್ಲಿ ನಡೆದ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿಯೂ ಪಾಲ್ಗೊಂಡಿರುವ ಶಂಕೆಯಿದೆ. ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. 2008ರ ಜುಲೈ 25ರಂದು ಮಡಿವಾಳ, ಮೈಸೂರು ರಸ್ತೆ ಸೇರಿದಂತೆ ನಗರದ ಒಂಭತ್ತು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಒಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದರು.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಕೇರಳದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಾಜೀರ್ ಮದನಿ ಸೇರಿದಂತೆ ಹಲವರನ್ನು ಬಂಧಿಸಿತ್ತು. ಶೋಯಬ್ ಜತೆಗೆ ಉತ್ತರಪ್ರದೇಶ ಮೂಲದ ಮತ್ತೂಬ್ಬ ಉಗ್ರನನ್ನೂ ಬಂಧಿಸಲಾಗಿದೆ. ಇವರಿಬ್ಬರೂ ಸೌದಿ ಅರೇಬಿಯಾದಿಂದ ತಿರುವನಂತಪುರಂಗೆ ಆಗಮಿಸುತ್ತಿದ ªರು. ಇವರು ಲಷ್ಕರ್ ಹಾಗೂ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.