ಸೇತುವೆಗಳ ಸುಸ್ಥಿತಿಗೆ 40 ಕೋಟಿ
Team Udayavani, Dec 9, 2019, 10:33 AM IST
ಬೆಂಗಳೂರು: ನಗರದ 24 ಪ್ರಮುಖ ಮೇಲ್ಸೇತುವೆ, ಅಂಡರ್ ಪಾಸ್ ಮತ್ತು ತೂಗು ಸೇತುವೆಗಳಲ್ಲಿನ ಲೋಪ ಸರಿಪಡಿಸಲು ಬಿಬಿಎಂಪಿ 40 ಕೋಟಿ ರೂ. ಮೀಸಲಿರಿಸಿದ್ದು, ಟೆಂಡರ್ ಕರೆಯಲು ಸಿದ್ಧತೆ ನಡೆಸುತ್ತಿದೆ.
ಇತ್ತೀಚೆಗೆ ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಗುಂಡಿ ಸೃಷ್ಟಿಯಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಇದರಿಂದ ನಗರದ ಉಳಿದ ಮೇಲ್ಸೇತುವೆಗಳು, ಅಂಡರ್‌ಪಾಸ್ ಹಾಗೂ ತೂಗು ಸೇತುವೆಗಳು ಸುರಕ್ಷಿತವೇ ಎನ್ನುವ ಪ್ರಶ್ನೆಯೂ ಉದ್ಭವವಾಗಿತ್ತು.
ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಬಿಎಂಪಿ, ಇವುಗಳ ಬಗ್ಗೆ ಅಧ್ಯಯನ ಮಾಡುವುದಕ್ಕೆ 5 ಕೋಟಿ ರೂ. ವೆಚ್ಚದಲ್ಲಿ ನುರಿತ ತಜ್ಞರ ಮೂಲಕ ಗುಣಮಟ್ಟ ಪರೀಕ್ಷೆ (ಸ್ಟ್ರಕ್ಟರ್ ಆಡಿಟ್) ನಡೆಸಲು ಮುಂದಾಗಿತ್ತು. ಈಗ ಇನ್ನು ಒಂದು ಹೆಜ್ಜೆ ಮುಂದೆಹೋಗಿ ಪ್ರಮುಖ ಮೇಲ್ಸೇತುವೆಗಳಲ್ಲಿನ ಪ್ರಾಥಮಿಕ ಹಂತದ ಲೋಷದೋಷಗಳನ್ನು ಸರಿಪಡಿಸಲು ಕ್ರಮ ತೆಗೆದುಕೊಂಡಿದೆ. ನಗರದ ಪ್ರಮುಖ ಮೇಲ್ಸೇತುವೆ, ಅಂಡರ್‌ಪಾಸ್ ಹಾಗೂ ತೂಗು ಸೇತುವೆಗಳನ್ನು ಗುರುತಿಸಿದ್ದು, ಇವುಗಳಲ್ಲಿ ಸೂಚನಾ ಫಲಕ, ಮಾರ್ಗಸೂಚಿ, ಡಾಂಬರೀಕರಣ, ಬುಷ್ ಹಾಗೂ ಕೊಂಡಿಗಳ ಗುಣಮಟ್ಟಗಳನ್ನು ಸರಿಪಡಿಸುವುದು ಹಾಗೂ ಇವುಗಳಿಗೆ ಬಣ್ಣ ಬಳಿಯುವುದು, ಮೇಲ್ಸೇತುವೆಗಳಿಂದ ಮಳೆ ನೀರು ಸೋರುತ್ತಿದ್ದರೆ, ಅದನ್ನು ತಡೆಯುವುದಕ್ಕೂ ಬಿಬಿಎಂಪಿ ಯೋಜನೆ ರೂಪಿಸಿಕೊಂಡಿದೆ.
ಪ್ರಮುಖ ರಸ್ತೆಗಳಿಗೆ 2 ಕೋಟಿ: ನಗರದ ಪ್ರಮುಖ ರಸ್ತೆಗಳಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕ ವಲಯದಿಂದ ಬಿಬಿಎಂಪಿಯ ಕೇಂದ್ರ ಕಚೇರಿಯ ಸಹಾಯವಾಣಿಯ ಮೂಲಕ ದಾಖಲಾಗಿರುವ ದೂರುಗಳನ್ನು ಸರಿಪಡಿಸಲು ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ. ದೂರು ದಾಖಲಾದ ರಸ್ತೆಗಳ ವಾರ್ಷಿಕ ನಿರ್ವಹಣೆಗೆಂದು 2 ಕೋಟಿ ರೂ.ಗಳನ್ನು ಪ್ರತ್ಯೇಕವಾಗಿ ಮೀಸಲಿರಿಸಿದೆ. ಈ ಮೊತ್ತದಲ್ಲಿ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿಬರುತ್ತಿರುವ ರಸ್ತೆಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ.
ಸ್ಟ್ರಕ್ಟರ್ ಆಡಿಟ್‌ಗೆ 5 ಕೋಟಿ ರೂ. ಮೀಸಲು: ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಗುಂಡಿ ಸೃಷ್ಟಿಯಾಗಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿ ನುರಿತ ತಜ್ಞರ ಮೂಲಕ ನಗರದಲ್ಲಿನ ಎಲ್ಲ ಮೇಲ್ಸೇತುವೆ ಹಾಗೂ ಅಂಡರ್‌ಪಾಸ್‌ಗಳ ಸ್ಟ್ರಕ್ಚರ್ ಆಡಿಟ್ ಮಾಡಿಸಲು ಬಿಬಿಎಂಪಿ ನಿರ್ಧರಿಸಿತ್ತು. ಇದಕ್ಕೆ ಸಂಬಂಧಿಸಿದ ಟೆಂಡರ್ ಸಹ ಇದೇ ವಾರದಲ್ಲಿ ಅಂತಿಮವಾಗುವ ಸಾಧ್ಯತೆ ಇದೆ. ನುರಿತ ತಜ್ಞರ ತಂಡವು ನಗರದ ಎಲ್ಲ ಮೇಲ್ಸೇತುವೆ ಗ್ರೇಡ್ ಸಪರೇಟರ್, ಅಂಡರ್‌ಪಾಸ್ ಹಾಗೂ ತೂಗು ಸೇತುವೆಗಳು, ಮ್ಯಾಜಿಕ್ ಬಾಕ್ಸ್‌ಗಳ ಸುರಕ್ಷತೆ, ಮೇಲ್ಸೇತುವೆಗಳ ಡಾಂಬರೀಕರಣ, ಬುಷ್ ಹಾಗೂ ಕೊಂಡಿಗಳ ಗುಣಮಟ್ಟ, ಕಂಬಗಳ ಸ್ಥಿತಿ ಪರಿಶೀಲನೆ ನಡೆಸಲಿದೆ. ಇದರಲ್ಲಿ ಲೋಪಗಳು ಕಂಡುಬಂದರೆ ಅವುಗಳನ್ನು ಸರಿಪಡಿಸುವುದಕ್ಕೂ ತಜ್ಞರು ಮಾರ್ಗಸೂಚಿ ನೀಡಲಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
-ಹಿತೇಶ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.