934 ಕೋಟಿ ರೂ. ವಂಚನೆ ಕೇಸ್: ಬಿಸಿ ಮುಟ್ಟಿಸಿದ ಎಸಿಬಿ
Team Udayavani, Feb 8, 2019, 6:07 AM IST
ಬೆಂಗಳೂರು: ಪೌರ ಕಾರ್ಮಿಕರ ಭವಿಷ್ಯನಿಧಿ ಹಾಗೂ ಇಎಸ್‌ಐ ಪಾವಿಸದೇ 384 ಕೋಟಿ ರೂ.ವಂಚನೆ ಹಾಗೂ ಪೌರಕಾರ್ಮಿಕರ ನಕಲಿ ದಾಖಲೆ ಸೃಷ್ಟಿಸಿ 550 ಕೋಟಿ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿರುವ ಆರೋಪ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಗುರುವಾರ ಬಿಬಿಎಂಪಿ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದೆ.
ಈ ಕುರಿತು ಹಲವು ಬಾರಿ ನೋಟಿಸ್ ನೀಡಿದರೂ ದಾಖಲೆ ಒದಗಿಸದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ ತಂಡ ಗುರುವಾರ ಬೊಮ್ಮನಹಳ್ಳಿ ವಲಯ ಕಚೇರಿಗೆ ಏಕಾಏಕಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ. ದಾಳಿ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದೆ. ನಗರದ ಬಿಬಿಎಂಪಿ ವಲಯಕಚೇರಿಗಳಲ್ಲಿ ದಾಖಲೆಗಳನ್ನು ಕೋರಿದ್ದು ಕೆಲವು ಕಚೇರಿಗಳು ಸಲ್ಲಿಸಿದ್ದವು. ಬೊಮ್ಮನಹಳ್ಳಿ ವಲಯದಿಂದ ಸಲ್ಲಿಕೆಯಾಗಿರಲಿಲ್ಲ.
ಹೀಗಾಗಿ ಕಾರ್ಯಾಚರಣೆ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಬಿಬಿಎಂಪಿಯಲ್ಲಿ 6,600 ಪೌರಕಾರ್ಮಿಕರ ನಕಲಿ ದಾಖಲೆ ಸೃಷ್ಟಿಸಿ 550 ಕೋಟಿ ವಂಚಿಸಲಾಗಿದೆ. ಜತೆಗೆ 384 ಕೋಟಿ ಭವಿಷ್ಯ ನಿಧಿ, ಇಎಸ್‌ಐ ಖಾತೆಗೆ ಪಾವತಿಸದೇ ವಂಚನೆ ನಡೆಸಲಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ 2017ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು ನೀಡಿತ್ತು. ಪ್ರಕರಣ ಎಸಿಬಿಗೆ ವಹಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.