Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ
Team Udayavani, Dec 25, 2024, 2:15 PM IST
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಚಿನ್ನಾಭರಣ ಮಳಿಗೆ ಮಾಲಿಕನಿಗೆ 8 ಕೋಟಿ ರೂ.ಸಾಲ ಪಡೆದು ವಂಚಿಸಿದ ಆರೋಪದಡಿ ಮಹಿಳೆ, ಚಿತ್ರನಟ ಸೇರಿ ಮೂವರ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾರಾಹಿ ವಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿ ಮಾಲಿಕರಾದ ವನಿತಾ ಎಸ್.ಐತಾಳ್ ಎಂಬುವರು ನೀಡಿದ ದೂರಿನ ಮೇರೆಗೆ ಭವ್ಯಗೌಡ (ಹೆಸರು ಬದಲಿಸಲಾಗಿದೆ), ಈಕೆಯ ಪತಿ ಹರೀಶ್, ಚಿತ್ರನಟ ಧರ್ಮೇದ್ರ ವಿರುದ್ಧ ವಂಚನೆ, ನಂಬಿಕೆ ದ್ರೋಹ, ಬೆದರಿಕೆ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ಏನಿದು ದೂರು?: ವನಿತಾ ಎಸ್.ಐತಾಳ್ ನೀಡಿದ ದೂರಿನ ಅನ್ವಯ, ಆರ್.ಆರ್.ನಗರ ನಿವಾಸಿಗಳಾದ ಭವ್ಯಗೌಡ ಮತ್ತು ಆಕೆಯ ಪತಿ ಹರೀಶ್ ಪರಿಚಿತರು. ಆಗ ಭವ್ಯಗೌಡ ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನನಗೆ ನಂಬಿಸಿದ್ದರು. ನನಗೆ ಅನೇಕ ರಾಜಕೀಯ ವ್ಯಕ್ತಿಗಳ ಸಂಪರ್ಕವಿದೆ. ನಾನು ದೊಡ್ಡ ಉದ್ಯಮಿ ಎಂದು ನನ್ನ ಚಿನ್ನದಂಗಡಿಯಲ್ಲಿ ಹಲವು ಬಾರಿ ಚಿನ್ನಾಭರಣ ಸಾಲ ಪಡೆದು ಕೆಲ ದಿನಗಳ ಬಳಿಕ ಹಣವನ್ನು ನೀಡಿದ್ದಾರೆ. ಇದನ್ನು ನಂಬಿ ನಾನು ಅವರು ಕೇಳಿದಾಗಲೆಲ್ಲಾ ಚಿನ್ನಾಭರಣ ಸಾಲ ನೀಡುತ್ತಾ ಬಂದಿದ್ದೇನೆ.
ಭವ್ಯಗೌಡ ಮತ್ತು ಆಕೆಯ ಪತಿ ಹರೀಶ್ 2023ರ ಅ.12ರಿಂದ 2024ರ ಜ.1ರವರೆಗೆ ಹಂತ ಹಂತವಾಗಿ 14 ಕೆ.ಜಿ. 660 ಗ್ರಾಂ ಚಿನ್ನಾಭರಣಗಳನ್ನು ಸಾಲ ಪಡೆದಿದ್ದಾರೆ. ಅಲ್ಲದೆ, ಆಕೆಯ ಮ್ಯಾನೇ ಜ ರ್, ಬೌನ್ಸರ್‌ಗಳು ಚಿನ್ನಾಭರಣ ತೆಗೆದುಕೊಂಡು ಹೋಗಿದ್ದಾರೆ. ಕೆಲ ಬಾರಿ ನಮ್ಮ ಕಡೆಯವರು ಅವರ ಮನೆಗೆ ಚಿನ್ನಾಭರಣ ಕಳುಹಿ ಸಿಕೊಟ್ಟಿದ್ದೇನೆ. ಹೀಗೆ ಭವ್ಯಗೌಡ 8.41 ಕೋಟಿ ರೂ. ಮೌಲ್ಯದ 14 ಕೆ.ಜಿ.660 ಗ್ರಾಂ ಚಿನ್ನಾಭರಣ ಸಾಲ ಪಡೆದಿದ್ದಾರೆ. ಹಣ ವಾಪಸ್ ಕೊಡಲು ಒಪ್ಪಂದ ಮಾಡಿ ಕೊಂಡಿದ್ದರು. ಆದರೆ, ಈವರೆಗೂ ಹಣ ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ.
ಡಿಕೆಸು ಹೆಸರಿನಲ್ಲಿ ನಟ ಧರ್ಮೇಂದ್ರನಿಂದ ಕರೆ:
ನಾನು ಹಣ ನೀಡುವಂತೆ ಆರೋಪಿ ಭವ್ಯಗೌಡರನ್ನು ಚಿನ್ನದಂಗಡಿ ಮಾಲಿಕರು ಕೇಳಿದಾಗ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದರು. ಇದನ್ನು ನಾವು ನಂಬಿದ್ದೆವು. ನಂತರದ ದಿನದಲ್ಲಿ ವಿಚಾರಿಸಿದಾಗ ಭವ್ಯಗೌಡ ಡಿ.ಕೆ.ಸುರೇಶ್ ಅವರ ಹೆಸರಿನಲ್ಲಿ ಚಿತ್ರನಟ ಧರ್ಮೇಂದ್ರ ಮೂಲಕ ನಮಗೆ ಕರೆ ಮಾಡಿಸಿರುವುದು ತಿಳಿಯಿತು. ಈ ವಿಚಾರ ಪ್ರಸ್ತಾಪಿಸಿ ಭವ್ಯಗೌಡ ಮತ್ತು ಆಕೆಯ ಪತಿ ತಮಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
Bengaluru: ಸಾಲ ವಾಪಸ್ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ
Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.