ಶಿಕ್ಷಣ ಸುಧಾರಣೆಗಾಗಿ 26 ಅಂಶಗಳ ಮನವಿ
Team Udayavani, Aug 9, 2018, 12:38 PM IST
ಬೆಂಗಳೂರು: ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಕದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಮತ್ತು ವಿವಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಅತಿ ಶೀಘ್ರವೇ ಭರ್ತಿ ಮಾಡುವುದು ಸೇರಿದಂತೆ ಉನ್ನತ ಶಿಕ್ಷಣದ ಸುಧಾರಣೆಗೆ 26 ಅಂಶಗಳ
ಮನವಿಯನ್ನು ರಾಜ್ಯದ ವಿಶ್ರಾಂತ ಕುಲಪತಿಗಳು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರಿಗೆ ಸಲ್ಲಿಸಿದ್ದಾರೆ.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ರಾಜ್ಯ ವಿಶ್ರಾಂತ ಕುಲಪತಿಗಳ ವೇದಿಕೆಯ ಕಚೇರಿಗೆ ಬುಧವಾರ ಭೇಟಿ ನೀಡಿದ ಸಚಿವರು, ಉನ್ನತ ಶಿಕ್ಷಣದ ಸಮಗ್ರ ಅಭಿವೃದ್ಧಿ ಹಾಗೂ ಉನ್ನತೀಕರಣಕ್ಕಾಗಿ ವಿಶ್ರಾಂತ ಕುಲಪತಿಗಳಿಂದ
ಸಲಹೆ ಪಡೆದರು.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ನೂತನ ನೀತಿ ನಿಯಮ ರಚಿಸುವಾಗ ಹಾಗೂ ಅನುಷ್ಠಾನಗೊಳಿಸುವಾಗ ವಿಶ್ರಾಂತ ಕುಲಪತಿಗಳ ವೇದಿಕೆಯೊಂದಿಗೆ ಸಮಾಲೋಚಿಸಬೇಕು. ಸೆನೇಟ್, ಸಿಂಡಿಕೇಟ್ ಹಾಗೂ ಆಡಳಿತ ಮಂಡಳಿಗಳಲ್ಲಿ ಸದಸ್ಯರನ್ನು ನೇಮಕ ಮಾಡುವಾಗ ಶಿಕ್ಷಣ, ಆರ್ಥಿಕ, ಔದ್ಯೋಗಿಕ, ಕಲೆ, ವಿಜ್ಞಾನ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದವರಿಗೆ ಅದ್ಯತೆ ನೀಡಬೇಕು. ವಿವಿ ಶಿಕ್ಷಣದಲ್ಲಿ ಕೌಶಲಾಭಿವೃದ್ಧಿಗೆ ಒತ್ತು ನೀಡಬೇಕು. ರಾಜ್ಯದ ಒಂದು ವಿವಿಯನ್ನು ಜಾಗತಿಕ ಮಟ್ಟಕ್ಕೆ ಏರಿಸಲು ಅಗತ್ಯ ಕ್ರಮ ರೂಪಿಸಿ ಅನುಷ್ಠಾನ ಮಾಡಬೇಕು. ರಾಜ್ಯ
ಉನ್ನತ ಶಿಕ್ಷಣ ಮತ್ತು ಸಂಶೋಧನಾ ಪರಿಷತ್ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದ ವಿಶ್ವವಿದ್ಯಾಲಯ ಕಾಯ್ದೆ 2000 ಅನ್ನು ಪರಿಶೋಧಿಸಿ ಪುನರ್ ರಚನೆ ಮಾಡಬೇಕು. ವಿವಿಗಳಲ್ಲಿ ಸಂಶೋಧನೆಗೆ ಉತ್ತೇಜನ ನೀಡಲು ಅನುದಾನ ಮೀಸಲಿಡಬೇಕು. ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ವತಿಯಿಂದ ಉನ್ನತ ಶಿಕ್ಷಣ ಸಂಬಂಧ ಸಮಕಾಲೀನ ಸಮಾನತೆಗಳು ಹಾಗೂ ಪರಿಹಾರೋಪಾಯ ಕುರಿತು ರಾಷ್ಟ್ರಮಟ್ಟದ ಸಮ್ಮೇಳನ ಹಮ್ಮಿಕೊಳ್ಳಬೇಕು ಎಂಬುದು ಸೇರಿದಂತೆ 26 ಮನವಿ ನೀಡಲಾಗಿದೆ ಎಂದು ವೇದಿಕೆಯ ಕಾರ್ಯದರ್ಶಿ ಡಾ.ಎನ್.ಆರ್.ಶ್ರೀನಿವಾಸ್‌ಗೌಡ ತಿಳಿಸಿದರು.
ವಿಶ್ರಾಂತ ಕುಲಪತಿಗಳಾಡ ಡಾ.ಎನ್.ಆರ್. ಶೆಟ್ಟಿ, ಡಾ.ಎನ್. ಪ್ರಭುದೇವ್, ಪ್ರೊ.ಕೆ.ಎಸ್. ರಂಗಪ್ಪ ಉಪಸ್ಥಿತರಿದ್ದರು.
ಶೈಕ್ಷಣಿಕ ಮೂಲಸೌಕರ್ಯಕ್ಕೆ ಒತ್ತು ವಿಶ್ವವಿದ್ಯಾಲಯಗಳಲ್ಲಿ ಹೆಚ್ಚಿನ ಸ್ವಾಯತ್ತತೆ ಮತ್ತು ಹೊಣೆಗಾರಿಕೆ ಇರುವಂತೆ ಆಡಳಿತ ನಡೆಯಬೇಕು. ಸಂಶೋಧನೆಗೆ ಒತ್ತು ಕೊಡುವ ಮೂಲ ಸೌಕರ್ಯ, ಆರ್ಥಿಕ ಸಂಪನ್ಮೂಲ ಒದಗಿಸಬೇಕು. ವಿಶಿಷ್ಟ ಅಧ್ಯಯನ ವಿಷಯಗಳ ಸಂಬಂಧ ನೂತನ ವಿವಿ ಸ್ಥಾಪಿಸುವ ಬದಲು ಅಂತಹ ಅಧ್ಯಯನದ ವಿಷಯಗಳಿಗೆ ಸಂಬಂಧಿಸಿದಂತೆ ಉನ್ನತ ಪ್ರಾದೇಶಿಕ ಕೇಂದ್ರ ರಚನೆ ಮಾಡಬೇಕು ಎಂದು ವಿಶ್ರಾಂತ ಕುಲಪತಿಗಳು ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.