ರೈತರ ಅಂಗೈಲಿ ಜಮಿನಿನ ಸಮಗ್ರ ಚಿತ್ರಣ

Team Udayavani, Nov 18, 2018, 6:35 AM IST

websuite.jpg

ಬೆಂಗಳೂರು: ಮೊಬೈಲ್‌ನಲ್ಲಿ ದಾಖಲಾಗುವ ಕೇವಲ ಅಕ್ಷಾಂಶ-ರೇಖಾಂಶಗಳಿಂದ ರೈತರು ಈಗ ತಮ್ಮ ಜಮೀನಿನ ಮಣ್ಣಿನ ಫ‌ಲವತ್ತತೆ ಅರಿಯಬಹುದು. ಈ ಮೂಲಕ ಅನಗತ್ಯ ರಸಗೊಬ್ಬರ ಬಳಕೆಗೆ ಕಡಿವಾಣ ಬೀಳಲಿದ್ದು, ಶೇ.40ರಷ್ಟು ರಾಸಾಯನಿಕ ವೆಚ್ಚ ತಗ್ಗಿಸಬಹುದು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗವು ತುಮಕೂರು ಸಿದ್ಧಗಂಗಾ ತಾಂತ್ರಿಕ ಸಂಸ್ಥೆ ಸಹಯೋಗದಲ್ಲಿ “ಮಣ್ಣು ಪರೀಕ್ಷೆ ಬೆಳೆ ಸ್ಪಂದನೆ ಪ್ರಾಯೋಜನೆ’ಯಲ್ಲಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದು, ದೇಶದಲ್ಲಿ ಮೊಟ್ಟಮೊದಲ ಬಾರಿಗೆ ತುಮಕೂರಿನಲ್ಲಿ ಈ ತಂತ್ರಜ್ಞಾನದ ಪ್ರಯೋಗ ನಡೆಯುತ್ತಿದೆ. ಇದು ಯಶಸ್ವಿಯಾದರೆ, ದೇಶಕ್ಕೆ ಈ ತಂತ್ರಜ್ಞಾನ ಮಾದರಿ ಆಗಲಿದೆ. ಈ ನಿಟ್ಟಿನಲ್ಲಿ ಭೂಪಾಲ್‌ನ ಭಾರತೀಯ ಮಣ್ಣು ವಿಜ್ಞಾನ ಸಂಸ್ಥೆ ಆಸಕ್ತಿ ತೋರಿಸಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ರೈತರು ತಮ್ಮ ಜಮೀನಿನಲ್ಲಿ ನಿಂತು ಮೊಬೈಲ್‌ನಲ್ಲಿರುವ “ಕಂಪಾಸ್‌’ ಮೇಲೆ ಕ್ಲಿಕ್‌ ಮಾಡಿದರೆ ಸಾಕು, ಎರಡೂ ತುದಿಗಳಲ್ಲಿ ಅಕ್ಷಾಂಶ-ರೇಖಾಂಶಗಳು ಕಾಣಿಸುತ್ತವೆ. ಅದನ್ನು ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ “ಕೃಷಿ ಗಣಕ’ದಲ್ಲಿ ನಮೂದಿಸಿದರೆ, ಜಮೀನಿನ ಫ‌ಲವತ್ತತೆಯ ಇಡೀ ಚಿತ್ರಣ ಸಿಗುತ್ತದೆ. ಜತೆಗೆ ನೀವು ಬೆಳೆಯುವ ಬೆಳೆಗೆ ಇಳುವರಿ ಗುರಿಯನ್ನು ತಿಳಿಸಿದರೆ, ಅದಕ್ಕೆ ಅಗತ್ಯವಿರುವ ರಸಗೊಬ್ಬರದ ಮಾಹಿತಿಯನ್ನೂ ನೀಡುತ್ತದೆ. ಇದರಿಂದ ಅನಗತ್ಯ ಗೊಬ್ಬರ ಬಳಕೆ ತಪ್ಪಲಿದೆ. ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ ಈ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ತುಮಕೂರು ಜಿಲ್ಲೆಯಲ್ಲಿ ಒಂದೇ ಹಂಗಾಮಿನ ಕೇವಲ ಒಂದು ಬೆಳೆಯಲ್ಲಿ ಕನಿಷ್ಠ ಎರಡು ಕೋಟಿ ರೂ. ಉಳಿತಾಯ ಮಾಡಬಹುದು!

