Drug peddlers: 6 ಮಂದಿ ಡ್ರಗ್ಸ್ ಪೆಡ್ಲರ್ ಬಂಧನ: 44 ಲಕ್ಷ ರೂ. ಮಾದಕ ವಸ್ತು ಜಪ್ತಿ
Team Udayavani, Mar 13, 2024, 9:42 AM IST
ಬೆಂಗಳೂರು: ಡ್ರಗ್ಸ್ ಪೆಡ್ಲರ್‌ಗಳ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಫೆಬ್ರವರಿಯಲ್ಲಿ ಮೂವರು ವಿದೇಶಿ ಡ್ರಗ್ಸ್ ದಂಧೆಕೋರರು ಸೇರಿದಂತೆ 6 ಮಂದಿ ಪೆಡ್ಲರ್‌ಗಳನ್ನು ಬಂಧಿಸಿ 44 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ.
ಕಂಪನಿ ಮ್ಯಾನೇಜರ್: ಯಲಹಂಕ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಾರ್ಕೆಟಿಂಗ್ ಕಂಪನಿಯ ಮ್ಯಾನೇ ಜರ್‌ವೊಬ್ಬನನ್ನು ಬಂಧಿಸಿ 8 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈತ ಹೊರ ರಾಜ್ಯದವನಾಗಿದ್ದು, ಹೊರರಾಜ್ಯದಿಂದ ಗಾಂಜಾ ಖರೀದಿಸಿ, ನಗರದ ಪರಿಚಯಸ್ಥ ಗಿರಾಕಿಗಳಿಗೆ ಮಾರುತ್ತಿದ್ದ. ಈ ಬಗ್ಗೆ ಬಂದ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಗಿಟಾರ್ ಕಲಿಯಲು ಬಂದವ ಸೆರೆ: ಕೆ.ಜಿ.ನಗರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಗಿಟಾರ್ ಕಲಿಯುವ ಸಲುವಾಗಿ ಹೊರ ರಾಜ್ಯದಿಂದ ಬಂದಿದ್ದ ವ್ಯಕ್ತಿಯೊಬ್ಬ ಗಾಂಜಾ ಸೇವಿಸುವ ಹವ್ಯಾಸ ಹೊಂದಿದ್ದ. ಆತ ಸುಳ್ಳು ವಿಳಾಸವನ್ನು ನೀಡಿ ವಿದೇಶಿ ಪೊಸ್ಟ್ ಮೂಲಕ ಹೊರ ದೇಶದಿಂದ ಹೈಡ್ರೋ ಗಾಂಜಾ ಖರೀದಿ ಸುತ್ತಿದ್ದ. ಇದೀಗ ಆತ ಸಿಸಿಬಿ ಬಲೆಗೆ ಬಿದ್ದಿದ್ದಾನೆ.
ಸಿಗ್ವಿ ಡೆಲಿವರಿ ಬಾಯ್: ಇನ್ನು ರಾಜಗೋಪಾಲನಗರ ಪೊಲೀಸ್ ಠಾಣೆಯ ಪ್ರಕರಣದಲ್ಲಿ 3 ವರ್ಷಗಳ ಹಿಂದೆ ನಗರಕ್ಕೆ ಬಂದ ಹೊರ ರಾಜ್ಯದ ವ್ಯಕ್ತಿಯೊಬ್ಬ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಈತನು ಹೊರ ರಾಜ್ಯದಿಂದ ಗಾಂಜಾ ತಂದು ನಗರದಲ್ಲಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ. ಈತನಿಂದ 6 ಲಕ್ಷ ಮೌಲ್ಯದ 10 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.