ಹೆದ್ದಾರಿ ಅಭಿವೃದ್ಧಿಗಾಗಿ ಕೇಂದ್ರಕ್ಕೆ 4 ಪ್ರಸ್ತಾವನೆ
Team Udayavani, Jun 19, 2018, 6:35 AM IST
ಬೆಂಗಳೂರು: ರಾಜ್ಯದ ರಸ್ತೆಗಳ ಅಭಿವೃದ್ಧಿ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸೋಮವಾರ ದೆಹಲಿಯಲ್ಲಿ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಾಲ್ಕು ಹೊಸ
ಪ್ರಸ್ತಾವನೆಗಳನ್ನು ಕೇಂದ್ರದ ಮುಂದಿಟ್ಟಿದ್ದಾರೆ.
ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರ ರಾಜ್ಯದ ರಸ್ತೆ ಅಭಿವೃದಿಟಛಿಗೆ ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಮತ್ತಷ್ಟುಯೋಜನೆಗಳನ್ನು ಹಮ್ಮಿಕೊಳ್ಳಲು ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಿದರು.
ಕೇಂದ್ರದ ನೆರವಿನೊಂದಿಗೆ ರಾಜ್ಯದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರಸ್ತೆ, ನದಿ ಅಭಿವೃದ್ಧಿ, ಜಲ ಸಂಪನ್ಮೂಲ ಕಾರ್ಯ ಕ್ರಮಗಳಿಗೆ ರಾಜ್ಯ ಸರ್ಕಾರ ಸಂಪೂರ್ಣ ನೆರವು ನೀಡುವುದಾಗಿ ಭರ ವಸೆ ನೀಡಿದ ಮುಖ್ಯಮಂತ್ರಿ, ರಾಜ್ಯದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿರುವ ರಸ್ತೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗಳಿಗೆ ಶೀಘ್ರ ಅನುಮೋದನೆ ನೀಡುವಂತೆ ಕೋರಿದರು.
34 ಸಾವಿರ ಕೋಟಿ ರೂ.ವೆಚ್ಚದ ಪ್ರಸ್ತಾ ವನೆಗೆ ಒಪ್ಪಿಗೆ: ಭೇಟಿ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ,ನಾಲ್ಕು ಪ್ರಸ್ತಾವನೆಗಳಲ್ಲದೆ, ತುಮಕೂರು-ಶಿವಮೊಗ್ಗ ರಸ್ತೆ, ಬೆಳಗಾವಿ ಹೊರವರ್ತುಲ ರಸ್ತೆ, ಸಾಗರ- ಸಿಗಂಧೂರು ಮಧ್ಯೆ 580 ಕೋಟಿ ರೂ. ವೆಚ್ಚದ ಯೋಜನೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆಯಲಾಗಿದೆ. ರಾಜ್ಯಕ್ಕೆ ಸಂಬಂಧಿಸಿದಂತೆ 34 ಸಾವಿರ ಕೋಟಿ ರೂ.ವೆಚ್ಚದ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಭೂಸಾರಿಗೆ ಇಲಾಖೆ ಕಾರ್ಯದರ್ಶಿಗಳು ಚರ್ಚೆಯ ವೇಳೆ ತಿಳಿಸಿದ್ದಾರೆ ಎಂದರು.
ಸಚಿವ ನಿತಿನ್ ಗಡ್ಕರಿ ಜತೆಗಿನ ಭೇಟಿ ವೇಳೆ ಲೋಕೋಪ ಯೋಗಿ ಸಚಿವ ಎಚ್.ಡಿ.ರೇವಣ್ಣ,ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ದೆಹಲಿಯಲ್ಲಿನ ರಾಜ್ಯ ಸರ್ಕಾರದ ಪ್ರತಿನಿಧಿ ಸಲೀಂ ಅಹಮದ್ ಉಪಸ್ಥಿತರಿದ್ದರು.
ನಾಲ್ಕು ಪ್ರಸ್ತಾವನೆಗಳು
1. ನಿರ್ಮಾಣ-ನಿರ್ವಹಣೆ-ವರ್ಗಾವಣೆ (ಬಿಓಟಿ) ಆಧಾರದ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೆಲಮಂಗಲ-ಹಾಸನ ಮಧ್ಯೆ ನಾಲ್ಕು ಪಥದ ಟೋಲ್ ರಸ್ತೆ ನಿರ್ಮಿಸುತ್ತಿದೆ. ಈ ರಸ್ತೆಯಲ್ಲಿ ಹಾಸನ ಮತ್ತು ಚನ್ನರಾಯಪಟ್ಟಣ ಬೈಪಾಸ್‌ನಲ್ಲಿ ಯಾವುದೇ ಗ್ರೇಡ್ ಸಪರೇಟರ್‌ಗಳಿಲ್ಲದ ಎರಡುಪಥದ ಕ್ಯಾರಿಯೇಜ್ ವೇ ನಿರ್ಮಾಣ ಮಾಡುತ್ತಿದೆ. ಇದರಿಂದ ಸಾಕಷ್ಟು ಸಮಸ್ಯೆಗಳ ಜತೆಗೆ ಅಪಘಾತಗಳೂ ಸಂಭವಿಸುತ್ತಿವೆ. ಆದ್ದರಿಂದ ಬೈಪಾಸ್‌ಗಳಲ್ಲಿ ಗ್ರೇಡ್ ಸಪರೇಟರ್ ಸಹಿತ ನಾಲ್ಕು ಪಥದ ಬೈಪಾಸ್ ನಿರ್ಮಾಣ ಮಾಡಬೇಕು.
