280 ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನಿಸಿದವನ ಬಂಧನ
Team Udayavani, Jan 30, 2017, 11:52 AM IST
ಶಿಡ್ಲಘಟ್ಟ: ತಾಲೂಕಿನ ಬಾಳೇಗೌಡನಹಳ್ಳಿ ಗ್ರಾಮದ ಮನೆಯೊಂದರ ಮೇಲೆ ದಾಳಿ ನಡೆಸಿದ ದಿಬ್ಬೂರಹಳ್ಳಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಐಡಿ ತಂಡ, ಲಕ್ಷಾಂತರ ರೂ.ಮೌಲ್ಯದ 280 ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡು, ಆರೋ ಪಿಯನ್ನು ಬಂಧಿಸಿದೆ.
ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೇಗೌಡನಹಳ್ಳಿ ಗ್ರಾಮದ ವಿಜಯ್ ಬಂಧಿತ ಆರೋಪಿ. ಆತನ ಮನೆಯಲ್ಲಿ ನಕ್ಷತ್ರ ಆಮೆಗಳಿವೆ ಎಂಬ ಖಚಿತ ಮಾಹಿತಿ ಮೇರೆಗೆ ಜಂಟಿಯಾಗಿ ದಾಳಿ ನಡೆಸಿದ ಅರಣ್ಯ ಇಲಾಖೆಯ ಸಿಐಡಿ ವಿಭಾಗದ ಸಿಪಿಐ ಪುರುಷೋತ್ತಮ್ ಹಾಗೂ ದಿಬ್ಬೂರಹಳ್ಳಿ ಠಾಣೆಯ ಎಸ್‌ಐ ವಿಜಯ್‌ರೆಡ್ಡಿ ನೇತೃತ್ವದ ತಂಡ, 280 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದೆ.
ದೆಹಲಿಗೆ ಸಾಗಣೆ ಮಾಡುವ ಉದ್ದೇಶ: ಆಂಧ್ರಪ್ರದೇಶದ ಕದ್ರಿಯಿಂದ ಖರೀದಿಸಿ ತಂದಿದ್ದ ನಕ್ಷತ್ರ ಆಮೆಗಳನ್ನು ಮಾರಾಟಕ್ಕಾಗಿ ದೆಹಲಿಗೆ ಸಾಗಣೆ ಮಾಡುವ ಉದ್ದೇಶದಿಂದ ಮನೆಯಲ್ಲಿ ಇರಿಸಿಕೊಂಡಿದ್ದಾಗಿ ಆರೋಪಿ ವಿಜಯ್ ವಿಚಾರಣೆ ವೇಳೆ ತಿಳಿಸಿದ್ದಾನೆ. ತೀವ್ರ ವಿಚಾರಣೆ ನಂತರ ಹೆಚ್ಚಿನ ಮಾಹಿತಿ ದೊರೆಯಲಿದೆ ಎಂದು ದಿಬ್ಬೂರಹಳ್ಳಿ ಪೊಲೀಸರು ಇಳಿಸಿದ್ದಾರೆ.
ತಾಲೂಕಿನ ಗಡಿ ಪ್ರದೇಶವಾದ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಕ್ರಮ ಮರಳು ಸಾಗಾಣಿಕೆ, ಎರಡು ತಲೆ ಹಾವುಗಳ ಮಾರಾಟ ಪ್ರಕರಣಗಳು ದಾಖಲಾಗಿದ್ದವು. ಇದೀಗ ನಕ್ಷತ್ರ ಆಮೆಗಳ ಪ್ರಕರಣ ಬಯಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ದಿಬ್ಬೂರಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.