Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
Team Udayavani, Nov 17, 2024, 2:52 PM IST
ಬೆಂಗಳೂರು: ಹೋಟೆಲ್ ಕನ್ಸಲ್ಟೆನ್ಸಿ ಸರ್ವಿಸ್ ಮಾಲಿಕರೊಬ್ಬರು ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಬ್ಯಾಡರ ಹಳ್ಳಿಯ ಮುದ್ದಿನ ಪಾಳ್ಯದಲ್ಲಿ ನಡೆದಿದೆ.
ನಾಗರಬಾವಿ ನಿವಾಸಿ ಪ್ರದೀಪ್ (42) ಆತ್ಮಹತ್ಯೆ ಮಾಡಿಕೊಂಡ ವರು. ನಾಗರಬಾವಿಯಲ್ಲಿ ಹೋಟೆಲ್ ಕನ್ಸಲ್ಟೆನ್ಸಿ ಸರ್ವೀಸ್ ನಡೆಸುತ್ತಿರುವ ಪ್ರದೀಪ್, ಶನಿವಾರ ಮಧ್ಯಾಹ್ಯ ಸುಮಾರು 3.10ಕ್ಕೆ ಮುದ್ದಿನ ಪಾಳ್ಯದ ವಿಶ್ವೇಶ್ವರಯ್ಯ ಲೇಔಟ್ ರಸ್ತೆ ಬದಿ ದೆಹಲಿ ನೋಂದಣಿಯ ಸ್ಕೋಡಾ ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರಿನಲ್ಲಿ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಲೇಔಟ್ ರಸ್ತೆಗೆ ಬಂದಿದ್ದು, ಕೆಲವೇ ನಿಮಿಷಗ ಳಲ್ಲಿ ಕಾರಿನೊಳಗೆ ದಟ್ಟ ಹೊಗೆ ಕಾಣಿಸಿ ಕೊಂಡಿದ್ದು, ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಅದನ್ನು ಗಮನಿಸಿದ ಸ್ಥಳೀಯರು, ಪೊಲೀಸ್ ನಿಯಂತ್ರಣ ಕೊಠಡಿ 112ಗೆ ಮಾಹಿತಿ ನೀಡಿದ್ದಾರೆ. ಬಳಿಕ ಹೋಯ್ಸಳ ಗಸ್ತು ವಾಹನದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ಬೆಂಕಿ ನಂದಿಸಿದ್ದಾರೆ. ಕಾರಿನೊಳಗೆ ನೋಡಿದಾಗ ಚಾಲಕನ ಸೀಟಿನಲ್ಲಿ ಅರೆಬರೆ ಬೆಂದ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ.
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ: ಕೃತ್ಯ ನಡೆದ ಸ್ಥಳದ ಸಮೀಪದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಪ್ರದೀಪ್, ವಿಶ್ವೇಶ್ವ ರಯ್ಯ ಲೇಔಟ್‌ಗೆ ಬರುವ ಮೊದಲು ಹತ್ತ ರದ ಪೆಟ್ರೋಲ್ ಬಂಕ್‌ನಿಂದ ಪೆಟ್ರೋಲ್ ಖರೀದಿಸಿರುವುದು ಪತ್ತೆಯಾಗಿದೆ. ಹೀಗಾಗಿ ಪೆಟ್ರೋಲ್ ತಂದು ಕಾರಿನಲ್ಲೇ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಪ್ರದೀಪ್, ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಅವರು ಬಂದ ಬಳಿಕ ಘಟನೆಗೆ ನಿಖರ ಕಾರಣ ತಿಳಿದು ಬರಲಿದೆ. ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿ ಕೊಂಡಿರುವ ಸಾಧ್ಯತೆಯಿದೆ.
ಪ್ರದೀಪ್ ಅವರ ಮೊಬೈಲ್ ಕರೆ ವಿವರ ಪಡೆಯಲಾಗುತ್ತಿದೆ. ಅಂತಿಮ ಕರೆ ಯಾರಿಗೆ ಮಾಡಿ ದ್ದಾರೆ ಎಂಬುದು ಪತ್ತೆ ಹಚ್ಚಿ, ಅವರ ವಿಚಾರಣೆ ನಡೆಸಲಾಗುತ್ತದೆ. ಜತೆಗೆ ಕುಟಂಬ ಸದಸ್ಯರ ಹೇಳಿಕೆಯಿಂದಲೂ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ದೆಹಲಿಯಲ್ಲಿ ಪತ್ನಿ ಹೆಸರಿನಲ್ಲಿ ಕಾರು ಖರೀದಿ: ಮೊದಲು ಮೃತ ವ್ಯಕ್ತಿಯ ಗುರುತು ಪತ್ತೆಯಾಗಲಿಲ್ಲ. ಬಳಿಕ ಪೊಲೀಸರು ಸ್ಕೋಡಾ ಕಾರಿನ ನೋಂದಣಿ ಸಂಖ್ಯೆ ಪರಿಶೀಲಿಸಿದಾಗ ದೆಹಲಿಯಲ್ಲಿ ನೋಂದಣಿ ಸಂಖ್ಯೆ ಪತ್ತೆಯಾಗಿದೆ. ನಂತರ ಆರ್‌ಟಿಒ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಸ್ಕೋಡಾ ಕಾರನ್ನು ಪ್ರದೀಪ್ ದೆಹಲಿಯಲ್ಲಿ ವ್ಯಕ್ತಿಯೊಬ್ಬರಿಂದ ಖರೀದಿಸಿರುವುದು ಗೊತ್ತಾಗಿದೆ. ಬಳಿಕ ಪ್ರದೀಪ್ ಆ ಕಾರಿನ ಮಾಲಿಕನಿಂದ ಎನ್‌ಒಸಿ ಪಡೆದು ಪತ್ನಿ ಹೆಸರಿಗೆ ಕಾರಿನ ಮಾಲೀಕತ್ವ ವರ್ಗಾವಣೆಗೆ ಜಯನಗರ ಆರ್‌ಟಿಒ ಕಚೇರಿಗೆ ಎನ್‌ಒಸಿ ಸಲ್ಲಿಸಿರುವುದು ತಿಳಿದು ಬಂದಿದೆ. ಈ ವೇಳೆ ಪೊಲೀಸರು ಪ್ರದೀಪ್ ಅವರ ಪತ್ನಿಯನ್ನು ಸಂಪರ್ಕಿಸಿ ವಿಚಾರಿಸಿದಾಗ, ಸ್ಕೋಡಾ ಕಾರನ್ನು ಪತಿ ಪ್ರದೀಪ್ ಬಳಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಇದರ ಆಧಾರದ ಮೇಲೆ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರದೀಪ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.