Bangalore: ಬಾಂಬ್ ಇದೆ ಎಂದು ಆತಂಕ ಸೃಷ್ಟಿಸಿದ ವಿಮಾನ ಪ್ರಯಾಣಿಕನ ವಿರುದ್ಧ ಕೇಸು
Team Udayavani, Jan 31, 2024, 11:18 AM IST
ಬೆಂಗಳೂರು: ಲಗೇಜ್ ತಪಾಸಣೆ ವೇಳೆ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿ ಪ್ರಯಾಣಿಕನೊಬ್ಬ ಆತಂಕ ಸೃಷ್ಟಿಸಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜ.28ರಂದು ಸಂಜೆ 7.28ಕ್ಕೆ ಈ ಘಟನೆ ನಡೆದಿದೆ.
ಕೆಐಎ ವಿಮಾನ ನಿಲ್ದಾಣದ ಭದ್ರತಾ ವಿಭಾಗದ ಸಹಾಯಕ ವ್ಯವಸ್ಥಾಪಕ ಯು. ಗಣೇಶ್ ಎಂಬವರು ನೀಡಿದ ದೂರಿನ ಮೇರೆಗೆ ಬೆಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆ ಪೊಲೀಸರು ಕೇರಳ ಮೂಲದ ಸಜು ಕೆ.ಕುಮಾರನ್(32) ಎಂಬಾನನ್ನು ಬಂಧಿಸಿ, ಹೇಳಿಕೆ ದಾಖಲಿಸಿಕೊಂಡ ಠಾಣಾ ಜಾಮೀನಿನ ಮೇಲೆ ಬಿಡು ಗಡೆಗೊಳಿಸಿದ್ದಾರೆ.
ಏನಿದು ಘಟನೆ?: ಕೇರಳ ಮೂಲದ ಸಜು ಕೆ.ಕುಮಾರನ್ ನಗರದ ಪೀಣ್ಯ ಕೈಗಾರಿಕಾ ಪ್ರದೇಶದ ಫಾರ್ಮಾ ಕಂಪನಿ ಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕೇರಳದಲ್ಲಿ ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ತುರ್ತಾಗಿ ಕೊಚ್ಚಿಗೆ ಪ್ರಯಾಣ ಬೆಳೆಸಬೇಕಿದ್ದರಿಂದ ಜ.28ರಂದು ಸಂಜೆ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಲಗೇಜ್ ತಪಾಸಣೆಗೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕೋಪಗೊಂಡು ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದಿದ್ದಾಗಿ ಆತ ಹೇಳಿಕೆ ನೀಡಿದ್ದಾನೆ. ಆದರೂ, ಸಾರ್ವಜನಿಕ ಸ್ಥಳದಲ್ಲಿ ಕಿಡಿಗೇಡಿತನ ಪ್ರದರ್ಶಿಸಿದ ಆತನ ವಿರುದ್ಧ ಎಫ್ಐಆರ್ ದಾಖಲಿಸಿ ಬಳಿಕ ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.