ಒಲಾ-ಊಬರ್‌ ವಿವಾದ ಇತ್ಯರ್ಥಕ್ಕೆ 4 ವಾರ ಕಾಲಾವಕಾಶ


Team Udayavani, Nov 8, 2022, 3:53 PM IST

tdy-7

ಬೆಂಗಳೂರು: ಒಲಾ ಮತ್ತು ಉಬರ್‌ ವಿವಾದ ಬಗೆಹರಿಸುವುದಕ್ಕೆ ಕಂಪನಿಗಳೊಂದಿಗೆ ಸಭೆ ನಡೆಸಿ ಒಮ್ಮತಕ್ಕೆ ಬರಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ 4 ವಾರ ಕಾಲಾವಕಾಶ ನೀಡಿದೆ.

ಆ್ಯಪ್‌ ಆಧಾರಿತ ಓಲಾ ಮತ್ತು ಉಬರ್‌ ಆಟೋರಿಕ್ಷಾ ಸೇವೆ ಸ್ಥಗಿತಗೊಳಿ ಸಬೇಕಂದು ರಾಜ್ಯ ಸರ್ಕಾರ ಹೊರಡಿಸಿ ರುವ ಆದೇಶ ರದ್ದುಪಡಿಸುವಂತೆ ಕೋರಿ ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಮತ್ತು ಉಬರ್‌ ಇಂಡಿಯಾ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ನೇತೃತ್ವದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲರು ಮತ್ತು ಅರ್ಜಿದಾರರ ಪರ ವಕೀಲರ ಮನವಿ ಪರಿಗಣಿಸಿದ ನ್ಯಾಯಪೀಠ, ಒಲಾ ಮತ್ತು ಉಬರ್‌ ಆಟೋರಿಕ್ಷಾ ಸೇವೆ ಕಲ್ಪಿಸುವ ಸಂಬಂಧ ಎಲ್ಲರ ಜೊತೆ ಸಮಾಲೋಚನಾ ಸಭೆ ನಡೆಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸರ್ಕಾರ ತಿಳಿಸಿದೆ.

ಈ ಮಧ್ಯೆ ದರ ಹೆಚ್ಚಿಸುವಂತೆ ಕೋರಿ ಅರ್ಜಿದಾರರು ಮಧ್ಯಂತರ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಸಮಸ್ಯೆ ಬಗೆಹರಿಸಲು ಸರ್ಕಾರದ ಕೋರಿಕೆಯಂತೆ 4 ವಾರಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿತು. ವಿವಾದ ಇತ್ಯರ್ಥಪಡಿಸಲು ಒಲಾ ಮತ್ತು ಉಬರ್‌ ಕಂಪನಿಗಳೊಂದಿಗೆ ಸಭೆ ನಡೆಸಿ ಒಮ್ಮತಕ್ಕೆ ಬಂದು ನ.7ರೊಳಗೆ ವರದಿ ಸಲ್ಲಿಸುವಂತೆ ನ್ಯಾಯಾಲಯಕ್ಕೆ ಸರ್ಕಾರಕ್ಕೆ 2022ರ ಅ.13ರಂದು ನಿರ್ದೇಶಿಸಿತ್ತು.

ಅದರಂತೆ ಸೋಮವಾರ ವಿಚಾರಣೆಗೆ ಹಾಜರಾಗಿದ್ದ ಸರ್ಕಾರಿ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರೊಂದಿಗೆ ಸಮಾಲೋಚನಾ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಲು ಸಾರಿಗೆ ಆಯುಕ್ತರು ನಡೆಸಿದ ಸಭೆಯಲ್ಲಿ ಒಮ್ಮತ ನಿಲುವಿಗೆ ಬರಲಾಗಿಲ್ಲ. ನ.14 ಮತ್ತು 15ರಂದು ಸಂಚಾರಿ ಪೊಲೀಸರ ಜೊತೆ ಸಭೆ ಏರ್ಪಡಿಸಲಾಗುತ್ತಿದೆ. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಲಾಗಿದೆ.  ಇದಕ್ಕಾಗಿ 4 ವಾರಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಅದೇ ರೀತಿ ದರ ಹೆಚ್ಚಿಸುವ ಸಂಬಂಧ ಅರ್ಜಿದಾರರ ಮಧ್ಯಂತರ ಮನವಿಗೆ ಮತ್ತು ಅರ್ಜಿಯಲ್ಲಿ ಪ್ರತಿವಾದಿ ಮಾಡಲು ಕೋರಿ “ಭಾರತ್‌ ಮೋಟಾರು ಸಾರಿಗೆ ಚಾಲಕರ ಸಂಘ’ ಸಲ್ಲಿಸಿರುವ ಆಕ್ಷೇಪಣೆ ಸಲ್ಲಿಸಬೇಕು ಎಂದು ತಿಳಿಸಿ ವಿಚಾರಣೆಯನ್ನು ಡಿ.16ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.