ಕೇಂದ್ರದಿಂದ 7 ಅಂಶಗಳ ಕಾರ್ಯಕ್ರಮ

Team Udayavani, Sep 2, 2017, 12:09 PM IST

sadananada-ananth.jpg

ಬೆಂಗಳೂರು: 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಏಳು ಅಂಶಗಳ ಕಾರ್ಯಕ್ರಮ ರೂಪಿಸಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಹೇಳಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ಧಿ-ದೃಢ ನಿಶ್ಚಯದಿಂದ ಸಾಧನೆಯತ್ತ ನ್ಯೂ ಇಂಡಿಯಾ ಮೂಮೆಂಟ್ (2017-2022) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೃಷಿಯನ್ನೇ ನಂಬಿರುವ ರೈತರ ಆದಾಯ ಕೂಡ 2020ರಲ್ಲಿ ದ್ವಿಗುಣಗೊಳ್ಳುವಂತೆ ಮಾಡಲು ಸಂಕಲ್ಪ ಮಾಡಬೇಕು. ಕೇಂದ್ರ ಸರ್ಕಾರ ರೈತರ ಆದಾಯ ದ್ವಿಗುಣಗೊಳ್ಳುವಂತೆ ಮಾಡಲು ಏಳು ಅಂಶಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದನ್ನು ತಪ್ಪದೇ ನಿರ್ವಹಿಸಬೇಕು ಎಂದು ಸಲಹೆ ನೀಡಿದರು. 

ಮುಂದಿನ ಐದು ವರ್ಷಗಳಲ್ಲಿ ಇಡೀ ವಿಶ್ವವೇ ನಮ್ಮೆಡೆಗೆ ನೋಡುವಂತೆ ಆಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಕ್ಷೇತ್ರವೂ ಅಭಿವೃದ್ಧಿ ಸಾಧಿಸಬೇಕಿದೆ ಎಂದು ಹೇಳಿದರು. ಖಚಿತ ಆದಾಯಕ್ಕಾಗಿ ಎಲ್ಲರೂ ಬೆಳೆ ವಿಮೆ ಮಾಡಿಸಬೇಕು. ಸಾವಯವ ಕೃಷಿಗೆ ಆದ್ಯತೆ ನೀಡಬೇಕು. ಮಣ್ಣು , ಆರೋಗ್ಯ, ತಂತ್ರಜ್ಞಾನದ ಮಾಹಿತಿ ಪಡೆದುಕೊಂಡು ವ್ಯವಸ್ಥಾಯ ಮಾಡಬೇಕು.

ಅಧಿಕ ಇಳುವರಿ ನೀಡುವ ಬಿತ್ತನೆ ಬೀಜ ಹಾಗೂ ಸಸಿಗಳನ್ನು ಬಳಸಬೇಕು.  ಕೃಷಿಕರೇ ತಮ್ಮ ಬೆಳೆಗಳ ಮೌಲ್ಯವರ್ಧನೆ ಮಾಡಬೇಕು. ಆಹಾರ ಧಾನ್ಯಗಳನ್ನು ಸೂಕ್ತ ರೀತಿಯಲ್ಲಿ ಶೇಖರಿಸಬೇಕು.  ಈ ಏಳು ಅಂಶಗಳನ್ನು ಕೃಷಿಕರು ಕಾರ್ಯರೂಪಕ್ಕೆ ತರುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುತ್ತೇವೆ ಎಂದು  ಸಚಿವ ಅನಂತಕುಮಾರ್‌ ರೈತರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 

