400 ಕಾರ್ಮಿಕರ ಬದುಕು ಬೀದಿಗೆ
Team Udayavani, Nov 14, 2017, 11:29 AM IST
ಬೆಂಗಳೂರು: ಗಾರ್ಮೆಂಟ್ಸ್ ಒಂದರಲ್ಲಿ ಶಾರ್ಟ್ ಸರ್ಕ್ನೂಟ್‌ನಿಂದ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಕುಮಾರಸ್ವಾಮಿ ಲೇಔಟ್‌ನ ಕೋಣನಕುಂಟೆ ಕ್ರಾಸ್ ಬಳಿ ಭಾನುವಾರ ತಡರಾತ್ರಿ ನಡೆದಿದ್ದು, 400 ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ.
ಕೋಣನಕುಂಟೆ ಕ್ರಾಸ್‌ನ ಜೆ.ಪಿ. ಇಂಡಸ್ಟ್ರೀಯಲ್ ಬಳಿಯ ಅಶೋಕ್ ರೆಡ್ಡಿ ಮಾಲೀಕ್ವತದ ಲೊವೆಬಲ್ ಲಾಂಜಲಿ ಗಾಮೆಂìಟ್ಸ್‌ನಲ್ಲಿ ಘಟನೆ ನಡೆದಿದೆ. ಈ ಗಾರ್ಮೆಂಟ್ಸ್‌ನಲ್ಲಿ ಸುಮಾರು 400ಕ್ಕೂ ಅಧಿಕ ಮಂದಿ ಕೆಲಸ ಮಾಡುತ್ತಿದ್ದು, ಭಾನುವಾರ ರಜೆ ಇದ್ದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಇನ್ನು ಹೆಚ್ಚುವರಿ ಕೆಲಸ ಮಾಡಿದ ಕಾರ್ಮಿಕರು ಮಧ್ಯಾಹ್ನವೇ ಮನೆಗೆ ತೆರಳಿದ್ದರಿಂದ ಭಾರೀ ಅನಾಹುತ ತಪ್ಪಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ನಾಲ್ಕು ಮಹಡಿಯ ಪಕಟ್ಟಡದ ನೆಲ ಮಾಳಿಗೆಯಲ್ಲಿ ಶಾರ್ಟ್ ಸರ್ಕ್ನೂಟ್ ಉಂಟಾಗಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಗಾರ್ಮೆಂಟ್ಸ್‌ನ ಭದ್ರತಾ ಸಿಬ್ಬಂದಿ ಕೂಡಲೇ ಮಾಲೀಕರ ಗಮನಕ್ಕೆ ತಂದಿದ್ದು, 8.45ರ ಸುಮಾರಿಗೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಅಧಿಕಾರಿ ಬಸವಣ್ಣ ನೇತೃತ್ವದ ತಂಡ ನೆಲಮಾಳಿಗೆಯಲ್ಲಿ ಬೆಂಕಿ ನಂದಿಸುವಾಗಲೇ ಏಕಾಏಕಿ ಒಂದು, ಎರಡು ಮತ್ತು ಮೂರನೇ ಮಹಡಿಗೆ ಬೆಂಕಿಯ ಕಿನ್ನಾಲಿಗೆ ವ್ಯಾಪ್ತಿಸಿದೆ. ಕೂಡಲೇ ಇನ್ನಷ್ಟು ಬೆಂಕಿ ನಂದಿಸುವ ವಾಹನ ಮತ್ತು ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು.
ಒಟ್ಟು 100ಕ್ಕೂ ಅಧಿಕ ಸಿಬ್ಬಂದಿ 22 ಅಗ್ನಿಶಾಮಕ ವಾಹನಗಳಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಘಡದಲ್ಲಿ ಗಾರ್ಮೆಂಟ್ಸ್‌ನಲ್ಲಿದ್ದ ಬಟ್ಟೆಗಳು, ಪೀಠೊಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಆದರೆ, ಎಷ್ಟು ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ ಎಂದು ತಿಳಿದು ಬಂದಿಲ್ಲ. ಇನ್ನು ಬೆಂಕಿ ಕಿನ್ನಾಲಿಗೆಯನ್ನ ತಡೆಯಲು ಅಕ್ಕ-ಪಕ್ಕದ ಕಟ್ಟಡಗಳಲ್ಲಿದ್ದ ನೀರನ್ನು ಬಳಸಿಕೊಳ್ಳಬೇಕಾಯಿತು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.