2.ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿ 48ನ್ನು 4 ಪಥದ ರಸ್ತೆಗಳಾಗಿ ಮೇಲ್ದರ್ಜೆಗೇರಿಸಿರುವುದರಿಂದ ಆ ಭಾಗದಲ್ಲಿ ಸಾಕಷ್ಟು ಪ್ರಗತಿಯಾಗಿದೆ. ಆದರೆ, ಸ್ಥಳೀಯ ರಸ್ತೆಗಳ ಜತೆ ಹೆದ್ದಾರಿಗೆ ಸಂಪರ್ಕದ ಕೊರತೆ ಇರುವುದರಿಂದ ಆ ಭಾಗದ ಜನ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಹಾಸನ-ನೆಲಮಂಗಲ 4 ಪಥದ ಹೆದ್ದಾರಿ ಜತೆಗೆ ಎರಡು ಪಥದ ಸರ್ವೀಸ್ ರಸ್ತೆಗಳನ್ನು ನಿರ್ಮಿಸುವ ಮೂಲಕ ಹೆದ್ದಾರಿ ಬದಿ ಬರುವ ಗ್ರಾಮೀಣ ಪ್ರದೇಶಗಳ ಅಗತ್ಯತೆ ಪೂರೈಸಬೇಕು.
3.ಕೆ.ಆರ್.ನಗರ-ಹೊಳೆನರಸೀಪುರ-ಹಾಸನ ಮಾರ್ಗವಾಗಿ ಸಾಗುವ ಬಿಳಿಕೆರೆ-ಬೇಲೂರು ರಾಜ್ಯ ಹೆದ್ದಾರಿಯ 47 ಕಿ.ಮೀ.ದೂರವನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ 325 ಕೋಟಿ ರೂ.ಮಂಜೂರು ಮಾಡಿದ್ದು, ಕಾಮಗಾರಿಗೆ ಟೆಂಡರ್ ಆಹ್ವಾನಿಸಲಾಗಿದೆ. ಇದರ ಜತೆಗೆ ಬಿಳಿಕೆರೆ-ಯೆಡೆಗೊಂಡನಹಳ್ಳಿ ಮತ್ತು ಬೇಲೂರು-ಹಾಸನ ಮಧ್ಯೆ 90 ಕಿ.ಮೀ.ರಸ್ತೆಯನ್ನೂ ಇದೇ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಕೃಷಿ, ಕೈಗಾರಿಕೆ ಮತ್ತು ಪ್ರವಾಸೋದ್ಯಮದ ಬೆಳವಣಿಗೆಗೆ ಅನುಕೂಲ ಮಾಡಿಕೊಡಬೇಕು. ಹಾಸನದಲ್ಲಿ ರೈಲ್ವೆ ಹಳಿ ದಾಟುವ ಸಮಸ್ಯೆ ಬಗೆಹರಿಸಲು 5 ಕಿ.ಮೀ.ಎಲಿವೇಟೆಡ್ ಹೈವೇ ನಿರ್ಮಿಸಬೇಕು.
4.ಚನ್ನರಾಯಪಟ್ಟಣ-ಹೊಳೆನರಸೀಪುರ-ಅರಕಲ ಗೂಡು-ಕೊಡ್ಲಿಪೇಟ್-ಮಡಿಕೇರಿ ರಸ್ತೆಯನ್ನು ರಾಷ್ಟ್ರೀಯ
ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಸಮಗ್ರ ಯೋಜನಾ ವರದಿ ಆಧರಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ 2016ರಲ್ಲಿ ಕೇಂದ್ರ ಸರ್ಕಾರ ಆರಂಭಿಕ ಒಪ್ಪಿಗೆ ನೀಡಿತ್ತು. ಈ ಭಾಗದ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ರಸ್ತೆ ಮೇಲ್ದರ್ಜೆಗೇರಿಸುವ ಅನಿವಾರ್ಯತೆ ಇದ್ದು, ಕೂಡಲೇ ಕೇಂದ್ರ ಸರ್ಕಾರ ಈ ಮಾರ್ಗವನ್ನು ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.