ಹವಾಮಾನ ವೈಪರಿತ್ಯದಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆದರೂ ಸಹ ಕಳೆದ 70 ವರ್ಷಗಳಿಗೆ ಹೋಲಿಸಿದರೆ ಈ ವರ್ಷ ದೇಶದ ರೈತ ಆಹಾರ ಪದಾರ್ಥಗಳನ್ನು  ಬೆಳೆದು ಶತಮಾನದ ದಾಖಲೆ ನಿರ್ಮಿಸಿದ್ದಾನೆ.  2022 ರ ವೇಳಗೆ ಭಾರತ ಜಗತ್ತಿನ ಸೂಪರ್‌ ಪವರ್‌ ದೇಶವಾಗುವುದರಲ್ಲಿ ಸಂಶಯವಿಲ್ಲ. ಕೇಂದ್ರ ಸರ್ಕಾರ ರೈತರಿಗಾಗಿ ಪ್ರಧಾನ ಮಂತ್ರಿ ಫ‌ಸಲ ಬೀಮಾ ಯೋಜನೆಯಲ್ಲಿ ರೈತರಿಗೆ ಬೆಳೆ ವಿಮೆ ಸೌಲಭ್ಯ ಕಲ್ಪಿಸಿದೆ.  ದೇಶಾದ್ಯಂತ ಜನೌಷಧಿ ಮಳಿಗೆಯಲ್ಲಿ ಕಡಿಮೆ ಬೆಲೆಯಲ್ಲಿ ಹೃದಯಕ್ಕೆ ಅಳವಡಿಸುವ ಸ್ಟಂಟಗಳು, ಮಂಡಿ ಚಿಪ್ಪುಗಳನ್ನು ಸಹ ಕೇಂದ್ರ ಸರ್ಕಾರ ನೀಡುತ್ತಿದೆ ಎಂದರು. 

ಈ ಹಿಂದೆ ನಮ್ಮ ದೇಶದಲ್ಲಿ ಯೂರಿಯಕ್ಕಾಗಿ ಲಾಠಿ ಚಾರ್ಜ್‌ ಆಗುತ್ತಿತ್ತು. ರೈತರಿಗೆ ಯೂರಿಯಾ ಸಿಗುವ ಮುನ್ನವೇ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿತ್ತು. ಪ್ರಸ್ತುತ ಬೇವು ಲೇಪಿತ ಯೂರಿಯಾವನ್ನು ರೈತರಿಗೆ ಕೊಡುತ್ತಿರುವುದರಿಂದ ಕಾಳ ಸಂತೆಗೆ ಹೋಗುತ್ತಿಲ್ಲ. ಇದರಿಂದ ಬೆಳೆಗಳ ಇಳುವರಿ ಶೇ.10ರಷ್ಟು ಜಾಸ್ತಿಯಾಗುತ್ತಿದೆ ಎಂದ ಅವರು, ಚೀನಾದಿಂದ ಪ್ರಸ್ತುತ ಯೂರಿಯಾ ಆಮದು ಮಾಡಿಕೊಳ್ಳುತ್ತಿದ್ದೇವೆ. 3 ವರ್ಷಗಳಲ್ಲಿ ಪಾಕಿಸ್ತಾನಕ್ಕೆ ಮೇಡ್‌ ಇನ್‌ ಇಂಡಿಯಾ ಯೂರಿಯವನ್ನು ರಫ್ತು ಮಾಡುವ ಸ್ಥಿತಿ ಬರಲಿದೆ ಎಂದು ಹೇಳಿದರು. 

ಕೇಂದ್ರ ಸಚಿವ ಡಿ.ಸಿ.ಸದಾನಂದಗೌಡ ಮಾತನಾಡಿ, 2020ರೊಳಗೆ ಎಲ್ಲಾ ರೈತರು ಸ್ವಾಭಿಮಾನಿಗಳಾಗಿರಬೇಕು.  ಬೆಳೆ ವಿಮೆ, ಹನಿ ನೀರಾವರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಡಿಎಸಿ ಜಂಟಿ ಕಾರ್ಯದರ್ಶಿ ನೀರಜ ಉಪಸ್ಥಿತರಿದ್ದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಹೆಚ್‌. ಶಿವಣ್ಣ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.