ಈಗಿರೋದು ಬೆಳೆಗೆ ತಕ್ಕಂತೆ ಗೊಬ್ಬರ
ಪ್ರಸ್ತುತ ರೈತರು ಬೆಳೆಗೆ ತಕ್ಕಂತೆ ಗೊಬ್ಬರ ಹಾಕುತ್ತಿದ್ದಾರೆ. ಆದರೆ, ಮಣ್ಣಿನ ಫ‌ಲವತ್ತತೆಗೆ ಅನುಗುಣವಾಗಿ ಬಿತ್ತನೆ ಹಾಗೂ ರಸಗೊಬ್ಬರ ಬಳಕೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಜಿಪಿಎಸ್‌ ಮೂಲಕ ಸುಮಾರು ಹತ್ತು ಸಾವಿರ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿ, ಆ ಎಲ್ಲ ದತ್ತಾಂಶಗಳನ್ನು ಜಿಐಎಸ್‌ನಲ್ಲಿ ಹಾಕಿ, ಮಣ್ಣಿನ ಫ‌ಲವತ್ತತೆ ನಕ್ಷೆ ತಯಾರಿಸಲಾಗಿದೆ. ಅದೇ ರೀತಿ, ಮತ್ತೂಂದೆಡೆ 1970ರಿಂದ ಈವರೆಗಿನ 50ಕ್ಕೂ ಹೆಚ್ಚು ಬೆಳೆಗಳ ಇಳುವರಿ ಗುರಿ ಸಮೀಕರಣಗಳನ್ನು ಮಾಡಿದ್ದು, ಆ ಮಾಹಿತಿಯನ್ನೂ ಹಾಕಲಾಗಿದೆ. ಇದರಿಂದ ರೈತರಿಗೆ ಮಣ್ಣಿನಲ್ಲಿರುವ ಪೋಷಕಾಂಶಗಳ ಪ್ರಮಾಣ ಮತ್ತು ಆ ಜಮೀನಿನ ಇಳುವರಿ ಸಾಮರ್ಥ್ಯ ಎರಡೂ ಸಿಗುತ್ತದೆ.

ಈ ಸಂಬಂಧ http://krishiganaka.sit.ac.in  ಅಭಿವೃದ್ಧಿಪಡಿಸಲಾಗಿದ್ದು, ಈ ಎಲ್ಲ ಮಾಹಿತಿಯನ್ನೂ ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ. ರೈತರು ಮೊಬೈಲ್‌ನಲ್ಲಿ ಸಂಗ್ರಹಿಸಿದ ಅಕ್ಷಾಂಶ-ರೇಖಾಂಶಗಳನ್ನು ಹಾಕಿದ ತಕ್ಷಣ ಪಕ್ಕದ ಕಾಲಂನಲ್ಲಿ ಜಮೀನಿನ ಇಳುವರಿಯ ಸರಾಸರಿ ಸಾಮರ್ಥ್ಯ ಬರುತ್ತದೆ. ಅದರಲ್ಲಿ ಇಳುವರಿ ಗುರಿ ನಮೂದಿಸುತ್ತಿದ್ದಂತೆ ಆ ಬೆಳೆಗೆ ಬೇಕಾದ ರಸಗೊಬ್ಬರ ಪ್ರಮಾಣ ದೊರೆಯುತ್ತದೆ. ಅದನ್ನು ಆಧರಿಸಿ ರೈತರು ಬೆಳೆಯಬಹುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದ ವಿಜ್ಞಾನಿ ಡಾ.ಪಿ.ಕೆ. ಬಸವರಾಜ ವಿವರಿಸಿದರು.

