ಪ್ರತಿ ವಾರ್ಡ್‌ಗೆ 25 ಲಕ್ಷ ರೂ. ನೆರವು
Team Udayavani, Apr 10, 2020, 11:06 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಪ್ರತಿ ವಾರ್ಡ್‌ನ ಐದು ಸಾವಿರ ಕುಟುಂಬಗಳಿಗೆ ಉಚಿತವಾಗಿ ಆಹಾರ ಸಾಮಗ್ರಿ ಮತ್ತು ಔಷಧಿ ನೀಡಲಾಗುವುದು ಎಂದು ಮೇಯರ್ ಎಂ. ಗೌತಮ್ ಕುಮಾರ್ ತಿಳಿಸಿದರು.
ಕೋವಿಡ್ 19 ವೈರಸ್‌ಗೆ ಸಂಬಂಧಪಟ್ಟಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಮೇಯರ್ ನೇತೃತ್ವದಲ್ಲಿ ಸರ್ವಪಕ್ಷ ಸದಸ್ಯರ ಸಭೆ ನಡೆಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್ ಗೌತಮ್ ಕುಮಾರ್, ಎಲ್ಲ ವಾರ್ಡ್‌ಗಳ ಯೋಜಿತ ಕಾಮಗಾರಿಗಳಿಗೆ ನೀಡುವ ಅನುದಾನದ 2 ಕೋಟಿ ರೂ. ಗಳಲ್ಲಿ ಪ್ರತ್ಯೇಕವಾಗಿ 25 ಲಕ್ಷ ರೂ. ರೂ. ಅನುದಾನವನ್ನು ಮೀಸಲಿಡಲಾಗಿದೆ. ಅದರಲ್ಲಿ ಪ್ರತಿ ವಾರ್ಡ್‌ನಲ್ಲೂ ಅಂದಾಜು 5 ಸಾವಿರ ಆಹಾರ ಧಾನ್ಯಗಳ ಕಿಟ್ ಹಾಗೂ ಔಷಧಿ ವಿತರಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು.
ವಾರ್ಡ್ ಕಮಿಟಿಗಳಿಂದಲೇ ಸ್ಥಳೀಯ ಫಲಾನುಭವಿಗಳ ಆಯ್ಕೆ ಮಾಡಲಾಗುವುದು. ಸಮಿತಿಯಿಂದಲೇ ಅಗತ್ಯವಿರುವರನ್ನು ಗುರುತಿಸಲಾಗುವುದು ಎಂದು ತಿಳಿಸಿದರು. ಉಪ ಮೇಯರ್ ರಾಮಮೋಹನ ರಾಜು, ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್, ಜೆಡಿಎಸ್ ಪಕ್ಷದ ನಾಯಕಿ ನೇತ್ರಾ ನಾರಾಯಣ್, ಮಾಜಿ ಮೇಯರ್ ಗಳು, ಮತ್ತಿತರರು ಹಾಜರಿದ್ದರು.
ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ : ವಲಯವಾರು ಈವರೆಗೆ 885 ಸ್ಥಳಗಳಲ್ಲಿ 72,326 ವಲಸೆ ಕಾರ್ಮಿಕರನ್ನು ಗುರುತಿಸಲಾಗಿದೆ. ಏ.8 (ಬುಧವಾರ)ವರೆಗೆ 41,527 ಕಿಟ್‌ಗಳನ್ನು ವಿತರಿಸಿದ್ದು, ಏ.9 (ಗುರುವಾರ) 25,208 ಕಿಟ್‌ಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಬಿಬಿಎಂಪಿಯಿಂದ ಯಾವುದೇ ಸಭೆ ನಡೆಸದ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳುತ್ತಿರುವ ಕ್ರಮದ ಬಗ್ಗೆ ಪಾಲಿಕೆಯ ಎಲ್ಲ ಸದಸ್ಯರಿಗೆ ಮಾಹಿತಿ ನೀಡುವಂತೆ ಮೇಯರ್ ಗೌತಮ್ ಕುಮಾರ್, ಆಯುಕ್ತರಿಗೆ ಸೂಚನೆ ನೀಡಿದರು. ಅಲ್ಲದೆ, ಬಿಬಿಎಂಪಿಯ 2020-21ನೇ ಸಾಲಿನ ಬಜೆಟ್ ಮಂಡನೆಯ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.