ಪತ್ನಿಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಉಪನ್ಯಾಸಕ
Team Udayavani, Jun 2, 2017, 12:27 PM IST
ಬೆಂಗಳೂರು: ಕೌಟುಂಬಿಕ ಕಲಹದ ಜಗಳ ವಿಕೋಪಕ್ಕೆ ತಿರುಗಿ ಕಾಲೇಜು ಉಪನ್ಯಾಸಕರೊಬ್ಬರು ಪತ್ನಿಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದಿರುವ ಘಟನೆ ಇಂದಿರಾನಗರದಲ್ಲಿ ಗುರುವಾರ ರಾತ್ರಿ ನಡೆದಿದೆ. ಮಂಜುಳಾ (45) ಕೊಲೆಯಾದವರು. ಆರೋಪಿ ಮೈಲಾರಯ್ಯನನ್ನು (56) ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಕೆಜಿಎಫ್ನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಮೈಲಾರಯ್ಯ ದಂಪತಿಗೆ 17 ಹಾಗೂ 13ನೇ ವಯಸ್ಸಿನ ಇಬ್ಬರು ಗಂಡು ಮಕ್ಕಳಿದ್ದು ಇಂದಿರಾನಗರದ 14ನೇ ಕ್ರಾಸ್‌ನಲ್ಲಿನ ವಾಸವಿದ್ದರು. ದಂಪತಿ ನಡುವೆ ಹಲವು ವರ್ಷಗಳಿಂದ ಸಾಮರಸ್ಯವಿಲ್ಲದೆ ಜಗಳ ನಡೆಯುತ್ತಿದ್ದು ಡೈವೋರ್ಸ್ ಪಡೆದುಕೊಳ್ಳುವ ಹಂತಕ್ಕೆ ಬಂದಿತ್ತು ಎನ್ನಲಾಗಿದೆ.
ಇದೇ ವಿಚಾರಕ್ಕೆ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ದಂಪತಿ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಮೈಲಾರಯ್ಯ ಅವರು ಮಚ್ಚಿನಿಂದ ಎರಡು ಮೂರು ಬಾರಿ ಪತ್ನಿಯ ಕತ್ತಿಗೆ ಹೊಡೆದಿದ್ದಾರೆ. ಇದರಿಂದ ಕಿರುಚಿಕೊಂಡ ಲಕ್ಷ್ಮಮ್ಮ ಕುಸಿದು ಬಿದ್ದಿದ್ದಾರೆ. ಈ ವೇಳೆ ಮಕ್ಕಳಿಬ್ಬರು ಓಡಿ ಬಂದು ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರೂ ತೀವ್ರ ರಕ್ತಸ್ರಾವದಿಂದ ಆಕೆ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಬಂಧ ನೆರೆಮನೆಯವರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮನೆಯಲ್ಲಿಯೇ ಇದ್ದ ಆರೋಪಿ ಮೈಲಾರಯ್ಯನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.