ಸೇವಾ ಕ್ಷೇತ್ರದಿಂದ 3 ಟ್ರಿಲಿಯನ್ ಡಾಲರ್ ನಿರೀಕ್ಷೆ
Team Udayavani, Nov 27, 2019, 3:08 AM IST
ಬೆಂಗಳೂರು: ಮುಂದಿನ 5 ವರ್ಷಗಳಲ್ಲಿ ಭಾರತದ ಉದ್ದೇಶಿರುವ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಸೇವಾ ಕ್ಷೇತ್ರದಿಂದ 3 ಟ್ರಿಲಿಯನ್ ಡಾಲರ್ ಕೊಡುಗೆ ನಿರೀಕ್ಷೆ ಹೊಂದಿದೆ ಎಂದು ಕೇಂದ್ರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಪಿಯೂಶ್ ಗೋಯೆಲ್ ಹೇಳಿದರು.
ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ, ಭಾರತೀಯ ಕೈಗಾರಿಕೆಗಳ ಒಕ್ಕೂಟ, ಸರ್ವಿಸ್ ಎಕ್ಸ್ ಪೋರ್ಟ್ ಪ್ರಮೋಷನಲ್ ಕೌನ್ಸಿಲ್ ಸಹಯೋಗದಲ್ಲಿ ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ 3 ದಿನಗಳ “ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವೀಸಸ್’ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಕೊಡುಗೆ ನಿರೀಕ್ಷೆ: ಸೇವಾ ಕ್ಷೇತ್ರ ದೇಶದಲ್ಲಿಯೇ ಅತೀ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕ್ಷೇತ್ರವಾಗಿದೆ. ದೇಶದ ಜಿಡಿಪಿಗೆ ಸೇವಾ ಕ್ಷೇತ್ರದ ಕೊಡುಗೆ ಅಪಾರವಿದೆ. ದೇಶದ ಆರ್ಥಿಕತೆ ಎಂಜಿನ್‌ನಂತಿರುವ ಉತ್ಪಾದನೆ ಹಾಗೂ ಸೇವಾ ಕ್ಷೇತ್ರ ಜೊತೆ ಜೊತೆಯಲ್ಲೇ ಸಾಗಬೇಕಾಗಿದೆ. ಈ ಮೂಲಕ ಮುಂದಿನ 5 ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ದೇಶದ ಆರ್ಥಿಕತೆ ಗುರಿ ಸಾಧನೆಗೆ ಕೊಡುಗೆ ನೀಡುವ ನಿರೀಕ್ಷೆಯಿದೆ ಎಂದರು.
ಸಂತಸ ತಂದಿದೆ: ಸೇವಾ ವಲಯದ ವೈದ್ಯಕೀಯ, ಮಾಹಿತಿ ತಂತ್ರಜ್ಞಾನ, ಆ್ಯನಿಮೇಶನ್ ಮತ್ತು ಗೇಮಿಂಗ್, ಆರೋಗ್ಯ, ಶಿಕ್ಷಣ ಕ್ಷೇತ್ರಗಳು ಜಾಗತಿಕ ಗುಣಮಟ್ಟ ಹೊಂದಿವೆ. ಈ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಅಪಾರ ಅವಕಾಶಗಳಿವೆ. ಇಂದು ಜಗತ್ತಿನಲ್ಲಿ ಭಾರತಕ್ಕೆ ಮಹತ್ವದ ಸ್ಥಾನ ದೊರೆಯಲು ಈ ಪ್ರತಿಭಾನ್ವಿತರ ಕೊಡುಗೆಯೂ ಪ್ರಮುಖವಾಗಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಸೇವಾ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಈ ಬಾರಿ ಜಾಗತಿಕ ಸೇವಾ ವಸ್ತುಪ್ರದರ್ಶನ ಆಯೋಜಿಸಿರುವುದು ಸಂತಸ ತಂದಿದೆ ಎಂದು ಹೇಳಿದರು.
ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗ ದೀಶ್ ಶೆಟ್ಟರ್ ಮಾತನಾಡಿ, ಸರ್ಕಾರ ಜಾರಿಗೊಳಿಸಿ ರುವ ಮತ್ತು ರೂಪಿಸಿರುವ ಕಾರ್ಯತಂತ್ರಗಳು ಸ್ಥಳೀಯತೆ ಹೊಂದಿವೆ. ಬಹುನಿರೀಕ್ಷಿತ ಕ್ಲಸ್ಟರ್ ಅಭಿ ವೃದ್ಧಿ ಯೋಜನೆಯನ್ನು 9 ಜಿಲ್ಲೆಗಳಲ್ಲಿ ಅನುಷ್ಠಾನ ಗೊಳಿಸುವ ಮೂಲಕ ಅಲ್ಲಿನ ಉತ್ಪಾದನೆಗೆ ಅನುಗುಣ ವಾಗಿ ಕೈಗಾರಿಕೆಗಳನ್ನು ಸ್ಥಾಪಿಸಲು ಅನುಕೂಲ ಮಾಡಿಕೊಡಲಾಗುತ್ತಿದೆ. ಸರ್ಕಾರದ ಮಹತ್ವಾಕಾಂಕ್ಷೆ ಆಯುಷ್, ನ್ಯಾಚುರೋಪತಿ ಮತ್ತು ಇತರೆ ಯೋಗ ಕ್ಷೇಮ ಸೇವೆಗಳನ್ನು ಒಂದೇ ಕಡೆ ದೊರೆಯುವಂತೆ ಮಾಡಲಾಗುತ್ತದೆ. ಗ್ರಾಮಾಂತರ ಪ್ರದೇಶಗಳಲ್ಲಿ ಮೊಬೈಲ್ ಎಟಿಎಂ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
2 ಕೋಟಿ ಯುವಕರಿಗೆ ಕೌಶಲ್ಯ ತರಬೇತಿ
ಬೆಂಗಳೂರು: ರಾಜ್ಯದಲ್ಲಿ 2017 ರಿಂದ 2030ರ ಅವಧಿಯಲ್ಲಿ 2 ಕೋಟಿಗೂ ಅಧಿಕ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಗುರಿಯನ್ನು ರಾಜ್ಯ-ಕೇಂದ್ರ ಸರ್ಕಾರ ಹೊಂದಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ನಗರದ ಅರಮನೆ ಆವರಣದಲ್ಲಿ ನಡೆಯುತ್ತಿರುವ 3 ದಿನಗಳ “ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವೀಸಸ್(ಜಿಐಎಸ್)’ಸಮಾವೇಶದಲ್ಲಿ ಮಾತನಾಡಿದರು.
ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು), ಐಐಎಸ್‌ಸಿ, ಐಐಎಂ ಮತ್ತು ಐಐಟಿಯಂತಹ ಖ್ಯಾತನಾಮ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಕರ್ನಾಟಕ, ಪ್ರತಿಭಾನ್ವಿತ ಮಾನವ ಶಕ್ತಿಯನ್ನು ಸೃಷ್ಟಿ ಮಾಡುತ್ತಿದೆ. 2017-2030 ರ ಅವಧಿಯಲ್ಲಿ ಕರ್ನಾಟಕ 2 ಕೋಟಿಗೂ ಅಧಿಕ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಿದ್ದು, ಇದಕ್ಕೆ ಪೂರಕ ಮೂಲಸೌಕರ್ಯ ಗಳನ್ನು ಸರ್ಕಾರ ಒದಗಿಸುತ್ತಿದೆ ಎಂದರು.
