

Team Udayavani, Mar 4, 2024, 10:39 AM IST
ಬೆಂಗಳೂರು: ತಾಯಿಯೇ ತನ್ನ ಮೂರು ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಅಮಾ ನವೀಯ ಘಟನೆಯೊಂದು ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹೊಸಕೆರೆಹಳ್ಳಿ ಸಮೀಪದ ವೀರಭದ್ರನಗರದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಆರೋಪಿತ ತಾಯಿ ಶಾರೀನ್‌ಳನ್ನು ಗಿರಿನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ.
ಶಾರೀನ್ ಎಂಬಾಕೆ ಕೌಟುಂಬಿಕ ಕಲಹ ದಿಂದ ಪತಿಯಿಂದ ಪ್ರತ್ಯೇಕವಾಗಿದ್ದು, ತನ್ನ ಮೂರು ವರ್ಷದ ಮಗುವಿನ ಜತೆಗೆ ವೀರಭದ್ರ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಳೆ. ವೃತ್ತಿಯಲ್ಲಿ ಫ್ಯಾಶನ್ ಡಿಸೈನರ್ ಆಗಿರುವ ಶಾರೀನ್ ಬೆಳಗ್ಗೆ ಕೆಲಸಕ್ಕೆ ತೆರಳುವಾಗ ಮಗುವನ್ನು ಮನೆಯ ಒಳಗೆ ಕೂಡಿ ಹಾಕಿ ಬೀಗ ಹಾಕಿಕೊಂಡು ಹೋಗುತ್ತಿದ್ದಳು. ಸಂಜೆ ಮನೆಗೆ ಬರುತ್ತಿದ್ದಳು ಎಂದು ತಿಳಿದು ಬಂದಿದೆ.
ಫೆ.19ರಂದು ಆ ಮಗು ಮನೆಯ ಕಿಟಕಿ ಬಳಿ ನಿಂತು ಅಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮಗುವಿನ ಬಳಿ ತೆರಳಿ ಮಾತನಾಡಿಸಿದ್ದಾರೆ. ಮಗುವಿನ ಮೈ ತುಂಬಾ ಕಚ್ಚಿದ, ಗೀರಿದ ಬಾಸುಂಡೆ ಬಂದಿರುವ ಗಾಯಗಳು ಕಂಡು ಬಂದಿವೆ. ಮರ್ಮಾಂಗದಲ್ಲೂ ಗಾಯಗಳಾಗಿರುವುದು ಕಂಡು ಬಂದಿದೆ. ಈ ಬಗ್ಗೆ ಮಗುವನ್ನು ಪ್ರಶ್ನಿಸಿದಾಗ ಆಂಕಲ್ ಮತ್ತು ಅಮ್ಮ ಹೊಡೆದಿದ್ದಾರೆ ಎಂದು ಮಗು ಹೇಳಿದೆ. ಬಳಿಕ ಸ್ಥಳೀಯರೇ ಮಗುವಿಗೆ ಕಿಟಕಿ ಮೂಲಕವೇ ಊಟೋಪಚಾರ ಮಾಡಿದ್ದಾರೆ. ಈ ವೇಳೆ ಶಾರೀನ್‌ಗೆ ಬಾಯ್ ಫ್ರೆಂಡ್ ಇದ್ದು, ಇಬ್ಬರೂ ಆ ಮಗುವಿನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಮಗುವಿನ ತಾಯಿಗೆ ತರಾಟೆ: ಅದಕ್ಕೂ ಮೊದಲು ಮಗುವಿನ ಮೇಲೆ ನಡೆದಿ ರುವ ಅಮಾನುಷ ಕೃತ್ಯಕ್ಕೆ ಆಕ್ರೋಶಗೊಂಡ ಸ್ಥಳೀಯರು ಹಾಗೂ ಸಂಘಟ ನೆಗಳು ಶಾರೀನ್‌ಗೆ ತರಾಟೆ ತೆಗೆದ ು ಕೊಂಡಿದ್ದಾರೆ. ಬಳಿಕ ಆ ಮಗುವನ್ನು ಗೃಹಬಂಧನದಿಂದ ಮುಕ್ತಿಗೊಳಿಸಿದ್ದಾರೆ. ಬಳಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.