ಇಂದು ಲೋಕಾರ್ಪಣೆ
ಕೃಷಿ ಗಣಕವು ಕನ್ನಡ, ಇಂಗ್ಲಿಷ್‌, ಹಿಂದಿ, ತಮಿಳು ಸೇರಿದಂತೆ ಹತ್ತು ಭಾಷೆಗಳಲ್ಲಿ ಪರಿಚಯಿಸಲಾಗಿದೆ. ಭಾನುವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಈ ವೆಬ್‌ಸೈಟ್‌ ಅನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಪ್ರಯೋಗ ಯಶಸ್ವಿಯಾದರೆ, ಇದೇ ಮಾದರಿಯನ್ನು ದೇಶಾದ್ಯಂತ ಅಳವಡಿಸುವ ಬಗ್ಗೆ ಭಾರತೀಯ ಮಣ್ಣು ವಿಜ್ಞಾನ ಸಂಸ್ಥೆ ಚಿಂತನೆ ನಡೆಸಿದೆ. ಈ ಸಂಬಂಧ ಈಗಾಗಲೇ ಚರ್ಚೆ ಕೂಡ ನಡೆದಿದೆ ಎಂದು ಡಾ.ಬಸವರಾಜ ಹೇಳಿದರು.

ಒಂಬತ್ತು ಜಿಲ್ಲೆಗಳು ಯಾವುವು?
ತುಮಕೂರು, ಚಿತ್ರದುರ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿನ ಸುಮಾರು 10 ಸಾವಿರ ಮಣ್ಣಿನ ಮಾದರಿ ಸಂಗ್ರಹಿಸಲಾಗಿದೆ. ಕಂದಾಯ ಗ್ರಾಮಗಳ ಸಂಖ್ಯೆ ಆಧರಿಸಿ ಖುದ್ದು ತಜ್ಞರು ಸ್ಥಳಕ್ಕೆ ತೆರಳಿ ಮಾದರಿ ಸಂಗ್ರಹಿಸಿದ್ದಾರೆ. ಈ ತಂತ್ರಜ್ಞಾನವು ಶೇ. 70ರಷ್ಟು ನಿಖರತೆಯನ್ನು ಹೊಂದಿದೆ.

ಏನು ವ್ಯತ್ಯಾಸ?
ಮಣ್ಣಿನ ಆರೋಗ್ಯ ಕಾರ್ಡ್‌ ರೈತರ ಕೈಸೇರಲು ತಿಂಗಳು ಹಿಡಿಯುತ್ತದೆ. ಅಷ್ಟೊತ್ತಿಗೆ ಬಿತ್ತನೆಯಾಗಿ, ರಸಗೊಬ್ಬರವೂ ಹಾಕಲಾಗಿರುತ್ತದೆ. ಹಾಗಾಗಿ, ನಿರೀಕ್ಷಿತ ಪ್ರಯೋಜನ ಆಗುವುದಿಲ್ಲ. ಆದರೆ, “ಕೃಷಿ ಗಣಕ’ದಲ್ಲಿ ಕೆಲವೇ ನಿಮಿಷಗಳಲ್ಲಿ ರೈತನ ಅಂಗೈನಲ್ಲಿ ಈ ಮಾಹಿತಿ ಲಭ್ಯವಾಗುವುದರಿಂದ ಸಮಯ ಉಳಿತಾಯದ ಜತೆಗೆ ಇಳುವರಿ ಗುರಿ ಆಧಾರಿತ ರಸಗೊಬ್ಬರ ಪ್ರಮಾಣ ತಿಳಿಯಬಹುದು.

– ವಿಜಯಕುಮಾರ್‌ ಚಂದರಗಿ
 
ಟಾಪ್ ನ್ಯೂಸ್

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.