ಡೀಮ್ಡ್ ವಿವಿಗಳಲ್ಲಿ ಶೇ.50 ಮೀಸಲು: ಡಿಕೆಶಿ
Team Udayavani, Jul 15, 2018, 6:30 AM IST
ಬೆಂಗಳೂರು: ವೈದ್ಯಕೀಯ ಶಿಕ್ಷಣದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಡೀಮ್ಡ್ ವಿಶ್ವವಿದ್ಯಾಲಯಗಳ ಪಿಜಿ ಕೋರ್ಸ್ಗಳಲ್ಲಿ ಶೇ. 50 ಹಾಗೂ ಯುಜಿ ಕೋರ್ಸ್ ಗಳಲ್ಲಿ ಶೇ. 25 ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸ ಲಿಡುವ ಕಾನೂನು ಮುಂದಿನ ವರ್ಷದಿಂದ ಜಾರಿಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಡೀಮ್ಡ್ ವಿವಿಗಳಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವ ಕುರಿತು ಕೇಂದ್ರದಿಂದ ಒಪ್ಪಿಗೆ ಪಡೆಯಲಾಗಿದೆ. ತಾಂತ್ರಿಕ ಕಾರಣಗಳಿಂದ ಈ ಕಾನೂನು ತಡವಾಗಿದ್ದು 2019-20ನೇ ಶೈಕ್ಷಣಿಕ ವರ್ಷದಿಂದ ಜಾರಿಯಾಗಲಿದೆ ಎಂದರು. ಮುಂದಿನ ದಿನಗಳಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಒಂದಿಷ್ಟು ಹೊಸ ಪ್ರಯೋಗ ಹಾಗೂ ಯೋಜನೆಗಳನ್ನು ತರುವ ಚಿಂತನೆ ನಡೆಸಿದ್ದೇನೆ. ಅವುಗಳಲ್ಲಿ ಮುಖ್ಯವಾಗಿ ಎಸ್ಎಸ್ಎಲ್ಸಿ ಮುಗಿಸಿದ ವಿದ್ಯಾರ್ಥಿಗಳಿಗೆ 1 ವರ್ಷದ ಪ್ಯಾರಾ ಮೆಡಿಕಲ್ ಅಥವಾ ನರ್ಸಿಂಗ್ ತರಬೇತಿಯನ್ನು ಆರಂಭಿಸುವ ಯೋಜನೆ ಇದೆ ಎಂದು ಹೇಳಿದರು.
ವೈದ್ಯ ಶಿಕ್ಷಣ ಪೂರೈಸಿ ದವರು ಖಡ್ಡಾಯ ಒಂದು ವರ್ಷ ಗ್ರಾಮೀಣ ಸೇವೆ ಮಾಡುವ ನಿಯಮದಿಂದ ತಪ್ಪಿಸಿಕೊಳ್ಳದಂತೆ ಕಠಿನ ಕಾನೂನು ರೂಪಿಸಲು ಇತರ ರಾಜ್ಯಗಳಲ್ಲಿ ನಿಯಮ ಹಾಗೂ ಕಾನೂನು ಅಧ್ಯ ಯನ ನಡೆಸುತ್ತಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.