Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Team Udayavani, Oct 15, 2024, 9:59 AM IST

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

ಬೆಂಗಳೂರು: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವಿನ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಸ್ತೂರಿನಗರ ನಿವಾಸಿ ಯೋಗೇಂದ್ರ ಸಿಂಗ್‌(26) ಕೊಲೆಯಾದವ. ಕೃತ್ಯ ಎಸಗಿದ ಆತನ ಸ್ನೇಹಿತ ಉಮೇಶ್‌(28) ಎಂಬಾತನನ್ನು ಬಂಧಿಸಲಾಗಿದೆ.ಈ ಸಂಬಂಧ ಮೃತನ ತಂದೆ ವಿಶ್ವನಾಥ್‌ ಸಿಂಗ್‌ ಎಂಬುವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

ದೂರುದಾರ ವಿಶ್ವನಾಥ್‌ ಸಿಂಗ್‌, ಪತ್ನಿ ಪುಷ್ಪಬಾಯಿ ಮತ್ತು ಇಬ್ಬರು ಮಕ್ಕಳ ಜತೆ ಕಸ್ತೂರಿನಗರದಲ್ಲಿ ವಾಸವಾಗಿದ್ದಾರೆ. ಪುತ್ರಿಗೆ ಮದುವೆಯಾಗಿದ್ದು, ದಂಪತಿ ಶ್ರೀರಾಮಪುರದಲ್ಲಿ ವಾಸವಾಗಿದ್ದಾರೆ. ವಿಶ್ವನಾಥ್‌ ಸಿಂಗ್‌ ಆಟೋ ಚಾಲಕನಾಗಿದ್ದು, ಪುಷ್ಪಬಾಯಿ ಗೃಹಿಣಿಯಾಗಿದ್ದಾರೆ. ಕೊಲೆಯಾದ ಪುತ್ರ ಯೋಗೇಂದ್ರ ಸಿಂಗ್‌ ಎಸ್‌ಎಸ್‌ಎಲ್‌ಸಿ ಓದಿದ್ದು, ಆಟೋ ಚಾಲನೆ ಮಾಡಿಕೊಂಡಿದ್ದ. 20 ದಿನಗಳ ಹಿಂದಷ್ಟೇ ಕೋಲಾರದ ನರಸಾಪುರದಲ್ಲಿರುವ ಸಾಫ್ಟ್ ವೇರ್‌ ಕಂಪನಿಯ ಮಿನಿ ಬಸ್‌ ಚಾಲಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದು, ಅಲ್ಲಿಯೇ ವಾಸವಾಗಿದ್ದ.

ದಸರಾ ರಜೆ ನಿಮಿತ್ತ ಅ.12ರಂದು ಮನೆಗೆ ಬಂದಿದ್ದಾನೆ. ಅ.13ರ ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದ ಯೋಗೇಂದ್ರ ಸಿಂಗ್‌, ರಾತ್ರಿ 9.30ರ ಸುಮಾರಿಗೆ ಮನೆಗೆ ವಾಪಸ್‌ ಬಂದಿದ್ದಾನೆ. ಆ ವೇಳೆ ತಾಯಿ ಪುಷ್ಪಾಬಾಯಿ ಆತನಿಗೆ ಬುದ್ಧಿವಾದ ಹೇಳಿ ನಾಳೆಯಿದ ನೀನು ಡ್ನೂಟಿಗೆ ಹೋಗಬೇಕು. ತಕ್ಷಣ ಕೋಲಾರಕ್ಕೆ ಹೊರಡು ಎಂದಿ ದ್ದಾರೆ.  ಆಗ ಯೋಗೇಂದ್ರಸಿಂಗ್‌, ಟಿಂಬರ್‌ ಯಾರ್ಡ್‌ ನಲ್ಲಿ ಕಂಪನಿಯ ಬಸ್‌ ನಿಲ್ಲಿಸಿದ್ದೇನೆ. ಬಸ್‌ನಲ್ಲಿ ಮಲಗಿ, ಬೆಳಗ್ಗೆ ಎದ್ದು ಹೋಗುತ್ತೇನೆ ಎಂದಿದ್ದಾನೆ.

ಈ ಮಧ್ಯೆ ಮನೆ ಸಮೀಪದ ಶಿವಣ್ಣ ಎಂಬುವರು, ಪುಷ್ಪಬಾಯಿಗೆ, ನಿಮ್ಮ ಮಗ ಕಲಾ ವೈನ್ಸ್‌ ಬಳಿ ಗಲಾಟೆ ಮಾಡಿಕೊಳ್ಳುತ್ತಿದ್ದಾನೆ ಎಂದು ಮಾಹಿತಿ

ನೀಡಿದ್ದಾರೆ. ಕೂಡಲೇ ಪರಿಚಯಸ್ಥ ಸಂತೋಷ್‌ ಎಂಬುವರ ಆಟೋದಲ್ಲಿ ವೈನ್ಸ್‌ ಸ್ಟೋರ್‌ಗೆ ಹೋದಾಗ ಯೋಗೇಂದ್ರಸಿಂಗ್‌ ರಕ್ತದ

ಮಡುವಿನಲ್ಲಿ ಬಿದ್ದಿದ್ದ. ಬಳಿಕ ತಂದೆ ವಿಶ್ವನಾಥ್‌ ಸಿಂಗ್‌ ಕೂಡ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ವೈನ್ಸ್‌ ಸ್ಟೋರ್‌ನ ಕ್ಯಾಶಿಯರ್‌ ಬಳಿ ವಿಚಾರಿಸಿದಾಗ ಉಮೇಶ್‌ ಎಂಬಾತ ಮದ್ಯದ ಬಾಟಲಿಯಿಂದ ಕೊಲೆಗೈದಿದ್ದಾನೆ ಎಂದು ಮಾಹಿತಿ ನೀಡಿದ್ದರು.

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.