ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಾ.ಅಶ್ವತ್ಥನಾರಾಯಣ
ಬೆಂಗಳೂರು ಟೆಕ್ ಸಮ್ಮಿಟ್-2020ಯಲ್ಲಿ ಡಾ.ಅಶ್ವತ್ಥನಾರಾಯಣ ಘೋಷಣೆ
Team Udayavani, Nov 19, 2020, 12:01 PM IST
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಭಾನುವಾರ ನಡೆದ ಬೆಂಗಳೂರು ಟೆಕ್ ಸಮ್ಮಿಟ್ -2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 52 ಶತಕೋಟಿ ಡಾಲರ್‌ವಷ್ಟು ಡಿಜಿಟಲ್ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಪಂಚವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹಾಕಿಕೊಂಡಿರುವ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರಕಾರ ಕೈಗೊಂಡಿದೆ ಎಂದರು.
ಇದನ್ನೂ ಓದಿ:ಬೆಂಗಳೂರು ಟೆಕ್ ಸಮಿಟ್-2020 ಗೆ ಸಿಎಂ ಯಡಿಯೂರಪ್ಪ ಚಾಲನೆ
ಪ್ರಧಾನಮಂತ್ರಿ ಮೋದಿ ಅವರು ನಿಗದಿಪಡಿಸಿರುವ ಒಂದು ಟ್ರಿಲಿಯನ್ ಡಿಜಿಟಲ್ ಆರ್ಥಿಕತೆಯ ಗುರಿಗೆ ಹೆಚ್ಚಿನ ಕೊಡುಗೆ ನೀಡಲು ಕರ್ನಾಟಕ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಂಡು ಐಟಿ-ಬಿಟಿ ಸೇರಿದಂತೆ ಸರ್ವ ಕ್ಷೇತ್ರಗಳಲ್ಲೂ ಸುಧಾರಣೆಗಳನ್ನು ತರಲಾಗಿದೆ. ನಿಗದಿತ ಗುರಿಯನ್ನು ತಪ್ಪದೇ ಮುಟ್ಟಲಾಗುವುದು ಎಂದು ಹೇಳಿದರು.
ಡಿಜಿಟಲ್ ಆರ್ಥಿಕತೆಯ ಗುರಿ ತಲುಪಲು ರಾಜ್ಯವು ಈಗಾಗಲೇ ಡಿಜಿಟಲ್ ಎಕಾನಮಿ ಮಿಷನ್ ಸ್ಥಾಪನೆ ಮಾಡಿ ಕಾರ್ಯಪ್ರವೃತ್ತವಾಗಿದೆ. ತಂತ್ರಜ್ಞಾನದ ಮೂಲಕ ಆರ್ಥಿಕತೆಗೆ ವೇಗ ನೀಡುವುದು ಈ ಮಿಷನ್ ಉದ್ದೇಶವಾಗಿದೆ. ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಇನ್‌ವೆಸ್ಟ್ ಇಂಡಿಯಾ ಮೂಲಕ ಜಾಗತಿಕ ಸಂಪರ್ಕಗಳನ್ನು ಕರ್ನಾಟಕದ ಜತೆ ಅನುಸಂಧಾನಗೊಳಿಸುತ್ತಿದ್ದು, ಈ ಉಪಕ್ರಮದಿಂದ ಕರ್ನಾಟಕದ ತಂತ್ರಜ್ಞಾನ ಉದ್ಯಮ ಮತ್ತು ರಾಜ್ಯದ ಬ್ರಾಂಡ್ ಈಕ್ವಿಟಿಯನ್ನು ಉತ್ತಮಗೊಳಿಸುತ್ತಿದೆ. ಈ ಮೂಲಕ ಮುಂದಿನ ಮೈಲುಗಲ್ಲು ಸಾಧಿಸಲಾಗುವುದು. ಇದಕ್ಕೆ ಪೂರಕವಾಗಿ ಹೊಸ ತಲೆಮಾರಿನ ನವೋದ್ಯಮ, ಐಟಿ ಬಿಟಿ ಜತೆಗೆ ಎಲೆಕ್ಟ್ರಾನಿಕ್ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.