ಕ್ರಿಸ್‌ಮಸ್‌ ಪ್ರಯಾಣಕ್ಕೆ 550 ಹೆಚ್ಚುವರಿ ಬಸ್‌


Team Udayavani, Dec 21, 2018, 12:55 PM IST

blore-8.jpg

ಬೆಂಗಳೂರು: ಕ್ರಿಸ್‌ಮಸ್‌ ಹಿನ್ನೆಲೆಯಲ್ಲಿ ನಗರ ದಿಂದ ಬೇರೆ ಬೇರೆ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) 550 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ಡಿ. 21 ಹಾಗೂ 22ರಂದು ಬೆಂಗಳೂರಿನಿಂದ ರಾಜ್ಯ ಮತ್ತು ಇತರ ರಾಜ್ಯಗಳ ವಿವಿಧ ಊರುಗಳಿಗೆ ಹೋಗಲಿರುವ ಈ ಬಸ್ಸುಗಳು, ಡಿ.25 ರಂದು ಆಯಾ ಊರುಗಳಿಂದ ಮತ್ತೆ ಬೆಂಗಳೂರಿಗೆ ತೆರಳಲಿವೆ. ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮುಂತಾದ ಸ್ಥಳಗಳಿಗೆ ತೆರಳಲಿವೆ. ಅದೇ ರೀತಿ, ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡುತ್ತವೆ. ತಮಿಳುನಾಡು ಮತ್ತು ಆಂಧ್ರ ಪ್ರದೇಶ/ ತೆಲಂಗಾಣ ಕಡೆಗೆ
ಹೋಗುವ ಪ್ರೀಮಿಯಂ ಸಾರಿಗೆ ಬಸ್ಸುಗಳು ಶಾಂತಿನಗರ ದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಹೊರಡಲಿವೆ.

ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣ, ಜಯ ನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್‌ ಭೀಮಾ ನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಸುಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಸೀಟು ಕಾಯ್ದಿರಿಸಲಾದ ಟಿಕೆಟ್‌ಗಳ ಮೇಲೆ ನಮೂದಿಸಿರುವ ಬಸ್‌ ನಿಲ್ದಾಣ/ಪಿಕ್‌ ಅಪ್‌ ಪಾಯಿಂಟ್‌ನ ಹೆಸರನ್ನು ಸರಿಯಾಗಿ ಗಮನಿಸಬೇಕು. ಜತೆಗೆ 707 ಗಣಕೀಕೃತ ಬುಕಿಂಗ್‌ ಕೌಂಟರ್‌ಗಳ ವ್ಯವಸ್ಥೆ ಯನ್ನೂ ಮಾಡಲಾಗಿದೆ.

ನಾಲ್ವರು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯ್ತಿ
ನೀಡಲಾಗುವುದು ಹಾಗೂ ಹೋಗಿಬರುವ ಪ್ರಯಾಣದ ಟಿಕೆಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣದರದಲ್ಲಿ ಶೇ.10ರಷ್ಟು ರಿಯಾಯ್ತಿ ನೀಡಲಾಗುವುದು. ಅಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ ಜಿಲ್ಲಾ ಬಸ್‌ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.