“ಕೆಟ್ಟಬುದ್ಧಿ ಕಲಿಯದಿರಲೆಂದು ಹೊಡೆದೆ’: ಪೊಲೀಸರ ವಿಚಾರಣೆಯಲ್ಲಿ “ತಂದೆಯ ರೀತಿ ಕೆಟ್ಟ ಬುದ್ಧಿ ಕಲಿಯದಿರಲಿ ಎಂದು, ನನ್ನ ಮಗುವಿಗೆ ಹೊಡೆದಿದ್ದೇನೆ. ಆದರೆ, ಕುಕ್ಕರ್‌ನಿಂದ ಮಗುವಿಗೆ ಹಲ್ಲೆ ಮಾಡಿಲ್ಲ. ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಇದೆ. ಅದಕ್ಕೂ ಚಿಕಿತ್ಸೆ ಕೊಡಿಸುತ್ತಿದ್ದೇನೆ. ನನಗೆ ಆರು ತಿಂಗಳಿಂದ ಕೆಲಸ ಇರಲಿಲ್ಲ. ಈಗ ಕೆಲಸ ಸಿಕ್ಕಿದೆ. ನನಗೆ ಯಾರು ಇಲ್ಲ. ಹೀಗಾಗಿ ಮಗುವನ್ನು ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋಗುತ್ತಿದ್ದೆ. ಸಂಜೆ ಬೇಗ ಬಂದು ನೋಡಿಕೊಳ್ಳುತ್ತಿದ್ದೆ ಎಂದು ತಾಯಿ ಶಾರೀನ್ ಹೇಳಿಕೆ ನೀಡಿದ್ದಾಳೆ ಎಂದು ಮೂಲಗಳು ತಿಳಿಸಿವೆ.
ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಸೂಚನೆ ಮೇರೆಗೆ ಎಫ್‌ಐಆರ್ ದಾಖಲು:
ಬೆಂಗಳೂರು: ಹೆತ್ತ ತಾಯಿಯೇ ತನ್ನ ಮೂರುವರೆ ವರ್ಷದ ಮಗನಿಗೆ ಅಮಾನುಷವಾಗಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರ ಸೂಚನೆ ಮೇರೆಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಹಲ್ಲೆಗೈದ ಶಾರೀನ್ ಎಂಬ ಮಹಿಳೆ ಮತ್ತು ಆಕೆಯ ಪ್ರಿಯಕರನ ವಿರುದ್ಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಹಲ್ಲೆಗೀ ಡಾದ ಮೂರುವರೆ ವರ್ಷದ ಸ್ಟಾಲಿನ್ ಎಂಬ ಮಗುವನ್ನು ರಕ್ಷಿಸಲಾಗಿದೆ.
ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಹತ್ತಿರದ ಡಾ. ಎಂ.ಎಚ್. ಮರೀಗೌಡ ರಸ್ತೆಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಆರ್. ನಾಗರತ್ನ ಹಾಗೂ ರಾಜೇಶ್ವರಿ ಅವರು ನೀಡಿದ ದೂರಿನ್ವಯ ಗಿರಿನಗರ ಪೊಲೀಸರು ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮಗುವಿನ ಮೇಲೆ ಕೃತ್ಯವೆಸಗಿರುವ ಶಾರಿನ್ ವಿರುದ್ಧ ಯಾವುದೇ ಕ್ರಮ ಆಗಿರಲಿಲ್ಲ. ಘಟನೆ ಕುರಿತಂತೆ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರು ಇದೊಂದು ಅಮಾನುಷ ಕೃತ್ಯವಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಇಲಾಖಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಆದೇಶದ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Cauvery water: ಕಾವೇರಿ ನೀರು ಬಳಸಿ ಕಾರು ತೊಳೆದರೆ ಹುಷಾರ್: ಬೀಳುತ್ತೆ 5000 ರೂ. ದಂಡ!
Fraud: ಟ್ರಾಯ್, ಸಿಬಿಐ ತಂಡದ ಹೆಸರಿನಲ್ಲಿ 42.85 ಲಕ್ಷ ರೂ. ವಂಚನೆ: ಕೇಸ್ ದಾಖಲು
Namma Metro: ದರ ಗಣನೀಯ ಹೆಚ್ಚಳದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ
Fraud Case: ಐಶ್ವರ್ಯಗೌಡ ವಿರುದ್ಧದ ಕೇಸ್‌ಗೆ ಇ.ಡಿ. ಎಂಟ್ರಿ
Bengaluru: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಂದ ಪುತ್ರ!
Udupi: ಗೀತಾರ್ಥ ಚಿಂತನೆ-191: “ಡಿಸಿಶನ್ ಮೇಕರ್ ನೀನಲ್ಲ’ ಎಂಬ ಶ್ರೀಕೃಷ್ಣ
Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ
Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್ ಜಾರಕಿಹೊಳಿ
Mangaluru: ವಿದ್ಯುತ್ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
You seem to have an Ad Blocker on.
To continue reading, please turn it off or whitelist Udayavani.