49 ಹೊಸ ತಾಲೂಕುಗಳ ರಚನೆ
Team Udayavani, Sep 8, 2017, 6:55 AM IST
ಬೆಂಗಳೂರು: ಉಡುಪಿ ಜಿಲ್ಲೆಯ ಬ್ರಹ್ಮಾವರ,ಕಾಪು, ಬೈಂದೂರು, ಹೆಬ್ರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಯ ಮೂಡಬಿದರೆ, ಕಡಬ ಸೇರಿ 49 ಹೊಸ ತಾಲೂಕುಗಳನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲ ಕ ಕಳೆದ ನಾಲ್ಕೂವರೆ ವರ್ಷಗಳಿಂದ ಮುಂದೂಡುತ್ತಲೇ ಬಂದಿರುವ ಹೊಸ ತಾಲೂಕುಗಳ ರಚನೆ ಕೊನೆಗೂ ಈಡೇರಿದೆ. ಆದರೆ, ಈ ಹೊಸ ತಾಲೂಕುಗಳು 2018ರ ಜನವರಿಯಿಂದ ಅಸ್ತಿತ್ವಕ್ಕೆ ಬರಲಿವೆ. ರಾಜ್ಯ ಸರ್ಕಾರ 2017-18ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ 49 ಹೊಸ ತಾಲೂಕುಗಳನ್ನು ಜನವರಿ 2018ರಿಂದ ಅನ್ವಯವಾಗುವಂತೆ ರಚನೆ ಮಾಡಲು ತಾತ್ವಿಕವಾಗಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕಂದಾಯ ಇಲಾಖೆಯ ವತಿಯಿಂದ ಹೊಸ ತಾಲೂಕು ಕಚೇರಿಗಳನ್ನು ತೆರೆಯಲು ಮತ್ತು ಇತರೆ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳನ್ನು ಆರ್ಥಿಕ ಇಲಾಕೆ ಸಹಮತದೊಂದಿಗೆ ಹಂತ ಹಂತವಾಗಿ ತೆರೆಯಬೇಕು. ಇದಕ್ಕೆ ತಗಲುವ ವೆಚ್ಚವನ್ನು ಆಯವ್ಯಯದ ಲೆಕ್ಕ ಶೀರ್ಷಿಕೆಯಡಿ ಭರಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಆದರೆ, ನಿರ್ದಿಷ್ಟವಾಗಿ ಅನುದಾನ ನಿಗದಿಪಡಿಸಿಲ್ಲ.ಪ್ರಸ್ತುತ 175 ತಾಲೂಕುಗಳಿದ್ದು ಹೊಸದಾಗಿ 49 ತಾಲೂಕುಗಳು ಸೇರಿದರೆ 224 ತಾಲೂಕುಗಳಾಗಲಿವೆ.
ನಾಲ್ಕೂವರೆ ವರ್ಷದ ಬಳಿಕ ಆದೇಶ:
ರಾಜ್ಯದಲ್ಲಿ 43 ಹೊಸ ತಾಲೂಕುಗಳನ್ನು ರಚಿಸುವ ಬಗ್ಗೆ 2013-14ನೇ ಸಾಲಿನ ಆಯವ್ಯಯದಲ್ಲಿ ಜಗದೀಶ ಶೆಟ್ಟರ್ ನೇತೃತ್ವದ ಅಂದಿನ ಬಿಜೆಪಿ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಮೇ ತಿಂಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಬಳಿಕ ಜುಲೈನಲ್ಲಿ ಹೊಸ ಬಜೆಟ್ ಮಂಡಿಸಲಾಯಿತಾದರೂ ಅದರಲ್ಲಿ ತಾಲೂಕು ರಚನೆ ಬಗ್ಗೆ ಪ್ರಸ್ತಾಪ ಇರಲಿಲ್ಲ. ಇದರಿಂದ ಹೊಸ ತಾಲೂಕುಗಳ ರಚನೆ ನನೆಗುದಿಗೆ ಬಿದ್ದಿತ್ತು. ನಂತರ ಪ್ರತಿ ಆಯವ್ಯದಲ್ಲಿ ಈ ತಾಲೂಕುಗಳ ರಚನೆ ಬಗ್ಗೆ ಪ್ರಸ್ತಾಪಿಸಲಾಗುತ್ತಿತ್ತಾದರೂ ಅನುದಾನ ನಿಗದಿಪಡಿಸಿರಲಿಲ್ಲ. ಆದರೆ, 2017-18ನೇ ಸಾಲಿನ ಆಯವ್ಯದಲ್ಲಿ ಶೆಟ್ಟರ್ ನೇತೃತ್ವದ ಸರ್ಕಾರ ಘೋಷಿಸಿದ್ದ 43 ತಾಲೂಕುಗಳ ಜತೆಗೆ ಇನ್ನೂ ಆರು ಸೇರಿ ಒಟ್ಟು 49 ಹೊಸ ತಾಲೂಕುಗಳನ್ನು ರಚಿಸುವ ಬಗ್ಗೆ ಘೋಷಿಸಲಾಗಿತ್ತು. ಜತೆಗೆ ಕಳೆದ ಆಗಸ್ಟ್ ಅಂತ್ಯಕ್ಕೆ ನಡೆದ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಹೊಸ ತಾಲೂಕು ರಚನೆ ಆದೇಶ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.