ದೇಶಕ್ಕೆ ಸಮರ್ಥ ನಾಯಕನನ್ನು ಆಯ್ಕೆ ಮಾಡಬೇಕಿದೆ
Team Udayavani, Apr 9, 2019, 3:00 AM IST
ಬೆಂಗಳೂರು: ದೇಶಕ್ಕೆ ಸಮರ್ಥ ನಾಯಕನನ್ನು ಆಯ್ಕೆ ಮಾಡುವವರು ನೀವಾಗಿದ್ದು, ಪುನಃ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಕರೆ ನೀಡಿದರು.
ಯಶವಂತಪುರದ ಮೇವಾರ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯಂತಹ ಜಾಗತಿಕ ನಾಯಕನನ್ನು ದೇಶಕ್ಕೆ ನೀಡಿದ ಕೊಡುಗೆ ನಿಮಗೆ ಸಲ್ಲುತ್ತದೆ. ಕೇಂದ್ರದಲ್ಲಿ ಸುಸ್ಥಿರ ಆಡಳಿತ ಹಾಗೂ ಸಮರ್ಥ ನಾಯಕತ್ವಕ್ಕಾಗಿ ಬಿಜೆಪಿಯನ್ನು ಬೆಂಬಲಿಸಬೇಕಿದೆ ಎಂದು ಮನವಿ ಮಾಡಿರು.
ಮೋದಿಯವರು ದೇಶದ ಹಿತಕ್ಕಾಗಿ ತೆಗೆದುಕೊಂಡ ದಿಟ್ಟ ನಿರ್ಧಾರಗಳು ಎಲ್ಲರಿಗೂ ಗೊತ್ತಿದೆ. ಜಿಎಸ್‌ಟಿ, ಸಾವಿರ ಹಾಗೂ ಐದು ನೂರು ರೂಪಾಯಿ ನೋಟು ಅಮಾನ್ಯಿàಕರಣ, ಉಜ್ವಲ, ಮುದ್ರಾ, ಜೆನರಿಕ್ ಔಷಧಿ, ಜನ್‌ಧನ್ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಸಮರ್ಥ ಆಡಳಿತ ನೀಡಿದ್ದಾರೆ ಎಂದು ಹೇಳಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಸಾಧನೆಗಳ ಕಿರುಹೊತ್ತಿಗೆ ಹೊರತಂದಿದ್ದು, ಅದನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಭವ್ಯ ಭಾರತಕ್ಕಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಮತದಾರರ ಮನವೊಲಿಸಿ ಎಂದು ಸಲಹೆ ನೀಡಿದರು.
ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿದ ನಂತರ ಪಾಕಿಸ್ತಾನದ ಬಾಲಾಕೋಟ್‌ಗೆ ನುಗ್ಗಿ ನಮ್ಮ ಸೈನಿಕರು ಉಗ್ರರನ್ನು ಸದೆಬಡಿದರು. ಪಾಕ್ ಬೆಂಬಲಕ್ಕೆ ಅದರ ಮಿತ್ರ ರಾಷ್ಟ್ರಗಳಾದ ಸೌದಿ ಅರೇಬಿಯಾ, ಚೀನಾಗಳೇ ಬರಲಿಲ್ಲ. ಇದಕ್ಕೆ ಮೋದಿಯವರು ವಿಶ್ವಮಟ್ಟದಲ್ಲಿ ಹೊಂದಿರುವ ವರ್ಚಸ್ಸು ಕಾರಣವಾಗಿದೆ ಎಂದು ವಿವರಿಸಿದರು.
ಮುಖವಾಡ ಹೇಳಿಕೆಗೆ ಸವಾಲು: ಬಿಜೆಪಿಯವರು ಮೋದಿಯವರ ಮುಖವಾಡ ಹಾಕಿಕೊಂಡು ಮತ ಕೇಳಲು ಬರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಮೋದಿಯವರ ಸಾಧನೆಗಳನ್ನು ಸಹಿಸಿಕೊಳ್ಳಲಾಗದೆ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಕಾಂಗ್ರೆಸಿಗರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರೇಳಿಕೊಂಡು ಮತಯಾಚನೆ ಮಾಡಲಿ ನೋಡೋಣ ಎಂದು ಸವಾಲು ಹಾಕಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಮಾತನಾಡಿ, ಸದಾನಂದಗೌಡರು ಸಜ್ಜನ ರಾಜಕಾರಣಿಯಾಗಿದ್ದು, ದುರಹಂಕಾರದ ರಾಜಕಾರಣ ಎಂದೂ ಮಾಡಿಲ್ಲ. ಅವರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಇಂತಹ ಒಳ್ಳೆಯ ವ್ಯಕ್ತಿಯನ್ನು ಪುನರಾಯ್ಕೆ ಮಾಡಲು ನಾವೆಲ್ಲ ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದು ಮನವಿ ಮಾಡಿದರು.
ಮಾಜಿ ಶಾಸಕರಾದ ಮುನಿರಾಜು, ನೆ.ಲ.ನರೇಂದ್ರ ಬಾಬು ಹಾಗೂ ಮುಖಂಡರಾದ ಡಿ.ಎಸ್.ವೀರಯ್ಯ, ಗೋವಿಂದರಾಜು, ತಿಪ್ಪೇಸ್ವಾಮಿ, ಎಲ್.ಕೆ.ರಾಜು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.