Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!
Team Udayavani, Nov 27, 2024, 10:58 AM IST
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಮಹಿಳೆಯನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವನ್ನಾರಪೇಟೆ ನಿವಾಸಿ ಶಾಂತಿ (30) ಬಂಧಿತೆ. ಆರೋಪಿಗಳಿಂದ 25 ಲಕ್ಷ ರೂ. ಮೌಲ್ಯದ 229 ಗ್ರಾಂ ಚಿನ್ನಾಭರಣ, 21,41 ಗ್ರಾಂ ವಜ್ರದ ಆಭರಣ ಹಾಗೂ 37.28 ಗ್ರಾಂ ಬೆಳ್ಳಿಯ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿತೆ ಶಾಂತಿಗೆ ಈಗಾಗಲೇ ಮದು ವೆ ಯಾಗದ್ದು, ಮಕ್ಕಳು ಇದ್ದು, ಮೇಕಪ್ ಆರ್ಟಿಸ್ಟ್ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಮಾಲಿಕರ ವಿಶ್ವಾಸಗಳಿಸಿ ಹಂತ-ಹಂತವಾಗಿ ಮನೆಯಲ್ಲಿದ್ದ ಚಿನ್ನಾಭರಣ, ವಜ್ರ ಆಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿದ್ದಳು. ಇತ್ತೀಚೆಗೆ ದೂರುದಾರರು ಮನೆಯ ಬೀರು ಪರಿಶೀಲಿಸಿ ದಾಗ ಚಿನ್ನಾಭರಣ ಕಳವು ಆಗಿರುವುದು ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅನುಮಾನದ ಮೇರೆಗೆ ಶಾಂತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ದಾಗ ತಪ್ಪೊಪ್ಪಿಕೊಂಡಿದ್ದಾಳೆ. ನಂತರ ಸಂಪಂಗಿರಾಮ ನಗರದ ಪರಿಚಯಸ್ಥ ಗಿರವಿ ಅಂಗಡಿಯಲ್ಲಿ ಅಡಮಾನ ಇರಿಸಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಆಕೆಗೆ ಠಾಣಾ ಜಾಮೀನು ನೀಡಿ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.