22ರಿಂದ ನಗರ ಜಿಲ್ಲಾ ಸಾಹಿತ್ಯ ಸಮ್ಮೇಳನ
Team Udayavani, Apr 15, 2017, 11:51 AM IST
ಬೆಂಗಳೂರು: ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 11ನೇ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏ.22 ಮತ್ತು 23ರಂದು ವಿಜಯನಗರದ ಬಿಎಂಟಿಸಿ ಬಸ್ ನಿಲ್ದಾಣದ ಮುಂಭಾಗದ ಮೆಟ್ರೋ ಆವರಣದಲ್ಲಿ ನಡೆಯಲಿದೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ , ಎರಡು ದಿನ ನಡೆಯಲಿರುವ ನಗರ ಜಿಲ್ಲೆ 11ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಚುಟುಕು ಕವಿ ಜರಗನಹಳ್ಳಿ ಶಿವಶಂಕರ್ ಆಯ್ಕೆಯಾಗಿದ್ದಾರೆ. ಏ.22ರಂದು ಬೆಳಗ್ಗೆ 8ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ವಿಜಯನಗರದ ಪ್ರಮುಖ ರಸ್ತೆಗಳ ಮೂಲಕ ಸಮ್ಮೇಳನ ಸಭಾಂಗಣದ ವರೆಗೆ ನಡೆಯಲಿದೆ.
ವಸತಿ ಸಚಿವ ಎಂ.ಕೃಷ್ಣಪ್ಪ ಮೆರವಣಿಗೆ ಉದ್ಘಾಟಿಸಲಿದ್ದಾರೆ. ವೇದಿಕೆ ಕಾರ್ಯಕ್ರಮಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸುವರು ಎಂದು ಹೇಳಿದರು. ಸಮ್ಮೇಳನದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕೃತಿಗಳನ್ನು ಕೇಂದ್ರ ಸಚಿವ ಅನಂತಕುಮಾರ್ ಲೋಕಾರ್ಪಣೆ ಮಾಡುವರು. ಎಸ್.ಜಿ.ಮಾಲತಿ ಶೆಟ್ಟಿ ಅವರ “ಮಹಾಸಂಗಮ’ ಕೃತಿ, ಸ್ಮರಣ ಸಂಚಿಕೆ ಬಿಡುಗಡೆಯಾಗಲಿವೆ.
ಕನ್ನಡ ವಿಜ್ಞಾನ ಮತ್ತು ಮಾಧ್ಯಮ ಕುರಿತ ಮೂರು ವಿಚಾರಗೋಷ್ಠಿಗಳು, ಯುವ ಕವಿಗಳು ಮತ್ತು ಹಿರಿಯ ಕವಿಗಳಿಗಾಗಿ ಎರಡು ಕವಿಗೋಷ್ಠಿಗಳು ನಡೆಯಲಿವೆ. ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ವಿವಿಧ ಕ್ಷೇತ್ರಗಳಲ್ಲಿ ಆದರ್ಶಪ್ರಾಯ ಕೆಲಸ ಮಾಡಿರುವ 110 ಸಾಧಕರಿಗೆ ಸನ್ಮಾನ, ಬಹಿರಂಗ ಅಧಿವೇಶನವಿದ್ದು, ಪ್ರತಿ ದಿನ ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಸಮ್ಮೇಳನಕ್ಕೆ ಹಿರಿಯ, ಕಿರಿಯ ಸಾಹಿತಿಗಳು, ಕವಿಗಳು, ಕನ್ನಡ ಪರಸಂಘಟನೆಗಳು, ಕಲಾವಿದರು, ಹೋರಾಟಗಾರರು, ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಲಿದ್ದಾರೆ. ಪರಭಾಷಿಗರಿಗೆ ಕನ್ನಡದ ಕುರಿತು ಜಾಗೃತಿ ಮೂಡಿಸುವುದರ ಜತೆಗೆ, ಕನ್ನಡ ನಾಡು, ನುಡಿ, ಸಂಸ್ಕೃತಿಯ ಪ್ರಾತಿನಿಧಿಕ ಸಂಸ್ಥೆಯಾಗಿ ಕಸಾಪ ಈ ಸಮ್ಮೇಳನ ಆಯೋಜಿಸಿದೆ.
ಕನ್ನಡ ಉಳಿವು, ಅಭಿವೃದ್ಧಿಗೆ ಪೂರಕವಾಗಿ ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶ್ರಮಿಸುತ್ತಿದ್ದು, ಈ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎಂ.ತಿಮ್ಮಯ್ಯ, ಸಿದ್ದಯ್ಯ, ನಾ.ಶ್ರೀಧರ್, ಪಾಲನೇತ್ರ ಸೇದಂತೆ ಇತರರು ಉಪಸ್ಥಿತರಿದ್ದರು.
ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ
ಬೆಂಗಳೂರು ಇಂಡಿಯನ್ ಎಪಿಲೆಪ್ಸಿ ಅಸೋಸಿಯೇಷನ್ ರಾಷ್ಟ್ರೀಯ ಅಧ್ಯಕ್ಷರಾಗಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಮಾಜಿ ನಿರ್ದೇಶಕ ಡಾ.ಜಿ.ಟಿ. ಸುಭಾಷ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಸ್ಥೆಯ ಸಭೆಯಲ್ಲಿ ಸುಭಾಷ್ ಅವರನ್ನು ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಯಿತು ಎಂದು ಖಜಾಂಚಿ ಡಾ.ಮುರಳೀಧರನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.