ನೋಟಿಸ್ ಜಾರಿ?: ಸಾಮಾನ್ಯವಾಗಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿಅವಘಡ ಕುರಿತ ಮುಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ನಿಯಮವಿದೆ. ಆದರೆ, ಲೊವೆಬಲ್ ಲಾಂಜಲಿ ಗಾರ್ಮೆಂಟ್ಸ್ ಅಗ್ನಿನಂದಕಗಳನ್ನಾಗಲಿ, ನೀರಿನಸೌಲಭ್ಯವನ್ನಾಗಲಿ ಒಟ್ಟಾರೆ ಅಗ್ನಿ ಅವಘಡ ಬಗ್ಗೆ ತೆಗೆದುಕೊಳ್ಳಬೇಕಾದ ಮುಜಾಗ್ರತ ಕ್ರಮಗಳನ್ನು ಕೈಗೊಂಡಿಲ್ಲ.
ಈ ಸಂಬಂಧ ವರದಿ ಬಂದಿದ್ದು, ಒಂದೆರಡು ದಿನಗಳಲ್ಲಿ ಗಾರ್ಮೆಂಟ್ಸ್‌ನ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗುವುದು. ಹಾಗೆಯೇ ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಗೆ ದೂರು ನೀಡಿದ್ದೇವೆ. ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ನೂಟ್‌ನಿಂದ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ ಎಂದು ಅವರು ವಿವರಿಸಿದರು.
ಕೆಲಸಕ್ಕೆ ಬಂದಾಗ ಕಂಡದ್ದು ಬೂದಿ ಮಾತ್ರ!: ಶಾರ್ಟ್ ಸರ್ಕ್ನೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಿಂದ ಸುಮಾರು 400ಕ್ಕೂ ಅಧಿಕ ಕಾರ್ಮಿಕರ ಸ್ಥಿತಿ ಅತಂತ್ರವಾಗಿದೆ. ಪ್ರಮುಖವಾಗಿ ಗಾರ್ಮೆಂಟ್ಸ್‌ನಲ್ಲಿ ದುಡಿಯುವ ಮಹಿಳೆಯರ ಸ್ಥಿತಿ ಹೇಳತೀರದಾಗಿದೆ. ಭಾನುವಾರ ಅರ್ಧ ದಿನ ಕೆಲಸ ಮುಗಿಸಿ ಹೋಗಿದ್ದ ಕಾರ್ಮಿಕರು ಎಂದಿನಂತೆ ಸೋಮವಾರ ಬೆಳಗ್ಗೆ 8 ಗಂಟೆ ಹೊತ್ತಿಗೆ ಗಾರ್ಮೆಂಟ್ಸ್‌ಗೆ ಬಂದಾಗ ಕಂಡದ್ದು ಬರೀ ಬೂದಿ.
ಕಾರ್ಮಿಕರು ಬಂದ ಹೊತ್ತಿಗೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಇದನ್ನು ಕಂಡ ಕಾರ್ಮಿಕರು ಒಂದು ಕ್ಷಣ ಆತಂಕಕ್ಕೀಡಾಗಿದ್ದಲ್ಲದೇ, ನಡು ರಸ್ತೆಯಲ್ಲೇ ಕಣ್ಣೀರು ಸುರಿಸುತ್ತಿದ್ದ ದೃಶ್ಯ ಕಂಡು ಬಂತು. ಕೊನೆಗೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಮಿಕರನ್ನು ಸಮಧಾನಪಡಿಸಿ ಮನೆಗೆ ತೆರಳುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.