7 ವರ್ಷದಲ್ಲಿ 4.91 ಲಕ್ಷ ಕರೆ ಸ್ವೀಕಾರ

Team Udayavani, Feb 25, 2020, 3:06 AM IST

7varshadalli

ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಎಲ್ಲಿ ಸಲ್ಲಿಸಬೇಕು. ಆಧಾರ್‌ ನೋಂದಣಿ ಎಂಬಿತ್ಯಾದಿ ಮಾಹಿತಿ ಪಡೆಯಲು ರಾಜ್ಯಾದ್ಯಂತ ಈವರೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ನಿಯಂತ್ರಣ ಕೊಠಡಿಗೆ 4.91 ಲಕ್ಷ ಕರೆಗಳು ಬಂದಿವೆ.

ಆಹಾರ ಇಲಾಖೆ 2013ರಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿದ್ದು, “1967′ ಉಚಿತ ದೂರವಾಣಿ ಸಂಖ್ಯೆಯನ್ನು ಪಡಿತರ ಚೀಟಿ ಹಿಂಬದಿ ಮುದ್ರಿಸಲಾಗಿದೆ. ರಾಜ್ಯಾದ್ಯಂತ ಕರೆಗಳು ಬರುತ್ತಿದ್ದು, ನಿಯಂತ್ರಣ ಕೊಠಡಿಯಲ್ಲಿರುವ 8 ಸಿಬ್ಬಂದಿ ಮಾಹಿತಿ ನೀಡುತ್ತಿದ್ದಾರೆ.

ಪ್ರತಿದಿನ 250 ಕರೆಗಳು: ಪಡಿತರ ಚೀಟಿಗೆ ಅರ್ಜಿ ಎಲ್ಲಿ ಸಲ್ಲಿಸಬೇಕು. ಹೆಸರು ಸೇರ್ಪಡೆಗೆ ಏನು ಮಾಡಬೇಕು. ನಮ್ಮ ವಾರ್ಡ್‌ನ ನ್ಯಾಯಬೆಲೆ ಅಂಗಡಿ ಎಲ್ಲಿದೆ. ಬಯೋಮೆಟ್ರಿಕ್‌ ಕಡ್ಡಾಯವೇ?, ಪಡಿತರ ಚೀಟಿಗೆ ಆಧಾರ್‌ ನೋಂದಣಿ ಹೀಗೆ ವಿವಿಧ ಮಾಹಿತಿ ಕೇಳಲು ಸಹಾಯವಾಣಿ ಸಂಖ್ಯೆಗೆ ಪ್ರತಿದಿನ ಸುಮಾರು 250ಕ್ಕೂ ಕರೆಗಳು ಬರುತ್ತವೆ. ದೂರುಗಳು ಬರುವುದು ಕಡಿಮೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

7 ವರ್ಷದಲ್ಲಿ 780 ದೂರುಗಳು ವಿಲೇವಾರಿ: ಧಾನ್ಯಗಳ ಗುಣಮಟ್ಟ, ನ್ಯಾಯಬೆಲೆ ಅಂಗಡಿಯವರ ನಡವಳಿಕೆ, ನಿಗದಿ ಪಡಿಸಿದ್ದಕ್ಕಿಂತ ಕಡಿಮೆ ಅನ್ನಭಾಗ್ಯ ಅಕ್ಕಿ ನೀಡುವ ಕುರಿತು 2013ರಿಂದ ಈವರಗೆ 797 ದೂರುಗಳು ಬಂದಿದ್ದು, ಅದರಲ್ಲಿ 780 ದೂರು ವಿಲೇವಾರಿಯಾಗಿವೆ. 2013-14ರಲ್ಲಿ 229, 2014-15ರಲ್ಲಿ 168, 2015-16ರಲ್ಲಿ 100, 2016-17ರಲ್ಲಿ 86, 2017-18ರಲ್ಲಿ 125, 2018-19ರಲ್ಲಿ 42, 2019-20ನೇ ಸಾಲಿನ ಫೆ.20ರ ವರೆಗೆ 30 ದೂರುಗಳು ವಿಲೇವಾರಿಯಾಗಿವೆ.

ಬಾಕಿ ಇವೆ ದೂರುಗಳು: ನಿಯಂತ್ರಣ ಕೊಠಡಿಗೆ ಬರುವ ದೂರುಗಳನ್ನು ಕೇಂದ್ರ ಕಚೇರಿಯ ಸಿಬ್ಬಂದಿ ಸಂಬಂಧ ಪಟ್ಟ ಜಿಲ್ಲೆಯ ಅಧಿಕಾರಿಗೆ ಆನ್‌ಲೈನ್‌ ಮೂಲಕ ದೂರಿನ ಪ್ರತಿಯನ್ನು ಕಳುಹಿಸಿ ಸಮಸ್ಯೆ ಪರಿಹರಿಸಲು ಸೂಚಿಸುತ್ತಾರೆ.

7 ದಿನಗಳಲ್ಲಿ ಸಮಸ್ಯೆ ಪರಿಹರಿಸಿ ಕೇಂದ್ರ: ಕಚೇರಿಗೆ ವರದಿ ನೀಡಬೇಕು. ಒಂದು ವೇಳೆ ಸಮಸ್ಯೆ ಹಾಗೇ ಮುಂದುವರಿದರೆ ಅಂತಹ ಅಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಗೆ ಕರೆಯಲಾಗುತ್ತದೆ. 2014-15, 16-17ನೇ ಸಾಲಿನಲ್ಲಿ ತಲಾ 1 ದೂರು, 2017-18ರಲ್ಲಿ 3, 2018-19ರಲ್ಲಿ 2, 2019-20 ಸಾಲಿನಲ್ಲಿ 10 ದೂರುಗಳು ಸೇರಿ ಒಟ್ಟಾರೆ 17 ದೂರುಗಳು ವಿಲೇಯಾಗದೇ ಬಾಕಿ ಉಳಿದಿವೆ.

ವರ್ಷ ಸ್ವೀಕರಿಸಿದ ಕರೆಗಳು
2013-14 17,154
2014-15 92,197
2015-16 60,494
2016-17 1,05,918
2017-18 1,24,154
2018-19 47,714
2019-20(ಫೆ.20) 43,419
ಒಟ್ಟು 4,91,050

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.