35 ಜೋಡಿ ದಾಂಪತ್ಯಕ್ಕೆ
Team Udayavani, Feb 2, 2017, 11:37 AM IST
ಬೆಂಗಳೂರು: ಅಲ್ಲಿ ಒಂದು ಅಂಧ ಜೋಡಿಯೂ ಸೇರಿದಂತೆ 35 ಜೋಡಿ ನವ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವಿವಿಧ ಮಠಾಧೀಶರು, ಸಾಹಿತಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಇದಕ್ಕೆ ಸಾಕ್ಷಿಯಾಗಿ ನವ ಜೋಡಿಗಳನ್ನು ನೂರು ಕಾಲ ಬಾಳುವಂತೆ ಹರಿಸಿದರು.
ಈ ಸಮಾರಂಭ ನಡೆದದ್ದು, ಬನಶಂಕರಿಯ ಶ್ರೀ ಬನಶಂಕರಿ ದೇವಿಯ ದೇವಸ್ಥಾನದಲ್ಲಿ. ಬನಶಂಕರಿ ಸಾಮೂಹಿಕ ವೇದಿಕೆ ಬುಧವಾರ ದೇವಾಲಯದಲ್ಲಿ ಆಯೋಜಿಸಿದ್ದ 18ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 35 ನವ ಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟರು.
ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ, ಸಾಹಿತಿ ಡಾ.ಎಂ. ಚಿದಾನಂದಮೂರ್ತಿ, ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ, ಸಚಿವ ರಾಮಲಿಂಗಾರೆಡ್ಡಿ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಮೇಯರ್ ಜಿ.ಪದ್ಮಾವತಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ನವ ವಧು-ವರರನ್ನು ಆಶೀರ್ವದಿಸಿದರು.
ವಧುಗಳಿಗೆ ಉಚಿತ ತಾಳಿ, ಕಾಲುಂಗುರ, ರೇಷ್ಮೆ ಸೀರೆ, ವರರಿಗೆ ಬಿಳಿ ಅಂಗಿ, ಪಂಚೆ, ಬಾಸಿಂಗ, ಶಲ್ಯ ಪೇಟ ಮತ್ತಿತರ ವಿವಾಹಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಯಿತು. ವಧು-ವರರ ಕಡೆಯ ಸಂಬಂಧಿಕರಿಗೆ ಉಚಿತ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.