Fake Facebook Account: ಬಿಬಿಎಂಪಿ ಆಯುಕ್ತರ ಹೆಸರಲ್ಲಿ ಫೇಸ್‌ಬುಕ್ ಖಾತೆ ನಕಲಿ
Team Udayavani, Oct 13, 2024, 12:26 PM IST
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ದುರ್ಬಳಕೆ ಮಾಡಲು ಯತ್ನಿಸಿರುವ ಕುರಿತು ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಈ ಕುರಿತು ಕೇಂದ್ರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದಿದ್ದು, ಈ ಸಂಬಂಧ ದೂರುಗಳು ಬಂದ ಹಿನ್ನೆಲೆಯಲ್ಲಿ ಅ.11ರಂದು ಸಿಇಎನ್ ಪೊಲೀಸ್ ಠಾಣೆ(ಕೇಂದ್ರ ವಿಭಾಗ)ಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳ ವಂಚಕರು ತುಷಾರ್ ಗಿರಿನಾಥ್ ಅವರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆಯ ಹೆಸರನ್ನು ದುರು ಪಯೋಗಪಡಿಸಿಕೊಂಡು ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದಿದ್ದರು. ಈ ಖಾತೆ ಮೂಲಕ ಪಾಲಿಕೆಯ ಅಧಿಕಾರಿ ಹಾಗೂ ನೌಕರರಿಗೆ ಮತ್ತು ಸಾರ್ವಜನಿಕರಿಗೆ ವಂಚಿಸುವ ಸಾಧ್ಯತೆ ಇರುವುದರಿಂದ ಈ ಫೇಸ್‌ಬುಕ್ ಖಾತೆಯನ್ನು ಡಿಲೀಟ್ ಮಾಡಿಸಿ, ವಂಚಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.