ಈಗಾಗಲೇ ರಾಜ್ಯದ 1,700 ಕ್ಕೂ ಅಧಿಕ ಐಟಿಐ ಮತ್ತು 290 ಪಾಲಿಟೆಕ್ನಿಕ್‌ಗಳು ಯುವಕರಿಗೆ ಕೌಶಲ್ಯ ತರಬೇತಿ ನೀಡುತ್ತಿವೆ. ಬಾಹ್ಯಾಕಾಶ, ಕೃಷಿ ವ್ಯಾಪಾರ, ಬಯೋಟೆಕ್, ಮೂಲಸೌಕರ್ಯ, ಮಾಹಿತಿ ತಂತ್ರಜ್ಞಾನ ಮತ್ತು ಸ್ಟಾರ್ಟ್‌ಅಪ್ ಕಂಪನಿಗಳ ಉನ್ನತಿಗೆ ಪೂರಕ ನೀತಿಗಳಿಂದ ರಾಜ್ಯ ಸೇವಾ ವಲಯ ಪ್ರಮುಖ ಪಾತ್ರವಹಿಸಿದೆ ಎಂದು ತಿಳಿಸಿದರು. ಹಲವಾರು ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನು ಕರ್ನಾಟಕ ಹೊಂದಿದೆ. ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಯಶಸ್ವಿಯಾಗಿದ್ದು ಅಸಂಖ್ಯಾತ ಜನರಿಗೆ ಪ್ರಯೋಜನವಾಗುತ್ತದೆಂದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಕರ್ನಾಟಕದಲ್ಲಿನ ಸೇವಾ ಕ್ಷೇತ್ರ ರಾಜ್ಯದ ಜಿಎಸ್‌ಡಿಪಿಗೆ ಶೇ.68 ಕ್ಕಿಂತಲೂ ಅಧಿಕ ಕೊಡುಗೆ ನೀಡುತ್ತಿದೆ. ಕರ್ನಾಟಕದ ಆರ್ಥಿಕ ಸಮೀಕ್ಷೆ ಪ್ರಕಾರ 2018-19 ನೇ ಹಣಕಾಸು ಸಾಲಿನಲ್ಲಿ ಸೇವಾ ಕ್ಷೇತ್ರ ಶೇ.12.3 ಪ್ರಗತಿ ಕಾಣಲಿದೆ ಎಂದರು. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ರಾಜ್ಯದ ಒಟ್ಟು ದೇಸೀಯ ಉತ್ಪನ್ನಕ್ಕೆ ಶೇ.68 ಕೊಡುಗೆಯನ್ನು ಸೇವಾ ವಲಯ ನೀಡುತ್ತಿದೆ ಎಂದು ತಿಳಿಸಿದರು.
55 ದೇಶದ ಪ್ರತಿನಿಧಿಗಳು ಭಾಗಿ: ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ಪ್ರದರ್ಷನ ಇದಾಗಿದ್ದು, ಆಯುಷ್ ಪ್ರವಾಸೋದ್ಯಮ, ನಾಗರಿಕ ವಿಮಾನಯಾನ, ವಸತಿ ಮತ್ತು ನಗರ ವ್ಯವಹಾರಗಳು, ದೂರಸಂಪರ್ಕ ಇಲಾಖೆಗಳು, ಎಲೆಕ್ಟ್ರಾನಿಕ್ಸ್, ಐಟಿ, ರೈಲ್ವೇಸ್, ಎಂಎಸ್‌ಎಂಇ, ಲಾಜಿಸ್ಟಿಕ್, ಅಂಚೆ ಸೇರಿದಂತೆ 211 ಪ್ರದರ್ಶಕರು ಭಾಗವಹಿಸಿದ್ದಾರೆ. ಪ್ರಮುಖವಾಗಿ ಕರ್ನಾಟಕ, ಉತ್ತರಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ, ಕೇರಳ, ತೆಲಂಗಾಣ, ಗುಜರಾತ್ ಸೇರಿದಂತೆ ಮತ್ತಿತರೆ ರಾಜ್ಯಗಳು ತಮ್ಮ ಸೇವಾ ವಲಯಕ್ಕೆ ಸಂಬಂಧಿಸಿದ ಪ್ರಾತ್ಯಕ್ಷಿಕೆಗಳನ್ನು ಇಲ್ಲಿ ನೀಡುತ್ತಿವೆ. ವಿದೇಶದ 300 ಕ್ಕೂ ಹೆಚ್ಚು ಖರೀದಿದಾರರು, 55 ದೇಶಗಳ ಪ್ರತಿನಿಧಿಗಳು, 80 ಉಪನ್ಯಾಸಕರು ಪಾಲ್ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.