ಬೈಕ್‌ ಕಳ್ಳರಿಂದ 48 ವಾಹನ ವಶ


Team Udayavani, Sep 19, 2017, 11:49 AM IST

48-vechile-seize.jpg

ಬೆಂಗಳೂರು: ಆಗ್ನೇಯ ವಿಭಾಗದ ನಾಲ್ಕು ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬೈಕ್‌ ವೀಲಿØಂಗ್‌, ದ್ವಿಚಕ್ರ ವಾಹನ ಕಳವು ಮತ್ತು ದರೋಡೆ ಪ್ರಕರಣಗಳ ಸಂಬಂಧ 14 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಇವರಿಂದ 21.43 ಲಕ್ಷ ರೂ. ಮೌಲ್ಯದ 48 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಿಟಿಎಂ ಲೇಔಟ್‌ನ 1ನೇ ಹಂತದ ಸಾಯಿಬಾಬಾ ದೇವಾಲಯದ ಬಳಿಯ ಪಾರ್ಕ್‌ವೊಂದರ ಸಮೀಪ ಬೈಕ್‌ಗಳಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ದರೋಡೆಗೆ ಹೊಂಚು ಹಾಕುತ್ತಿದ್ದ ಐವರನ್ನು ಸುದ್ದುಗುಂಟೆ ಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್‌ ಅಮೀರ್‌, ಇಮ್ರಾನ್‌ ಪಾಷಾ, ಮೊಹಮ್ಮದ್‌ ಆರೀಫ್, ಸುಹೇಲ್‌ ಪಾಷಾ, ಸೈಯದ್‌ ಮುಜಾಹಿದ್‌ ಬಂಧಿತರು.

ಇವರಿಂದ 4 ಲಕ್ಷ ಮೌಲ್ಯದ 12 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತ್ತೀಚೆಗೆ ಜೆ.ಪಿ.ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ ಬೈಕ್‌ ಹಾಗೂ ಮೊಬೈಲ್‌,500 ರೂ. ನಗದು ಕಸಿದುಕೊಂಡಿದ್ದರು.

ಬೇಗೂರು ಠಾಣೆ: ಹೊಸೂರು ರಸ್ತೆಯ ಎಇಸಿಎಸ್‌ ಲೇಔಟ್‌ ಬಳಿಯ ನೀಲಗಿರಿ ತೋಪಿನಲ್ಲಿ ಬೈಕ್‌ ನಿಲ್ಲಿಸಿಕೊಂಡು ದರೋಡೆಗೆ ಹೊಂಚು ಹಾಕಿದ್ದ ಐದು ಮಂದಿಯನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಶೋಕ್‌, ನವೀನ್‌, ಯಶ್ವಂತ್‌, ಚೆಲುವರಾಜು, ಅರುಣ್‌ ಬಂಧಿತರು. ಇವರಿಂದ 2.43 ಲಕ್ಷ ರೂ. ಮೌಲ್ಯದ 7 ಬೈಕ್‌ಗಳು ಹಾಗೂ 78 ಸಾವಿರ ಮೌಲ್ಯದ 28.8 ಗ್ರಾಂ ತೂಕದ ಚಿನ್ನಾಭರಣ ಸೇರಿ 3.21 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಮೈಕೋ ಲೇಔಟ್‌ ಠಾಣೆ: ಬೈಕ್‌ಗಳನ್ನು ಕಳವು ಮಾಡಿ ಜಾಲಿರೈಡ್‌ ಹಾಗೂ ವೀಲ್ಹಿಂಗ್‌ ಮಾಡುತ್ತಿದ್ದ ಇಬ್ಬರನ್ನು ಮೈಕೋ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಲ್ಮಾನ್‌ ಖಾನ್‌ ಮತ್ತು ಸಯ್ಯದ್‌ ಬಂಧಿತರು. ಇವರಿಂದ 4 ಲಕ್ಷ ಮೌಲ್ಯದ 8 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಬಂಧನದಿಂದ ಮೈಕೋ ಲೇಔಟ್‌ ಠಾಣೆಯ 2ಪ್ರಕರಣ, ಜಯನಗರ, ಜೆಪಿನಗರ, ಪುಟ್ಟೇನಹಳ್ಳಿ ಸೇರಿದಂತೆ ವಿವಿಧ ಠಾಣೆಯಲ್ಲಿ ದಾಖಲಾಗಿದ್ದ 7 ಪ್ರಕರಣಗಳು ಪತ್ತೆಯಾಗಿವೆ.

ಎಲೆಕ್ಟ್ರಾನಿಕ್‌ ಸಿಟಿ ಠಾಣೆ: ಬೈಕ್‌ ಕಳವು ಮಾಡುತ್ತಿದ್ದ ಇಬ್ಬರನ್ನು ಎಲೆಕ್ಟ್ರಾನಿಕ್‌ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಂಜುನಾಥ್‌, ಬೇಗೂರಿನ ತೌಸಿಫ್ ಬಂಧಿತರು. ಆರೋಪಿಗಳಿಂದ 11 ಲಕ್ಷ ಮೌಲ್ಯದ 21 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಬೋರಲಿಂಗಯ್ಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.