ಜಿಗ್ನೇಶ್ ಮೇವಾನಿ ವಿರುದ್ಧ ಹಲವೆಡೆ ಪ್ರಕರಣ ದಾಖಲು
Team Udayavani, Apr 8, 2018, 7:30 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿ ಜನತೆಗೆ ಗಲಾಟೆ ಎಬ್ಬಿಸಲು ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿ ಸಿದಂತೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಗಂಗಾವತಿ, ಚಿತ್ರದುರ್ಗ, ಮಂಡ್ಯ, ರಾಮನಗರ, ಮಂಗಳೂರಿನ ಪುಂಜಾಲುಕಟ್ಟೆಗಳಲ್ಲಿ ಪ್ರಕರಣ ದಾಖಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಕರ್ನಾಟಕದಲ್ಲಿ ಗಲಭೆ ಸೃಷ್ಠಿಸಲು ಹೊರಟಿರುವ ಜಿಗ್ನೇಶ್ ಮೇವಾನಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ. ಶಾಸಕ ಜಿಗ್ನೇಶ್ ಮೇವಾನಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರು, ಕರ್ನಾಟಕವನ್ನು ಪ್ರವೇಶಿಸದಂತೆ ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.
ಚಿತ್ರದುರ್ಗದಲ್ಲಿ ಶುಕ್ರವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೇವಾನಿ, “ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದು ಸಭೆ ನಡೆಸಿದರೆ ಕುರ್ಚಿಗಳನ್ನು ತೂರಿ ಗಲಭೆ ಎಬ್ಬಿಸಿ ಕಾರ್ಯಕ್ರಮ ಹಾಳು ಮಾಡಿ’ ಎಂದು ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.