ಚುನಾವಣಾ ಕಾರ್ಯಕ್ಕೆ 3300 ಬಸ್
Team Udayavani, Apr 17, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ 18ರಂದು ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣಾ ಕಾರ್ಯಕ್ಕೆ ಕೆಎಸ್‌ಆರ್‌ಟಿಸಿಯು 3,300 ಬಸ್‌ಗಳನ್ನು ಒದಗಿಸಿದ್ದು, ಸಾರ್ವಜನಿಕರಿಗೆ ಅನನುಕೂಲ ಆಗದಂತೆ ಹಾಗೂ ಮತದಾನ ಮಾಡಲು ತೆರಳುವವರಿಗೆ ಅನುಕೂಲ ಆಗುವಂತೆ ಹಲವು ಕ್ರಮಗಳನ್ನು ಕೈಗೊಂಡಿದೆ.
17 ಮತ್ತು 18ರಂದು ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯ ಸುಮಾರು 200 ಬಸ್‌ಗಳನ್ನು ಹೆಚ್ಚುವರಿಯಾಗಿ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಇನ್ನೂ ಹೆಚ್ಚಿನ ಬಸ್‌ಗಳ ಅವಶ್ಯಕತೆ ಇದ್ದಲ್ಲಿ, ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಬಿಎಂಟಿಸಿಯಿಂದ ಇನ್ನಷ್ಟು ಬಸ್‌ಗಳ ವ್ಯವಸ್ಥೆ ಮಾಡಲಾಗುವುದು.
ಇದಲ್ಲದೆ, ಹೆಚ್ಚು ಜನದಟ್ಟಣೆ ಇಲ್ಲದ ಮತ್ತು ಅನಿವಾರ್ಯವಲ್ಲದ ಮಾರ್ಗಗಳಲ್ಲಿ ಕಡಿಮೆ ಬಸ್‌ಗಳನ್ನು ನಿಯೋಜಿಸಿ, ಹೆಚ್ಚು ದಟ್ಟಣೆ ಇರುವ ಕಡೆಗಳಲ್ಲಿ ಕಾರ್ಯಾಚರಣೆ ಮಾಡಲಾಗುವುದು. ತಾಲ್ಲೂಕು ಕೇಂದ್ರದಿಂದ ಇತರೆ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಹೆಚ್ಚುವರಿ ಸೇವೆ ಕಲ್ಪಿಸಲಾಗುವುದು. ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರ ಮತ್ತು ಬೆಂಗಳೂರು ನಡುವೆ ಹೆಚ್ಚುವರಿ ಸೇವೆ ಒದಗಿಸಲಾಗುವುದು.
ಅಷ್ಟೇ ಅಲ್ಲ, ಉತ್ತರ ಕರ್ನಾಟಕ ಭಾಗದಲ್ಲಿ ಎರಡನೇ ಹಂತದಲ್ಲಿ ಏಪ್ರಿಲ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ಮತ ಚಲಾಯಿಸಲು ತೆರಳುವವರಿಗೆ ಈಶಾನ್ಯ ಮತ್ತು ವಾಯವ್ಯ ರಸ್ತೆ ಸಾರಿಗೆ ನಿಗಮಗಳಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !
Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್ ಫಿಕ್ಸ್
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.