ಪಿಎಚ್‌ಡಿ ಪರೀಕ್ಷೆ ಬರೆದ ಕೊಪ್ಪಳದ 91ರ ವೃದ್ದ
Team Udayavani, Sep 6, 2018, 6:15 AM IST
ಕೊಪ್ಪಳ/ಬಳ್ಳಾರಿ: ಶಿಕ್ಷಣ ಪಡೆವ ಹಂಬಲಕ್ಕೆ ವಯಸ್ಸಿನ ಮಿತಿಯಿಲ್ಲ ಎನ್ನುವುದಕ್ಕೆ ಕೊಪ್ಪಳ ತಾಲೂಕಿನ ಬಿಸರಳ್ಳಿಯ 91ರ ಇಳಿ ವಯಸ್ಸಿನ ಬಸವರಾಜ ಬಿಸರಳ್ಳಿ ಅವರೇ ಸಾಕ್ಷಿ. ತಮ್ಮ ಇಳಿ ವಯಸ್ಸಿನಲ್ಲಿಯೂ ಪಿಎಚ್‌ಡಿ ಪದವಿ ಪಡೆಯಬೇಕೆಂಬ ಆಸೆಯಿಂದ ಬಳ್ಳಾರಿಯ ಹಂಪಿ ವಿವಿಯಲ್ಲಿ ಮಂಗಳವಾರ ಪರೀಕ್ಷೆ ಬರೆದಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರಾದ ಶರಣ ಬಸವರಾಜ ಬಿಸರಳ್ಳಿ ಶಿಕ್ಷಕರಾಗಿ ಸೇವೆ ಸಲ್ಲಿಸಿ 1992ರಲ್ಲಿ ನಿವೃತ್ತರಾಗಿದ್ದಾರೆ. ಆಗಿನಿಂದಲೂ ಪಿಎಚ್‌ಡಿ ಪದವಿ ಪಡೆಯಬೇಕೆಂದು ಆಸೆಯನ್ನಿಟ್ಟುಕೊಂಡಿದ್ದರು. ಆದರೆ ವಿವಿಧ ಕಾರಣಗಳಿಂದ ಆಸೆ ಈಡೇರಿರಲಿಲ್ಲ. ಈ ಮೊದಲು ಕರ್ನಾಟಕ ವಿವಿಯಲ್ಲಿ ಎಂಎ ಪದವಿ ಪಡೆದಿದ್ದರು. ಆದರೆ ಪಿಎಚ್‌ಡಿ ಅರ್ಹತೆಗೆ ಬೇಕಾದ ಶೇ.55 ಅಂಕ ಬಂದಿರಲಿಲ್ಲ. ಹಾಗಾಗಿ ಹಂಪಿ ವಿವಿಯಲ್ಲಿ ಎಂಎ ಪದವಿ ಪಡೆದಿದ್ದರು. ಆಗ ಶೇ.66 ಅಂಕ ಬಂದ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಪಿಎಚ್‌ಡಿಯಲ್ಲಿ ವಚನ ಸಾಹಿತ್ಯ ಅಧ್ಯಯನದ ವಿಭಾಗಕ್ಕಾಗಿ ಪರೀಕ್ಷೆ ಬರೆದಿದ್ದಾರೆ.
ಹಿರಿಯ ಚೇತನ ಶರಣ ಬಸವರಾಜ ಬಿಸರಳ್ಳಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು. ಆರಂಭದಲ್ಲಿ ಕವಲೂರು ಶಾಲೆಯ ಶಿಕ್ಷಕರಾಗಿ ವೃತ್ತಿ ಆರಂಭಿಸಿ, ಮಂಗಳೂರು, ಕೊಪ್ಪಳ ಸೇರಿದಂತೆ ನಾನಾ ಕಡೆ ಕರ್ತವ್ಯ ನಿರ್ವಹಿಸಿದ್ದಾರೆ. 1992ರಲ್ಲಿ ಮಂಗಳೂರು ಶಾಲೆಯಲ್ಲಿಯೇ ನಿವೃತ್ತಿಯಾಗಿದ್ದರು. ನಿವೃತ್ತಿ ಬಳಿಕವಾದರೂ ಪಿಎಚ್‌ಡಿ ಪಡೆಯಬೇಕೆನ್ನುವ ಆಸೆಗೆ ನಿರಂತರ ಪ್ರಯತ್ನ ನಡೆಸಿದ್ದರು. ನಾಲ್ವರು ಪುತ್ರರು, ಒಬ್ಬಳು ಪುತ್ರಿ ಇದ್ದಾರೆ. ಐದು ಪುಸ್ತಕಗಳನ್ನು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.