Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Team Udayavani, Nov 25, 2024, 10:24 AM IST
ಬೆಂಗಳೂರು: ನಿವೇಶನ ಮಾರುವುದಾಗಿ ನಂಬಿಸಿ ಉದ್ಯಮಿಯಿಂದ 56 ಲಕ್ಷ ರೂ. ಪಡೆದು ವಂಚಿಸಿದ ದಂಪತಿ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾದಹಳ್ಳಿ ವಿಲೇಜ್ ಹಾಲಿವುಡ್ ಟೌನ್ ನಿವಾಸಿ ಜಾನ್ ರಾಬರ್ಟ್ ಕೊಲಾಕೋ ವಂಚನೆಗೊಳ ಗಾದವರು. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ಎ.ಶಿವಲಿಂಗಯ್ಯ ಮತ್ತು ಆತನ ಪತ್ನಿ ಭವಾನಿ ರೆಡ್ಡಿ ಎಂಬುವರ ವಿರುದ್ಧ ವಂಚನೆ, ನಂಬಿಕೆ ದ್ರೋಹ ಆರೋಪದಡಿ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಏನಿದು ವಂಚನೆ ಪ್ರಕರಣ?: ಆರೋಪಿಗಳಾದ ಶಿವಲಿಂಗಯ್ಯ ಮತ್ತು ಅವರ ಪತ್ನಿ ಭವಾನಿ ರೆಡ್ಡಿ ದೇವನಹನಹಳ್ಳಿ ತಾಲೂಕು ಸಾದಹಳ್ಳಿ ವಿಲೇಜ್ ಸರ್ವೆ ನಂರ್ಬ 227 ಮತ್ತು 228ರಲ್ಲಿನ ಸ್ವಿಸ್ ಟೌನ್ನಲ್ಲಿ 6 ಸಾವಿರ ಚದರ ಅಡಿ ವಿಸ್ತೀರ್ಣದ ನಿವೇಶನ ಹೊಂದಿದ್ದು, ಹಣದ ಅವಶ್ಯಕತೆ ಇದ್ದ ಹಿನ್ನೆಲೆಯಲ್ಲಿ 2016ರಲ್ಲಿ ಶಿವಲಿಂಗಯ್ಯ ಅವರು ಉದ್ಯಮಿ ಜಾನ್ ರಾಬರ್ಟ್ರನ್ನು ಸಂಪರ್ಕಿಸಿ, ನಿವೇಶನ ಮಾರಾಟ ಮಾಡುವುದಾಗಿ ತಿಳಿಸಿದ್ದಾರೆ. ಬಳಿಕ ಪ್ರತಿ ಚದರ ಅಡಿಗೆ 3 ಸಾವಿರ ರೂ.ನಂತೆ ಒಟ್ಟು 1.80 ಕೋಟಿ ರೂ.ಗೆ ನಿವೇಶನ ಮಾರಾಟಕ್ಕೆ ಮಾತುಕತೆ ನಡೆದಿತ್ತು. ಜಾನ್ ರಾಬರ್ಟ್ ತಮ್ಮ ಸ್ನೇಹಿತ ಆರ್.ಎನ್.ವಾಸುದೇವ್ ಜತೆಗೆ ಈ ನಿವೇಶನ ಖರೀದಿಸಲು ತೀರ್ಮಾನಿಸಿದ್ದರು. ಬಳಿಕ ಮಾತುಕತೆ ಯಂತೆ ನಿವೇಶನದ ಮಾಲಿಕ ಶಿವಲಿಂಗಯ್ಯಗೆ ಮುಂಗಡವಾಗಿ 30 ಲಕ್ಷ ರೂ. ನೀಡಿದ್ದಾರೆ. ಈ ನಡುವೆ ಶಿವಲಿಂಗಯ್ಯ ತಮ್ಮ ಮಗಳ ಮದುವೆಗಾಗಿ ಮತ್ತೆ ಮುಂಗಡವಾಗಿ 10 ಲಕ್ಷ ರೂ. ಪಡೆದುಕೊಂಡಿದ್ದಾರೆ. ನಂತರ ಶಿವಲಿಂಗಯ್ಯ ದಂಪತಿ 2016ರಿಂದ 2019ರ ವರೆಗೆ ವಿವಿಧ ಕಾರಣ ನೀಡಿ ನಿವೇಶನ ನೋಂದಣಿ ಮುಂದೂಡಿದ್ದಾರೆ. ಬಳಿಕ ಶಿವಲಿಂಗಯ್ಯ ಹಿಂದಿನ ದರಕ್ಕೆ ನಿವೇಶನ ಮಾರಾಟ ಸಾಧ್ಯವಿಲ್ಲ. ಈಗ ಪ್ರತಿ ಚದರ ಅಡಿಗೆ 3,625 ರೂ.ನಂತೆ ಒಟ್ಟು 2.17 ಕೋಟಿ ರೂ. ನೀಡಬೇಕು ಎಂದು ಕೇಳಿದ್ದಾರೆ. ಅದಕ್ಕೆ ಜಾನ್ ರಾಬರ್ಟ್ ಒಪ್ಪಿದ್ದಾರೆ. ಬಳಿಕ ಶಿವಲಿಂಗಯ್ಯ ಮುಂಗಡವಾಗಿ ಮತ್ತೆ 16 ಲಕ್ಷ ರೂ. ಪಡೆದುಕೊಂಡಿದ್ದಾರೆ. 2019ರ ಜು.24ರಂದು ನಿವೇಶನ ನೋಂದಣಿ ಮಾಡಿಕೊಡುವುದಾಗಿ ಹೇಳಿದ್ದ ಶಿವಲಿಂಗಯ್ಯ ತಪ್ಪಿಸಿಕೊಂಡಿದ್ದಾರೆ.
ಮನೆ ಖಾಲಿ ಮಾಡಿದ ದಂಪತಿ: ಬಳಿಕ ಕೋವಿಡ್ ಹಿನ್ನೆಲೆಯಲ್ಲಿ 2020ರಿಂದ 2022ರ ವರೆಗೆ ಜಾನ್ ರಾಬರ್ಟ್ ಶಿವಲಿಂಗಯ್ಯ ಅವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. 2022ರ ಜನವರಿಯಲ್ಲಿ ಶಿವಲಿಂಗಯ್ಯನ ಸದಾಶಿವನಗರ ನಿವಾಸಕ್ಕೆ ಹೋದಾಗ ಶಿವಲಿಂಗಯ್ಯ ದಂಪತಿ ಮನೆ ಖಾಲಿ ಮಾಡಿರುವ ವಿಚಾರ ಗೊತ್ತಾಗಿದೆ. ಮೊಬೈಲ್ ಸಂಪರ್ಕಕ್ಕೂ ಸಿಗದೆ ತಲೆಮರೆಸಿಕೊಂಡಿದ್ದಾರೆ. ಈ ಸಂಬಂಧ ನಿವೇಶನ ಮಾರಾಟ ಮಾಡುವುದಾಗಿ 56 ಲಕ್ಷ ರೂ. ಪಡೆದು ವಂಚಿಸಿದ ಶಿವಲಿಂಗಯ್ಯ ದಂಪತಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಜಾನ್ ರಾಬರ್ಟ್ ದೂರು ನೀಡಿದ್ದಾರೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.